ಹಾವೇರಿ:ಗ್ರಾಮ ಪಂಚಾಯಿತಿ ಸದಸ್ಯತ್ವಕ್ಕೆ ಶ್ರೀ ಪ್ರಣವಾನಂದ ಸ್ವಾಮೀಜಿ ರಾಜೀನಾಮೆ ಘೋಷಿಸಿದ್ದಾರೆ.
ರಾಣೆಬೆನ್ನೂರು ತಾಲೂಕು ಅರೆಮಲ್ಲಾಪುರದ ಶರಣಬಸವೇಶ್ವರ ಮಠದ ಪೀಠಾಧಿಕಾರಿಯಾಗಿರುವ ಶ್ರೀಗಳು ಕಳೆದ ಗ್ರಾಪಂ ಚುನಾವಣೆಯಲ್ಲಿ 2ನೇ ವಾರ್ಡಿನ ಸದಸ್ಯರಾಗಿ ಆಯ್ಕೆಯಾಗಿದ್ದರು. ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ರಾಜ್ಯದ ಮೊದಲ ಮಾಠಾಧೀಶರು ಎಂಬ ಕೀರ್ತಿಗೂ ಪಾತ್ರರಾಗಿದ್ದರು.
ರಾಜೀನಾಮೆ ಕುರಿತು ಹಾವೇರಿಯಲ್ಲಿ ದಿಗ್ವಿಜಯ ನ್ಯೂಸ್ ಜತೆ ಮಾತನಾಡಿದ ಶ್ರೀಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನಗಳು ಜನರ ಮನೆಗೆ ಸೇರುತ್ತಿಲ್ಲ. ರಾಜ್ಯದ ಗ್ರಾಮೀಣಾಭಿವೃದ್ಧಿ ಇಲಾಖೆ ಸತ್ತ ಇಲಾಖೆ, ಭ್ರಷ್ಟಾಚಾರ ತುಂಬಿ ತುಳುಕುತ್ತಿರುವ ಇಲಾಖೆ. ಪಿಡಿಒನಿಂದ ಹಿಡಿದು ಎಲ್ಲರೂ ಹಗರಣದಲ್ಲಿ ಮುಳುಗಿದ್ದಾರೆ. ಇಒ ಮತ್ತು ಸಿಇಒಗಳಿಗೆ ದುಡ್ಡು ಮಾಡಿ ಕೊಡಲು ಇರುವ ಪೋಸ್ಟ್ ಪಿಡಿಒ. ಪಿಡಿಒ ಗ್ರಾಮ ಪಂಚಾಯತ್​ಗೆ ಕಂಟಕವಾಗಿದೆ. ಪಿಡಿಒಗಳು ಜನರ ಜೀವನದ ಜೊತೆ ಚೆಲ್ಲಾಟವಾಡ್ತಿದಾರೆ. ಜನರಿಗೆ ನ್ಯಾಯ ಕೊಡಿಸಲು ಸಾಧ್ಯವಾಗ್ತಿಲ್ಲ. ಗ್ರಾಮ ಪಂಚಾಯಿತಿ ಸಭೆಯಲ್ಲಿ ಮಾಹಿತಿ ಕೇಳಿದ್ರೆ ಜೀವ ಬೆದರಿಕೆ ಹಾಕುತ್ತಾರೆ ಎಂದು ಗಂಭೀರ ಆರೋಪ ಮಾಡಿದರು.
ಆಳ್ವಿಕೆ ವ್ಯವಸ್ಥೆಯಿಂದ ಆಡಳಿತ ವ್ಯವಸ್ಥೆ ಬರಬೇಕೆಂದು ಪ್ರಯತ್ನ ಪಟ್ಟೆ. 40% ಅಲ್ಲಾ, 100% ಪರ್ಸೆಂಟ್ ಭ್ರಷ್ಟಾಚಾರ ಇದೆ. ರಾಜೀನಾಮೆ ಬಳಿಕ ಸುಪ್ರೀಂ ಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿಯಡಿ ದೂರು ದಾಖಲಿಸುವೆ. ಗ್ರಾಮ ಪಂಚಾಯಿತಿ ಸದಸ್ಯರಾಗಲು ವಿದ್ಯಾರ್ಹತೆ ಮಾಡಲು ಹೋರಾಟ ಮಾಡುವೆ ಎಂದು ವಿವರಿಸಿದರು.(ದಿಗ್ವಿಜಯ ನ್ಯೂಸ್​, ಹಾವೇರಿ)
ಧರ್ಮಸ್ಥಳದಲ್ಲಿ ರೂಂ ಸಿಗಲಿಲ್ಲವೆಂದು ಸುಬ್ರಹ್ಮಣ್ಯಕ್ಕೆ ಹೊರಟಿದ್ದ ಭಿನ್ನಕೋಮಿನ ಜೋಡಿಗೆ ಮಾರ್ಗದಲ್ಲೇ ಕಾದಿತ್ತು ಶಾಕ್​

ಚಾಕು ಹಾಕಿದವರಿಗೆ ಹಾರ ಹಾಕಿ ಸನ್ಮಾನ ಮಾಡಲು ಸಾಧ್ಯವಿಲ್ಲ: ವಿಜಯೇಂದ್ರ

ನಿನ್ನೆ ಶಿವಮೊಗ್ಗ, ಇಂದು ಭದ್ರಾವತಿ… ನಿಷೇಧಾಜ್ಞೆ ನಡುವೆಯೂ ಮತ್ತೊಬ್ಬ ಯುವಕನ ಮೇಲೆ ಹಲ್ಲೆ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:8 + 5 =
Remember me
