ಕೋಲಾರ:ಶ್ರೀರಾಮನವಮಿ ಪ್ರಯುಕ್ತ ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದಲ್ಲಿ ಶುಕ್ರವಾರ ಸಂಜೆ ನಡೆಯುತ್ತಿದ್ದ ಶೋಭಾಯಾತ್ರೆ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು, ಸ್ಥಳದಲ್ಲಿ ಪ್ರಕ್ಷ್ಯುಬ್ಧ ವಾತಾವರಣ ಸೃಷ್ಟಿಯಾಗಿದೆ. ಕೋಲಾರದಲ್ಲಿ ನಾಳೆ(ಭಾನುವಾರ) ನಡೆಯಬೇಕಿದ್ದ ಶೋಭಾಯಾತ್ರೆಯನ್ನು ರದ್ದು ಮಾಡಲಾಗಿದೆ. ಶ್ರೀರಾಮ ನವಮಿ‌ ಆಚರಣೆಗೆ ಮಾತ್ರ ಅವಕಾಶ ನೀಡಲಾಗಿದೆ.
ಮುಳಬಾಗಿಲು ಪಟ್ಟಣದಲ್ಲಿ ಲವಕುಶ ಜನ್ಮಭೂಮಿ ಪುಣ್ಯಕ್ಷೇತ್ರ ಟ್ರಸ್ಟ್​ ವತಿಯಿಂದ ಶ್ರೀರಾಮನವಮಿ ಪ್ರಯುಕ್ತ ಅದ್ದೂರಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಈ ಹಿನ್ನೆಲೆ ಶುಕ್ರವಾರ ಸಂಜೆ ಪಟ್ಟಣದಲ್ಲಿ ಶೋಭಾಯಾತ್ರೆ ಸಾಗುತ್ತಿದ್ದಾಗ ಜಹಂಗೀರ್​ ಸರ್ಕಲ್​ ಬಳಿ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಕತ್ತಲು ವೇಳೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಕಾರು​ ಮತ್ತು ಪೊಲೀಸರ ವಾಹನಗಳ ಮೇಲೂ ಕಲ್ಲು ತೂರಿ ಪರಾರಿಯಾಗಿದ್ದಾರೆ. ಪರಿಸ್ಥಿತಿ ನಿಯಂತ್ರಿಸಿಲು ಪೊಲೀಸರು ಲಾಠಿ ಚಾರ್ಜ್​ ಮಾಡಿದ್ದು, ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಮುಳಬಾಗಿಲಿನಲ್ಲಿ ನಿಷೇಧಾಜ್ಞೆ ಜಾರಿಯಾಗಿದೆ.
ಘಟನೆ ಸಂಬಂಧ ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ಮೂರು ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದೇವೆ. 9 ಜನರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದೇವೆ. 30 ಬೈಕ್​ಗಳನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಸಿಸಿ ಟಿವಿ ಪರಿಶೀಲನೆ ನಡೆಯುತ್ತಿದೆ, ಕಿಡಿಗೇಡಿಗಳನ್ನು ಪತ್ತೆ ಹಚ್ಚುತ್ತೇವೆ ಎಂದು ಕೋಲಾರ ಎಸ್ಪಿ ದೇವರಾಜ್ ಹೇಳಿದ್ದಾರೆ.
ಖಾಸಗಿ ವಾಹನಕ್ಕೆ ಸರ್ಕಾರಿ ಲಾಂಛನ-ನಾಮಫಲಕ ಹಾಕಿಕೊಂಡು ಪ್ರವಾಸಕ್ಕೆ ಬಂದ ಗ್ರಾಪಂ ಅಧ್ಯಕ್ಷ!

BJP ಸರ್ಕಾರದಲ್ಲಿ HDK ಅವರೇ ಪ್ರಭಾವಿ? ತಹಸೀಲ್ದಾರ್​ ಎತ್ತಂಗಡಿಗೆ ಕೈ ಹಾಕಿದ CPYಗೆ ಕೆಲವೇ ಗಂಟೆಯಲ್ಲಿ ಶಾಕ್

ಬಿದನಗೆರೆಯಲ್ಲಿ ಮೊಳಗಿದೆ ಹನುಮ ನಾಮ ಸ್ಮರಣೆ: 161 ಅಡಿ ಎತ್ತರದ ಪಂಚಮುಖಿ ಆಂಜನೇಯ ವಿಗ್ರಹ ಲೋಕಾರ್ಪಣೆ ನಾಳೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
