ಬೆಂಗಳೂರು:ರಾಷ್ಟ್ರೀಕೃತ ಬ್ಯಾಂಕೊಂದರ ಕ್ಯಾಷಿಯರ್​ಗೆ 7 ವರ್ಷಗಳ ಕಠಿಣ ಶಿಕ್ಷೆ ಹಾಗೂ 2.19 ಕೋಟಿ ರೂ. ದಂಡ ವಿಧಿಸಿ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಬ್ಯಾಂಕ್ ಕ್ಯಾಷಿಯರ್​ ಬಿ. ದಿನೇಶ್ ಶಿಕ್ಷೆಗೊಳಗಾಗಿರುವ ಅಪರಾಧಿ.
ಮೈಸೂರು ಜಿಲ್ಲೆಯ ಪೆರಿಯಪಟ್ಟಣದಲ್ಲಿರುವ ರಾಷ್ಟ್ರೀಕೃತ ಬ್ಯಾಂಕೊಂದರ ಶಾಖೆಯಲ್ಲಿ ಹೆಡ್ ಕ್ಯಾಷಿಯರ್ ಆಗಿದ್ದ ದಿನೇಶ್​, ನೋಟು ಅಮಾನ್ಯೀಕರಣ ಸಂದರ್ಭದಲ್ಲಿ ಸರ್ಕಾರದ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿದ್ದರು.
ಡಿಮಾನಿಟೈಸೇಷನ್​ ಆಗಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಅಧಿಸೂಚನೆ ಉಲ್ಲಂಘಿಸಿ, ಅಮಾನ್ಯೀಕರಣಗೊಂಡ 2,18,46,300 ರೂ. ಮೊತ್ತದ ನೋಟುಗಳನ್ನು ಚಾಲ್ತಿಯಲ್ಲಿರುವ ಹಣಕ್ಕೆ ಬದಲಿಸಿಕೊಟ್ಟು ವಂಚನೆ ಎಸಗಿದ ಆರೋಪದ ಮೇಲೆ ದಿನೇಶ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಇಂದು ತೀರ್ಪಿತ್ತ ಸಿಬಿಐ ವಿಶೇಷ ನ್ಯಾಯಾಲಯ, ದಿನೇಶ್​ಗೆ 7 ವರ್ಷಗಳ ಕಠಿಣ ಶಿಕ್ಷೆ ಹಾಗೂ 2,19,35,000 ರೂ. ಕಠಿಣ ಶಿಕ್ಷೆ ವಿಧಿಸಿದೆ.
ಬೇರೆ ಖಾತೆದಾರರು ಜಮಾ ಮಾಡಿದ್ದ ಮೊತ್ತದಲ್ಲಿನ ಡಿನಾಮಿನೇಷನ್​ಗಳನ್ನು ಬದಲಿಸಿ, ಬೇರೊಬ್ಬರಿಗೆ ಹಣ ಪರಿವರ್ತಿಸಿಕೊಳ್ಳಲು ದಿನೇಶ್ ಕಾನೂನುಬಾಹಿರವಾಗಿ ಅನುಕೂಲ ಮಾಡಿಕೊಟ್ಟಿದ್ದ. ಈ ಸಂಬಂಧ 2016ರಲ್ಲಿ ಸಿಬಿಐ ಕೇಸು ದಾಖಲಿಸಿಕೊಂಡಿದ್ದು, 2017ರಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು.
ಬೆಂಗಳೂರು ಬಿಟ್ಟು ಹೈದರಾಬಾದ್​ಗೆ ಬನ್ನಿ ಎಂದ ತೆಲಂಗಾಣ ಸಚಿವ; ದಿಟ್ಟ ಉತ್ತರ ಕೊಟ್ಟ ಡಾ.ಕೆ.ಸುಧಾಕರ್
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eighteen − fifteen =
Remember me
