ಬೆಂಗಳೂರು:ರಾಜ್ಯಾದ್ಯಂತ ಅನ್ನಭಾಗ್ಯ ಯೋಜನೆ ಬಗ್ಗೆ ಸರ್ಕಾರ ಸರ್ವೇ ಆರಂಭಿಸಿದೆ. ಕಾರ್ಡ್‌ದಾರರಿಗೆ ಅಕ್ಕಿ ಬೇಕಾ ಅಥವಾ ಹಣ ನೀಡಬೇಕಾ ಎಂಬುದರ ಬಗ್ಗೆ ಆಹಾರ ಇಲಾಖೆ ಅಧಿಕಾರಿಗಳು ಮನೆ ಮನೆಗೆ ತೆರಳಿ ಕಾರ್ಡ್‌ದಾರರ ಅಭಿಪ್ರಾಯವನ್ನು ಸಂಗ್ರಹಿಸುತ್ತಿದ್ದಾರೆ.
ಕಾರ್ಡ್‌ದಾರರ ಬಳಿ ತೆರಳುವ ಅಧಿಕಾರಿಗಳು, ನಿಮಗೆ ಅಕ್ಕಿ ಕೊಡುಬೇಕಾ ಅಥವಾ ಹಣ ಮುಂದುವರಿಸು ಬೇಕಾ ಎಂಬ ಪ್ರಶ್ನೆ ಕೇಳುತ್ತಾರೆ. ಅದಕ್ಕೆ ಕಾರ್ಡ್‌ದಾರರು ನೀಡುವ ಉತ್ತರವನ್ನು ಪುಸ್ತಕದಲ್ಲಿ ಅಧಿಕಾರಿಗಳು ನಮೂದಿಸಿಕೊಳ್ಳುತ್ತಾರೆ. ಇದಕ್ಕೆ ಸಂಬಂಧಪಟ್ಟಂತೆ ಈಗಾಗಲೇ ರಾಜ್ಯಾದ್ಯಂತ ಸರ್ವೇ ಪ್ರಕ್ರಿಯೆ ಶುರುವಾಗಿದೆ. ಸರ್ವೇಯಲ್ಲಿ ಎಲ್ಲ ಮಾಹಿತಿ ಕ್ರೋಢೀಕರಿಸಿದ ಬಳಿಕ ಇಲಾಖೆ, ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ವರದಿ ಪರಿಶೀಲಿಸಿದ ಬಳಿಕ ಸರ್ಕಾರ, ಯೋಜನೆಯಡಿ ಅಕ್ಕಿಯನ್ನು ನೀಡಬೇಕಾ ಅಥವಾ ಹಣವನ್ನೇ ಮುಂದುವರಿಸಬೇಕಾ ಎಂಬುದನ್ನು ತೀರ್ಮಾನಿಸಲಿದೆ.
ಗ್ಯಾರಂಟಿಗಳ ಪೈಕಿ ಅನ್ನಭಾಗ್ಯ ಯೋಜನೆಯು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕ ಸೀಟು ದೊರೆತು ಆಡಳಿತ ಚುಕ್ಕಾಣಿ ಹಿಡಿಯಲು ಪ್ರಮುಖ ಕಾರಣವಾಗಿತ್ತು. ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿ ಸದಸ್ಯನಿಗೆ ಉಚಿತವಾಗಿ 10 ಕೆಜಿ ಅಕ್ಕಿ ನೀಡುವುದಾಗಿ ೋಷಿಸಿದ್ದ ಲವಾಗಿ ಬಡ ಮತ್ತು ಮಧ್ಯಮ ವರ್ಗದ ಹೆಚ್ಚಿನ ಮತಗಳನ್ನು ಸೆಳೆಯುವ ಪ್ರಯತ್ನಕ್ಕೆ ಕಾಂಗ್ರೆಸ್ಸಿಗೆ ದೊಡ್ಡ ಮಟ್ಟದಲ್ಲಿ ಲಕೊಟ್ಟಿತ್ತು. ಅದರಂತೆ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಬಳಿಕ ಅನ್ನಭಾಗ್ಯ ಸೇರಿ ಐದು ಗ್ಯಾರಂಟಿಗಳನ್ನು ಅನುಷ್ಠಾನ ತರುವುದಾಗಿ ೋಷಿಸಿದ್ದರು. ಇದಾದ ಬಳಿಕ, ಸಾಕಷ್ಟು ಪ್ರಯತ್ನಪಟ್ಟರೂ ಕಾಂಗ್ರೆಸ್ ಸರ್ಕಾರಕ್ಕೆ ಅಕ್ಕಿ ಸಿಗಲಿಲ್ಲ. ಕೇಂದ್ರ ಮತ್ತು ರಾಜ್ಯಗಳ ನಡುವೆ ಅಕ್ಕಿಗಾಗಿ ಜಟಾಪಟಿ ನಡೆಯಿತು.
ಅಕ್ಕಿ ಸಿಗದ ಪರಿಣಾಮ ಕಾಂಗ್ರೆಸ್ ಸರ್ಕಾರ, ಕಾರ್ಡ್‌ದಾರರಿಗೆ ಅಕ್ಕಿ ಬದಲು ಹಣ ವರ್ಗಾವಣೆ ವ್ಯವಸ್ಥೆಯನ್ನು ಜು.10ರಿಂದ ರಾಜ್ಯದಲ್ಲಿ ಜಾರಿಗೆ ತಂದಿದೆ. ರಾಷ್ಟ್ರೀಯ ಮಾಹಿತಿ ಕೇಂದ್ರದಿಂದ (ಎನ್‌ಐಸಿ) ಲಾನುಭವಿಗಳ ಮಾಹಿತಿಯನ್ನು ಇ-ಆಡಳಿತ ಇಲಾಖೆ ಅಭಿವೃದ್ಧಿಪಡಿಸಿರುವ ಡಿಬಿಟಿ ಪೋರ್ಟಲ್ ಹಾಗೂ ಖಜಾನೆ ಇಲಾಖೆಯ ಕೆ2 ಪೋರ್ಟಲ್ ಮೂಲಕ ಬಿಪಿಎಲ್ ಕಾರ್ಡ್‌ನಲ್ಲಿರುವ ಪ್ರತಿ ಸದಸ್ಯನಿಗೆ ಕೆಜಿಗೆ 34 ರೂ.ನಂತೆ 5 ಕೆಜಿ ಅಕ್ಕಿಗೆ 170 ರೂ.ನಗದು ಹಣವನ್ನು ಕುಟುಂಬದ ಮುಖ್ಯಸ್ಥರ ಖಾತೆಗೆ ಹಾಕಲಾಗತ್ತಿದೆ. ಅದೇರೀತಿ, ಅಂತ್ಯೋದಯ ಕಾರ್ಡ್‌ನಲ್ಲಿರುವ ನಾಲ್ಕು ಸದಸ್ಯರಿದ್ದರೆ ಕುಟುಂಬಕ್ಕೆ 170 ರೂ, ಐದು ಸದಸ್ಯರಿದ್ದರೆ 510 ರೂ, ಆರು ಸದಸ್ಯರಿದ್ದರೆ 850 ರೂ. ಹಣ ಹಾಕಲಾಗುತ್ತಿದೆ. ಜುಲೈ ಮತ್ತು ಆಗಸ್ಟ್ ತಿಂಗಳಿಗ ಹಣವನ್ನು ಈಗಾಗಲೇ ಕಾರ್ಡ್‌ದಾರರ ಖಾತೆಗೆ ಜಮೆ ಮಾಡಲಾಗಿದೆ. ರಾಜ್ಯದಲ್ಲಿರುವ ಒಟ್ಟು 1.28 ಕೋಟಿ ಬಿಪಿಎಲ್ ಕಾರ್ಡ್‌ಗಳ ಪೈಕಿ 1.19 ಕೋಟಿ ಕಾರ್ಡ್‌ಗಳಿಗೆ ಧನಭಾಗ್ಯ ಯೋಜನೆಯಡಿ ಬರಲಿದೆ. ಇದುವರೆಗೆ 1.03 ಕೋಟಿ ಕಾರ್ಡ್‌ಗಳಿಗೆ ಹಣ ಹಾಕಲಾಗುತ್ತಿದೆ.
ಇದನ್ನೂ ಓದಿ:ರಾಜಧಾನಿಯಲ್ಲಿ ಪಿಒಪಿ ಗಣೇಶ ಮಾರಿದರೆ ಕ್ರಿಮಿನಲ್ ಕೇಸ್
ಅಕ್ಕಿ ಕೊಟ್ಟರೆ 10 ಸಾವಿರ ಕೋಟಿ ಬೇಕುಯೋಜನೆಯಡಿ ಬಿಪಿಎಲ್ ಕಾರ್ಡ್‌ದಾರರಿಗೆ ಪಡಿತರ ವಿತರಿಸಲು ಪ್ರತಿ ತಿಂಗಳು 2.16 ಲಕ್ಷ ಮೆಟ್ರಿನ್ ಟನ್ ಅಕ್ಕಿ ಬೇಕಿದೆ. ಇದಕ್ಕಾಗಿ ವರ್ಷಕ್ಕೆ 10 ಸಾವಿರ ಕೋಟಿ ರೂ.ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಹೀಗಾಗಿ, ಸರ್ವೇಯಿಂದ ಕಾರ್ಡ್‌ದಾರರಿಗೆ ಅಕ್ಕಿ ವಿತರಿಸಿದರೆ ಪ್ರತಿ ತಿಂಗಳು ಎಷ್ಟು ಕೋಟಿ ರೂ.ತಗಲುತ್ತದೆ ಹಾಗೂ ಹಣ ನೀಡಿದರೆ ಎಷ್ಟಾಗಬಹುದು ಎಂಬುದರ ಬಗ್ಗೆಯೂ ಮಾಹಿತಿ ಸಿಗುತ್ತದೆ. ನಂತರ, ಅಕ್ಕಿ ಕೊಡುಬೇಕಾ ಅಥವಾ ಹಣ ನೀಡಬೇಕಾ ಎಂಬುದನ್ನು ಸರ್ಕಾರ ನಿರ್ಧರಿಸಲಿದೆ ಎನ್ನಲಾಗಿದೆ.
ಕೇಂದ್ರದಿಂದ ಅಕ್ಕಿ ವಿತರಣೆಅನ್ನಭಾಗ್ಯ ಯೋಜನೆ ಜವಾಬ್ದಾರಿಯನ್ನು ಈಗ ಕೇಂದ್ರ ಸರ್ಕಾರವೇ ಸಂಪೂರ್ಣವಾಗಿ ವಹಿಸಿಕೊಂಡಿದೆ. ಅದರಂತೆ, ಕೇಂದ್ರದಿಂದ ಪ್ರತಿ ತಿಂಗಳು 2.17 ಲಕ್ಷ ಟನ್ ಅಕ್ಕಿಯನ್ನುಫಲಾನುಭವಿಗಳಿಗೆ ಉಚಿತವಾಗಿ ವಿತರಿಸಲಾಗುತ್ತದೆ. ಹಿಂದೆ ಕೇಂದ್ರದ ಸಹಕಾರದೊಂದಿಗೆ ರಾಜ್ಯ ಸರ್ಕಾರ ಅಕ್ಕಿ ವಿತರಿಸುತ್ತಿತ್ತು.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:15 − 7 =
Remember me
