ಗದಗ:ಕೋಮುಸಾಮರಸ್ಯದ ಪ್ರತೀಕ ಎನಿಸಿರುವ ಶಿರಹಟ್ಟಿಯ ಶ್ರೀ ಜಗದ್ಗುರು ಫಕೀರೇಶ್ವರ ಸಂಸ್ಥಾನ ಮಠಕ್ಕೆ ಬಾಲೇಹೊಸೂರಿನ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಅವರನ್ನು 14ನೇ ಉತ್ತರಾಧಿಕಾರಿಯನ್ನಾಗಿ ಶುಕ್ರವಾರ ನೇಮಕ ಮಾಡಲಾಯಿತು.
ಶಿರಹಟ್ಟಿಯ ಶ್ರೀಮಠದ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಉತ್ತರಾಧಿಕಾರಿ ಸ್ವೀಕಾರ ಸಮಾರಂಭದಲ್ಲಿ ಹರಗುರು ಚರಮೂರ್ತಿಗಳು ಹಾಗೂ ಅಪಾರ ಭಕ್ತರ ಸಮ್ಮುಖದಲ್ಲಿ ಶ್ರೀ ಫಕೀರ ಸಿದ್ಧರಾಮ ಸ್ವಾಮೀಜಿ ಅವರು ನೂತನ ಉತ್ತರಾಧಿಕಾರಿ ಹೆಸರನ್ನು ಘೋಷಿಸಿದರು.
ಪ್ರಗತಿಪರ ವಿಚಾರಧಾರೆಗಳ ಮೂಲಕ ನಾಡಿನಲ್ಲಿ ಹೆಸರು ಮಾಡಿರುವ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಅವರನ್ನು ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಎಂದು ನಾಮಕರಣ ಮಾಡಲಾಗಿದೆ ಎಂದು ಶ್ರೀ ಫಕೀರ ಸಿದ್ಧರಾಮ ಸ್ವಾಮೀಜಿ ಹೇಳಿದರು.
ಮಂಟೂರಿನ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ, ಮುಳ್ಳಹಳ್ಳ ಬೊಮ್ಮನಹಳ್ಳಿಯ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ, ಬಸಣ್ಣ ಅಜ್ಜನವರು, ಶ್ರೀ ಚಂದ್ರಶೇಖರ ದೇವರು, ಶ್ರೀ ಚನ್ನವೀರ ಸ್ವಾಮೀಜಿ, ಶ್ರೀ ರಾಚೋಟೇಶ್ವರ ಸ್ವಾಮೀಜಿ, ಶ್ರೀ ಶಿವಬಸವ ಸ್ವಾಮೀಜಿ ಹನುಮನಾಳ, ಶ್ರೀ ಲಡ್ಡುಮುತ್ಯಾ, ಬೂದೀಶ್ವರ ಸ್ವಾಮೀಜಿ, ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ, ಜಿ.ಎಸ್. ಗಡ್ಡದೇವರಮಠ, ಡಿ.ಎನ್.ಡಬಾಲಿ, ಐ.ಎಸ್.ಚಿಕ್ಕನಗೌಡ, ವಿ.ವಿ.ಕಪ್ಪತ್ತನವರ, ಅಪ್ಪಸಾಹೇಬ ದಲವಾಯಿ, ಪಿ.ಎಚ್.ನೀರಲಕೇರಿ, ಗುರುರಾಜ ಹುಣಸೀಮರದ ಸೇರಿ ಹಲವರು ಭಾಗವಹಿಸಿದ್ದರು.
ಮದ್ವೆ ಮನೆಯಲ್ಲಿ ಕೊರಗಜ್ಜನ ವೇಷ ಧರಿಸಿ ಕುಣಿತ: ತಲೆಮರೆಸಿಕೊಂಡಿದ್ದ ಮದುಮಗ ಕೊನೆಗೂ ಸಿಕ್ಕಿಬಿದ್ದ

ಮಗಳ ಜತೆ ತಾಯಿ ಆತ್ಮಹತ್ಯೆ! 10 ದಿನದ ಹಿಂದೆ ವಿದ್ಯಾರ್ಥಿನಿಯೊಬ್ಬಳ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡದ್ದೇ ಮುಳುವಾಯ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − two =
Remember me
