ಮೈಸೂರು:ಜಿಲ್ಲಾಧಿಕಾರಿ ಕಚೇರಿ ಬಳಿ ಹಾಡಹಗಲಲ್ಲೇ ರಾಜಾರೋಷವಾಗಿ ಕಬ್ಬಿಣದ ತಂತಿಯ ಉರುಳು ಹಾಕಿ ಪ್ರಾಣಿ-ಪಕ್ಷಿಗಳನ್ನು ಬೇಟೆಯಾಡುತ್ತಿದ್ದಾರೆ. ದುಷ್ಕರ್ಮಿಗಳ ಕೃತ್ಯ ಸ್ಥಳೀಯರ ಮೊಬೈಲ್​ನಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್​ ಆಗಿದೆ. ಮರುಕ ವ್ಯಕ್ತಪಡಿಸಿರುವ ಸಾರ್ವಜನಿಕರು, ಜಿಲ್ಲಾಧಿಕಾರಿ ಕಚೇರಿ ಬಳಿಯೇ ಪ್ರಾಣಿ-ಪಕ್ಷಿಗಳಿಗೆ ರಕ್ಷಣೆ ಇಲ್ಲವೇ? ಮೂಕ ಪ್ರಾಣಿಗಳ ರೋದನೆ ಕೇಳಿಸುವುದಿಲ್ಲವೇ? ಎಂದು ಆಕ್ರೋಶ ಹೊರಹಾಕಿದ್ದಾರೆ. ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಮೈಸೂರು ಜಿಲ್ಲಾಧಿಕಾರಿ ಕಚೇರಿ ಸಮೀಪ ರಸ್ತೆ ಬದಿಯ ಮರಗಳಿಗೆ ತಂತಿ ಉರುಳನ್ನು ಸುತ್ತಿರುವ ಬೇಟೆಗಾರರು ದೂರದಲ್ಲೇ ಹೊಂಚು ಹಾಕುತ್ತಾ ಕುಳಿತಿರುತ್ತಾರೆ. ಅಳಿಲು ಸೇರಿದಂತೆ ಪಕ್ಷಿಗಳು ಉರುಳಿಗೆ ಸಿಲುಕುತ್ತಿದ್ದಂತೆ ಅವುಗಳನ್ನು ಹಿಡಿದುಕೊಂಡು ಕ್ಷಣಾರ್ಧದಲ್ಲೇ ಪರಾರಿಯಾಗುತ್ತಾರೆ. ಉರುಳಿಗೆ ಸಿಲುಕಿ ಒದ್ದಾಡುತ್ತಿದ್ದ ಅಳಿಲಿನ ದೃಶ್ಯ ನೋಡಿದ್ರೆ ಮನಕಲಕುತ್ತೆ. ಉರುಳಿಗೆ ಸಿಲುಕಿದ್ದ ಅಳಿಲಿನ ಸಮೇತ ಬೇಟೆಗಾರರು ಹೋಗುತ್ತಿರುವ ದೃಶ್ಯವೂ ವಿಡಿಯೋದಲ್ಲಿದೆ.
ರಾಜ್ಯದಲ್ಲಿ ಬೆರಕೆ ಸರ್ಕಾರ ಬರೋದು ಗ್ಯಾರಂಟಿ.. ದೇಶಕ್ಕೆ ಕೇಡು ಖಚಿತ… ಹಾಸನಾಂಬೆ ಸನ್ನಿಧಿಯಲ್ಲಿ ಬ್ರಹ್ಮಾಂಡ ಗುರೂಜಿ ಭವಿಷ್ಯ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಜಗತ್ತಿನ ಅತಿ ದೊಡ್ಡ ನಾಗರಿಕ ವಿಮಾನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 15 =
Remember me
