ಬೆಂಗಳೂರು:40 ವರ್ಷ ರಾಜ್ಯದಲ್ಲಿ ಬಿ.ಎಸ್​.ಯಡಿಯೂರಪ್ಪ ತಳಮಟ್ಟದಿಂದ ಬಿಜೆಪಿ ಪಕ್ಷ ಕಟ್ಟಿ ಅಧಿಕಾರಕ್ಕೆ ತಂದಿದ್ದಾರೆ. ಧರ್ಮದ ವಿರುದ್ಧ ಯಾರೂ ನಡೆದುಕೊಳ್ಳಬಾರದು. ವೀರಶೈವ ಲಿಂಗಾಯತ ಸಮುದಾಯದ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಧರ್ಮ ಉಳಿಯಬೇಕಾದರೆ ರಾಜಕೀಯಕ್ಕೆ ಬರಲೂ ಸಿದ್ಧ ಎಂದು ಕೊಳದ ಮಠದ ಶಾಂತವೀರ ಮಹಾಸ್ವಾಮಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಶೀಘ್ರದಲ್ಲೇ ಪ್ರಧಾನಿ ಅವರ ಬಳಿ ಸಾಧು ಸಮಾಜದ ವತಿಯಿಂದ ನಿಯೋಗ ಹೋಗಲಾಗುವುದು. ಯಾವುದೇ ಕಾರಣಕ್ಕೂ ಬಿಎಸ್​ವೈ ಅವರನ್ನು ಬದಲಾವಣೆ ಮಾಡದಂತೆ ಮನವಿ ಮಾಡುತ್ತೇವೆ. ಒಂದು ವೇಳೆ ಬದಲಾವಣೆ ಆಗಿದ್ದೇ ಆದರೆ ಅದೇ ಸಮುದಾಯಕ್ಕೆ ಮಣೆ ಹಾಕಿ ಎಂದು ಮನವಿ ಮಾಡಲಾಗುವುದು. ವೀರಶೈವ ಲಿಂಗಾಯಿತ ಸಮುದಾಯಕ್ಕೆ ಸಿಎಂ ಸ್ಥಾನ ಸಿಗದಿದ್ದರೆ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಸಿದರು.
ದಕ್ಷಿಣ ಭಾರತದಲ್ಲಿ ಆಡಳಿತಕ್ಕೆ ಬಿಜೆಪಿ ಬರಲು ಯಡಿಯೂರಪ್ಪ ಅವರೇ ಕಾರಣ. ಒಂದು ವೇಳೆ ಬಿಎಸ್​ವೈ ಅವರನ್ನ ಕೆಳಗಿಳಿಸಬೇಕೆಂದರೆ ಅದೇ ಸಮುದಾಯಕ್ಕೆ ಸಿಎಂ ಸ್ಥಾನ ಕೊಡಿ. ಬಿಜೆಪಿಯಲ್ಲಿ 50ಕ್ಕೂ ಹೆಚ್ಚು ವೀರಶೈವ ಲಿಂಗಾಯಿತ ಶಾಸಕರು ಇದ್ದಾರೆ. ಅರವಿಂದ್ ಬೆಲ್ಲದ, ಯತ್ನಾಳ್, ಬೊಮ್ಮಾಯಿ ಅವರನ್ನೂ ಪರಿಗಣಿಸಿ. ಬೇರೆ ಸಮುದಾಯದವರನ್ನ ಸಿಎಂ ಮಾಡಿದರೆ ಬಿಜೆಪಿಗೆ ರಾಜ್ಯದಲ್ಲಿ ಉಳಿಗಾಲವಿಲ್ಲ. ವೀರಶೈವ ಲಿಂಗಾಯಿತರಿಗೆ ಮೋಸ ಮಾಡಿದರೆ 2000 ಮಠಾಧೀಶರು ಇದರ ವಿರುದ್ಧ ಇದ್ದಾರೆ ಎಂದು ಶ್ರೀಗಳು ಎಚ್ಚರಿಸಿದರು.
ಇದೆಂಥಾ ದುರ್ಬುದ್ಧಿ… ಆಂಬುಲೆನ್ಸ್​ಗೆ ದಾರಿ ಬಿಡದೆ ತೊಂದರೆ ಕೊಟ್ಟ
ಆ ಪ್ರಾಪರ್ಟಿ ದೊಡ್ಡಮನೆಯವರದ್ದು, ಹಾಗಾಗಿ ದರ್ಶನ್​ಗೆ ಆಸ್ತಿ ಕೊಡಲ್ಲ ಅಂದೆ…
ಭವಿಷ್ಯ ಕಟ್ಟಿಕೊಳ್ಳಲು ಹುಟ್ಟೂರು ಬಿಟ್ಟು ಬಂದಿದ್ದ ಅಣ್ಣ-ತಂಗಿ ನಿದ್ರೆಯಲ್ಲಿರುವಾಗಲೇ ಹೆಣವಾದರು!


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
