ಬೆಂಗಳೂರು:ಮಾ.28 ರಿಂದ ಏ.11ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಎಲ್ಲ ವಿದ್ಯಾರ್ಥಿಗಳೂ ಸಮವಸ್ತ್ರ ಧರಿಸಿಯೇ ಎಕ್ಸಾಂಗೆ ಹಾಜರಾಗಬೇಕು. ಹಿಜಾಬ್​ ಧರಿಸಿ ಬಂದವರಿಗೆ ಪರೀಕ್ಷೆಗೆ ಪ್ರವೇಶ ಇಲ್ಲ ಎಂದು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಹಿಜಾಬ್​ ಕುರಿತು ಹೈಕೋರ್ಟ್​ ನೀಡಿರುವ ತೀರ್ಪನ್ನು ಪಾಲಿಸುತ್ತಿರುವ ಶಿಕ್ಷಣ ಇಲಾಖೆ, ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಿಜಾಬ್​ ಧರಿಸಿ ಬಂದವರಿಗೆ ಪರೀಕ್ಷಾ ಕೇಂದ್ರಗಳಿಗೆ ಪ್ರವೇಶ ಕಲ್ಪಿಸುವುದಿಲ್ಲ ಎಂದಿದೆ. ಹಿಜಾಬ್​ ಧರಿಸಿಯೇ ಬರುತ್ತೇವೆ ಎನ್ನುವರು ಅನಿವಾರ್ಯವಾಗಿ ಪರೀಕ್ಷೆಯಿಂದ ಹೊರಗುಳಿಯಬೇಕಾಗುತ್ತದೆ.
ಹಿಜಾಬ್​ ವಿಚಾರದಲ್ಲಿ ಹೈಕೋರ್ಟ್​ ನೀಡಿರುವ ತೀರ್ಪು ಪಾಲಿಸಿಸುತ್ತಿದ್ದು, ಹಿಜಾಬ್​ ಧರಿಸಿ ಬದವರಿಗೆ ಪರೀಕ್ಷೆಗೆ ಪ್ರವೇಶ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್​ ಹೇಳಿದ್ದಾರೆ.
ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 15,387 ಶಾಲೆಗಳಿಂದ 8,73,846 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 4,52,732 ಗಂಡು ಮತ್ತು 4,21,110 ಹೆಣ್ಣು ಮಕ್ಕಳಿದ್ದು, 4 ವಿದ್ಯಾರ್ಥಿಗಳು ತೃತೀಯ ಲಿಂಗಿಗಳಾಗಿದ್ದಾರೆ. 3,444 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈಗಾಗಲೇ ಪ್ರವೇಶಪತ್ರ ಬಿಡುಗಡೆ ಮಾಡಿದ್ದು, ವಿದ್ಯಾರ್ಥಿಗಳು ಡೌನ್​ಲೋಡ್​ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬೇಕು.
ಸಹಾಯವಾಣಿ:ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದ್ದು, ಮಾ.27ರವರೆಗೆ ಬೆಳಗ್ಗೆ 9.30ರಿಂದ ಸಂಜೆ 6 ಗಂಟೆವರೆಗೆ ಕಾರ್ಯನಿರ್ವಹಿಸುತ್ತದೆ. ಸಹಾಯವಾಣಿ ಸಂಖ್ಯೆ: 080-23310075, 76 ಅನ್ನು ಸಂಪರ್ಕಿಸಬಹುದು.
ಮಾಸ್ಕ್​ ಕಡ್ಡಾಯ ಅಲ್ಲ:ಕರೊನಾ ಸೋಂಕಿನ ಪ್ರಕರಣಗಳು ಕಡಿಮೆ ಆಗಿರುವುದರಿಂದ ವಿದ್ಯಾರ್ಥಿಗಳು ಮಾಸ್ಕ್​ ಧರಿಸಿಸದೇ ಇದ್ದರೂ ಪ್ರವೇಶ ಕಲ್ಪಿಸಲು ನಿರ್ಧರಿಸಿದೆ. ಪರೀಕ್ಷೆ ವೇಳೆ ಪ್ರಮಾಣಿತ ಕಾರ್ಯಾಚರಣಾ ವಿಧಾನ (ಎಸ್​ಒಪಿ) ಅನುಸರಿಸಲು ಸೂಚಿಸಲಾಗಿದೆ.
ಏ.21ರ ನಂತರ 34 ಜಿಲ್ಲೆಗಳಲ್ಲಿ 234 ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಲಿದೆ. ಮೇ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲು ಕ್ರಮವಹಿಸಲಾಗಿದೆ.
ಕುಡಿದು ಸಿಟ್ಟಿನಿಂದ ಸಿಎಂಗೆ ಬೈದಿದ್ದೀನಿ… ದಯವಿಟ್ಟು ಕ್ಷಮಿಸಿ: ಶಾಬಾಜ್​ ಉಲ್ಲಾಖಾನ್​

ವಿದ್ಯಾರ್ಥಿಗಳಿಗೆ ಕೆಜಿಎಫ್​ ಬಾಬು ಕೊಟ್ಟ ಚೆಕ್​ಗಳು ಬೌನ್ಸ್: ಮಕ್ಕಳಿಗೆ ಡಿಡಿ ವಿತರಿಸಿ ಕ್ಷಮೆ ಕೇಳಿದ ಪತ್ನಿಯರು

ಬೀಗರ ಮನೆಯಲ್ಲಿ ಊಟ ಮುಗಿಸಿ ಮಂಡ್ಯದಿಂದ ಬೆಂಗ್ಳೂರಿಗೆ ಹೊರಟಿದ್ದ ಇಬ್ಬರು ಮಾರ್ಗಮಧ್ಯೆ ದುರ್ಮರಣ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:1 × four =
Remember me
