ಬೆಂಗಳೂರು:ಮುಜರಾಯಿ ಇಲಾಖೆ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಕಾಶಿ ಯಾತ್ರೆ ಸೇರಿದಂತೆ ಪುಣ್ಯ ಕ್ಷೇತ್ರಗಳಿಗೆ ತೆರಳುವ ರಾಜ್ಯದ ಜನತೆಗೆ ಸಿಹಿ ಸುದ್ದಿಯೊಂದನ್ನು ಇಂದು ಅಧಿಕೃತವಾಗಿ ಪ್ರಕಟಿಸಿದೆ.
ಇದನ್ನೂ ಓದಿ:ಪವನ್​ ಕಲ್ಯಾಣ್​ ಫ್ಯಾನ್ಸ್​ಗೆ ಸಂತಸದ ಸುದ್ದಿ; ರಿ-ರಿಲೀಸ್​ ಆಗಲಿವೆ ಈ ಎರಡು ಬ್ಲಾಕ್​ಬಸ್ಟರ್​ ಚಿತ್ರಗಳು!
ಕರ್ನಾಟಕ ಭಾರತ ಗೌರವ ಕಾಶಿ ದರ್ಶನ, ರೈಲು ಯಾತ್ರೆಯ ಮೂಲಕ ತೆರಳುವ ಪುಣ್ಯ ಕ್ಷೇತ್ರಗಳಾದ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗ್ ರಾಜ್ ಕ್ಷೇತ್ರಗಳ ಪ್ಯಾಕೇಜ್ ಯಾತ್ರೆಯಲ್ಲಿ ಈ ಬಾರಿ ಬಿಹಾರದ ಗಯಾ ಕ್ಷೇತ್ರದ ದರ್ಶನ ಸೇರ್ಪಡೆಗೊಳಿಸಿ, 8 ದಿನಗಳ ಪ್ರವಾಸವನ್ನು 9 ದಿನಗಳಿಗೆ ಹೆಚ್ಚಳ ಮಾಡಲಾಗಿದೆ. ಈ ಯೋಜನೆ ಅಡಿಯಲ್ಲಿ ಸದರಿ ಪ್ಯಾಕೇಜ್​ಗೆ ಈ ಹಿಂದೆ ನಿಗದಿ ಮಾಡಲಾಗಿದ್ದ ಸರ್ಕಾರದಿಂದ ನೀಡಲಾಗುವ ಸಹಾಯ ಧನ 5000/- ರೂ. ಮೊತ್ತವನ್ನು ಇದೀಗ 7500 ರೂ.ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ.
ಸದರಿ ಪ್ಯಾಕೇಜ್ ಯೋಜನೆಯಲ್ಲಿ ಹೊಸದಾಗಿ ಎಲ್​​ಎಚ್​ಬಿ ಕೋಚ್ ಗಳನ್ನು ಅಳವಡಿಸಲಾಗಿದ್ದು, ಇದರಲ್ಲಿ ಸುಸಜ್ಜಿತವಾದ ಅಡುಗೆ ಮನೆ ಹಾಗೂ ಇಬ್ಬರು ವೈದ್ಯರು ಸಹ ಯಾತ್ರಾರ್ಥಿಗಳ ಜೊತೆಯಲ್ಲಿ ಸೇವಾ ನಿರತರಾಗಿರುತ್ತಾರೆ.
ಇದನ್ನೂ ಓದಿ:ಕೆಎಎಸ್‌ ಅಧಿಕಾರಿಗಳ ಸಂಘದ ಕಲ್ಯಾಣ ನಿಧಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿಂಗಳ ವೇತನ ವಂತಿಗೆ
ಆಗಸ್ಟ್​​ನಲ್ಲಿ ಹೊರಡಲಿರುವ 5ನೇ ಟ್ರಿಪ್ ದಿನಾಂಕ 29.08.2023 ರಂದು ನಿರ್ಗಮನವಾಗಿ ದಿನಾಂಕ 06.09.2023 ರಂದು ಆಗಮನ. ಅಂತೆಯೇ ಸೆಪ್ಟೆಂಬರ್​ನಲ್ಲಿ ಹೊರಡಲಿರುವ 6ನೇ ಟ್ರಿಪ್ ದಿನಾಂಕ 23.09.2023 ರಂದು ನಿರ್ಗಮನ, ದಿನಾಂಕ 02.10.2023 ರಂದು ಆಗಮನವಿರುತ್ತದೆ. ಸದರಿ ಯಾತ್ರೆಗೆ ತುಮಕೂರಿನಲ್ಲಿ ಬೋರ್ಡಿಂಗ್ ಮತ್ತು ಡಿ-ಬೋರ್ಡಿಂಗ್ ವ್ಯವಸ್ಥೆಯನ್ನು ಹೊಸದಾಗಿ ಕಲ್ಪಿಸಲಾಗಿರುತ್ತದೆ.
ಅಯೋಧ್ಯೆಗೆ ಭೇಟಿ ನೀಡುವ ರಾಜ್ಯದ ಭಕ್ತರ ಅನುಕೂಲಕ್ಕಾಗಿ ಕರ್ನಾಟಕ ಭವನ ವಸತಿ ಸಂಕೀರ್ಣ ನಿರ್ಮಾಣ ಮಾಡಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರಿಗೆ ಸುಮಾರು 5 ಎಕರೆ ಭೂಮಿ ಮಂಜೂರು ಮಾಡುವಂತೆ ಪತ್ರ ಬರೆದು ಕೋರಲಾಗುವುದು. ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಮುಜರಾಯಿ ಇಲಾಖೆರವರು ಸಮನ್ವಯ ಸಾಧಿಸಿ ತ್ವರಿತ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.
ಇದನ್ನೂ ಓದಿ:ಏಕದಿನ ಕ್ರಿಕೆಟ್‌ನಲ್ಲಿ ನನ್ನ ದಾಖಲೆ ಉತ್ತಮವಾಗಿಲ್ಲ ಎಂದ ಚುಟುಕು ಕ್ರಿಕೆಟ್‌ನ ವಿಶ್ವ ನಂ.1 ಬ್ಯಾಟರ್
ರಾಜ್ಯದ ದೇವಸ್ಥಾನಗಳ ಪೂಜಾ ಕಾರ್ಯ ಇತ್ಯಾದಿಗಳ ಕೆಲಸಕ್ಕೆಂದು ಸರ್ಕಾರ ಬಿಡುಗಡೆ ಮಾಡುವ ‘ತಸ್ತಿಕ್’ ಹಣವನ್ನು ನೇರವಾಗಿ ಅರ್ಚಕರ ಬ್ಯಾಂಕ್ ಖಾತೆಗೆ ವರ್ಗಾಯಿಸಲು ಸೂಚನೆ ನೀಡಲಾಗಿದೆ.
ಪವನ್​ ಕಲ್ಯಾಣ್​ ಫ್ಯಾನ್ಸ್​ಗೆ ಸಂತಸದ ಸುದ್ದಿ; ರಿ-ರಿಲೀಸ್​ ಆಗಲಿವೆ ಈ ಎರಡು ಬ್ಲಾಕ್​ಬಸ್ಟರ್​ ಚಿತ್ರಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
