ಬೆಂಗಳೂರು:ಎಸ್​ಟಿ ಮೀಸಲಾತಿ ಹೆಚ್ಚಿಸಲು ರಾಜ್ಯ ಬಿಜೆಪಿ ನಿರ್ಧರಿಸಿದ್ದು, ಸಿಎಂ ಕೂಡ ಸಹಮತ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ನೀಡಬೇಕು ಎಂದು ಬಹಳ ವರ್ಷಗಳಿಂದ ಒತ್ತಾಯ ಇದೆ.ಈ ಹಿನ್ನೆಲೆ ಶುಕ್ರವಾರ ಬೆಳಗ್ಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ವಿಧಾನ ಮಂಡಲದ ಉಭಯ ಸದನಗಳ ನಾಯಕರ ಸಭೆ ನಡೆಯುತ್ತಿದ್ದು, ಎಸ್​ಟಿ ಮೀಸಲಾತಿ ಹೆಚ್ಚಿಸಲು ಬಿಜೆಪಿ ಸದಸ್ಯರು ಆಗ್ರಹಿಸಿದ್ದಾರೆ.
ಬಿಜೆಪಿ ರಾಜ್ಯ ಕೋರ್‌ ಕಮಿಟಿ ಆಗ್ರಹ:ಮಹರ್ಷಿ ವಾಲ್ಮೀಕಿ ಜಯಂತಿ ಅ.9ರಂದು‌ ನಡೆಯಲಿದ್ದು, ಅಷ್ಟರೊಳಗೆ ಪಂಗಡಗಳ ಮೀಸಲು ಹೆಚ್ಚಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲೂ ಆಗ್ರಹಿಸಲಾಗಿದೆ. ಶುಕ್ರವಾರ ಕೋರ್​ ಕಮಿಟಿ ಸಭೆ ನಂತರ ಸುದ್ದಿಗೋಷ್ಠಿ ನಡೆಸಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮುಂದಿನ ದಿನಗಳಲ್ಲಿ ಪರಿಶಿಷ್ಟ ಜಾತಿ, ಇತರೆ‌ ಹಿಂದುಳಿದ ವರ್ಗಗಳಿಗೆ ಮೀಸಲು ಸೌಲಭ್ಯ ಕಲ್ಪಿಸುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂಬ ಆಶಾಭಾವನೆಯಿದೆ. ಮೀಸಲು ಪ್ರಮಾಣ ಶೇ.7.5 ಹೆಚ್ಚಿಸಬೇಕು ಎನ್ನುವುದು ಆ ಸಮುದಾಯದ ಬೇಡಿಕೆಯಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದಿದ್ದಾರೆ.
ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿ ಎಸ್​ಸಿಗೆ ಶೇ.15 ಮತ್ತು ಎಸ್​ಟಿಗೆ ಶೇ.7.5 ಮೀಸಲಾತಿ ನೀಡಲಾಗಿದೆ. ಎರಡೂ ಸೇರಿಸಿದರೆ ಶೇ.22.5 ಆಗುತ್ತೆ. ಕರ್ನಾಟಕದಲ್ಲಿ ಎಸ್​ಸಿಗೆ ಶೇ.15 ಹಾಗೂ ಎಸ್​ಟಿಗೆ ಶೇ.3 ಮೀಸಲಾತಿ ಇದ್ದು, ಒಟ್ಟು ಶೇ.18 ಇದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮೀಸಲಾತಿ ನಡುವೆ ಶೇ.4.5 ವ್ಯತ್ಯಾಸವಿದೆ. ಇದು ಜನಸಂಖ್ಯೆಗೆ ಅನುಗುಣವಾಗಿಲ್ಲ ಎಂದು ಈ ವರ್ಗಕ್ಕೆ ಸೇರಿದ ಜನ ಮೀಸಲಾತಿ ಹೆಚ್ಚಿಸುವಂತೆ ಹೋರಾಟ ಮಾಡುತ್ತಿದ್ದಾರೆ.
2011ರ ಜನಗಣತಿ ಪ್ರಕಾರ ಎಸ್​ಸಿ ಸಮುದಾಯ ಶೇ.17.15, ಎಸ್​ಟಿಗೆ ಸೇರಿದವರು ಶೇ.6.95 ಇದ್ದಾರೆ. ಎರಡೂ ವರ್ಗ ಸೇರಿ ಶೇ.24.10 ಜನರಿದ್ದಾರೆ. ಆದರೆ ಮೀಸಲಾತಿ ಕೇವಲ ಶೇ.18 ಇದೆ. ಹೀಗಾಗಿ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯ ಬಂದಿತ್ತು. ಈ ಕಾರಣಕ್ಕೆ ಸಮ್ಮಿಶ್ರ ಸರ್ಕಾರ ಇದ್ದಾಗ 2019ರಲ್ಲಿ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿತ್ತು. ಈ ಸಮಿತಿಯು 2020ರ ಜುಲೈನಲ್ಲಿ ವರದಿ ನೀಡಿದೆ. ಎಸ್​ಟಿ ಜನಾಂಗದವರಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ಶೇ.3ರಿಂದ ಶೇ.7ರಷ್ಟು ಹೆಚ್ಚಿಸಬೇಕು. ಎಸ್​ಸಿ ಜನಾಂಗದವರಿಗೆ ಶೇ.15- ಶೇ.17ರಷ್ಟು ಹೆಚ್ಚಾಗಬೇಕು. ಒಟ್ಟಾರೆ ಮೀಸಲಾತಿಯು ಶೇ.6ರಷ್ಟು ಹೆಚ್ಚಾಗಬೇಕು ಎಂದು ನಾಗಮೋಹನ್ ದಾಸ್ ಸಮಿತಿಯು ತಿಳಿಸಿದೆ. ಆದರೆ ಎರಡು ವರ್ಷ ಕಳೆದರೂ ಅಂಗೀಕಾರ ಆಗಿ ಜಾರಿಯಾಗಿಲ್ಲ.
ಬಾಲಿವುಡ್​ ನಟ ಅರುಣ್​ ಬಾಲಿ ವಿಧಿವಶ

ಲವ್​ ಜಿಹಾದ್​ ಬಲೆಗೆ ಕನ್ನಡದ ನಟಿ? ಕಣ್ಣೀರಿಟ್ಟು ಮನದ ನೋವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ದಿವ್ಯಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + fifteen =
Remember me
