ಬೆಂಗಳೂರು:2020-21ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಎಸ್ಸೆಸ್ಸೆಲ್ಸಿ ರಿಸಲ್ಟ್​ ನೋಡಲು ವೆಬ್​ಸೈಟ್​ ಓಪನ್​ ಆಗುತ್ತಿಲ್ಲ.
ಎಸ್ಸೆಸ್ಸೆಲ್ಸಿ ಬೋರ್ಡ್‌ಗೆ ನೋಂದಣಿಯಾಗಿರುವ ಮೊಬೈಲ್‌ ಸಂಖ್ಯೆಗೆ ಶಿಕ್ಷಣ ಇಲಾಖೆಯಿಂದ ಆಯಾ ಮಕ್ಕಳ ಫಲಿತಾಂಶದ ಮೆಸೇಜ್‌ ಬರುತ್ತದೆ ಎಂದು ಹೇಳಲಾಗಿತ್ತು. ಆದರೆ, ಇದುವರೆಗೆ ಮೆಸೇಜ್‌ ಕೂಡ ಬಾರದೇ, ವೆಬ್‌ಸೈಟ್‌ ಕೂಡ ಓಪನ್‌ ಆಗದೇ ಇರುವ ಕಾರಣ ವಿದ್ಯಾರ್ಥಿಗಳು ಮತ್ತು ಪಾಲಕರಲ್ಲಿ ಟೆನ್ಷನ್‌ ಇನ್ನಷ್ಟು ಹೆಚ್ಚಾಗಿದೆ.
ಇದಾಗಲೇ ತಮಗೆ ಎಷ್ಟು ಅಂಕ ಬರಬಹುದು? ಎಂದು ವಿದ್ಯಾರ್ಥಿಗಳು ಊಹಿಸಿದ್ದರೂ ಇಂಟರ್ನಲ್‌ ಮಾರ್ಕ್ಸ್‌ಗಳನ್ನು ಶಾಲೆಗಳು ಕೊಡಬೇಕಿರುವ ಹಿನ್ನೆಲೆಯಲ್ಲಿ ತಮಗೆ ಎಷ್ಟು ಅಂಕ ಬಂದಿದೆ ಎಂಬ ಬಗ್ಗೆ ತಿಳಿಯುವ ಕುತೂಹಲದಲ್ಲಿ ವಿದ್ಯಾರ್ಥಿಗಳು ಇದ್ದಾರೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‌ಸೈಟ್ ಅನ್ನು ಲಕ್ಷಾಂತರ ಮಂದಿ ಒಮ್ಮೆಲೆ ಕ್ಲಿಕ್​ ಮಾಡುತ್ತಿರುವ ಪರಿಣಾಮ ಹ್ಯಾಂಗ್​ ಆಗಿದ್ದು, ಫಲಿತಾಂಶ ನೋಡಲು ಚಾತಕಪಕ್ಷಿಯಂತೆ ಕಾಯುತ್ತಿರುವ ವಿದ್ಯಾರ್ಥಿಗಳು ಮತ್ತು ಪಾಲಕರಿಗೆ ಆತಂಕ ಮೂಡಿಸಿದೆ. ಪ್ರತಿ ವರ್ಷವೂ ಇದೇ ಸಮಸ್ಯೆ ಎದುರಾಗುತ್ತಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಓರ್ವ ವಿದ್ಯಾರ್ಥಿ ಬಿಟ್ಟು ಎಲ್ಲರೂ ಪಾಸ್​! ಯಾರಿಗೆ ಯಾವ ಗ್ರೇಡ್​? ಇಲ್ಲಿದೆ ಮಾಹಿತಿ

ನನ್ನ ತಾಯಾಣೆ.. ಅಷ್ಟೊಂದು ಹಣವನ್ನು ಜೀವನದಲ್ಲಿ ನೋಡಿಯೇ ಇರಲಿಲ್ಲ: ಮಂಜು ಪಾವಗಡ

ಕನ್ನಡ ಬಿಗ್​ ಬಾಸ್​ನಲ್ಲಿ ಇದುವರೆಗೂ ಯಾರೂ ಮಾಡಿರದ ದಾಖಲೆ ಬರೆದ ಮಂಜು ಪಾವಗಡ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 5 =
Remember me
