ಉಪ್ಪಿನಂಗಡಿ:ಧರ್ಮಸ್ಥಳದ ವಸತಿ ನಿಲಯದಲ್ಲಿ ರೂಂ ಸಿಗಲಿಲ್ಲವೆಂದು ಸುಬ್ರಹ್ಮಣ್ಯಕ್ಕೆ ಹೊರಟಿದ್ದ ಗದಗ ಮೂಲದ ಭಿನ್ನ ಮತೀಯ ಯುವಕ-ಯುವತಿಯನ್ನು ಹಿಂದು ಸಂಘಟನೆ ಕಾರ್ಯಕರ್ತರು ಕಾಪಿನಬಾಗಿಲು ಎಂಬಲ್ಲಿ ಶುಕ್ರವಾರ ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಗದಗ ನಿವಾಸಿ ರಫೀಕ್​(26) ಎಂಬಾತ ತನ್ನ ಊರಿನ 28ರ ಹರೆಯದ ಹಿಂದು ಯುವತಿ ಜತೆ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಪಡೆದು ವಸತಿ ನಿಲಯದಲ್ಲಿ ತಂಗಲು ಮುಂದಾಗಿದ್ದ. ಇವರ ಹೆಸರು ಮತ್ತು ಮತ ಹೊಂದಾಣಿಕೆಯಾಗದ್ದನ್ನು ಕಂಡು ವಸತಿ ನಿಲಯದವರು ಕೊಠಡಿ ನೀಡಲು ನಿರಾಕರಿಸಿದರು. ಬಳಿಕ ಖಾಸಗಿ ವಸತಿ ನಿಲಯಕ್ಕೆ ಹೋದ ಇವರಿಗೆ ಅಲ್ಲಿಯೂ ರೂಂ ದೊರಕಲಿಲ್ಲ. ಬೇಸತ್ತ ಇವರು ಸುಬ್ರಹ್ಮಣ್ಯಕ್ಕೆ ಹೋಗಲು ಯತ್ನಿಸುತ್ತಿದ್ದರು. ಅಷ್ಟರಲ್ಲಿ ಮಾಹಿತಿ ಪಡೆದ ಹಿಂದು ಸಂಘಟನೆ ಕಾರ್ಯಕರ್ತರು ಉಪ್ಪಿನಂಗಡಿ ಪೊಲೀಸ್​ ಠಾಣಾ ವ್ಯಾಪ್ತಿಯ ಕಾಪಿನಬಾಗಿಲು ಎಂಬಲ್ಲಿ ತಡೆದಿದ್ದಾರೆ.
ಪೊಲೀಸರು ಯುವತಿಯ ಕಡೆಯವರನ್ನು ಸಂಪರ್ಕಿಸಿ ಆಕೆಯ ಬಂಧುಗಳನ್ನು ಕರೆಸಿ ಅವರೊಂದಿಗೆ ಕಳುಹಿಸಿಕೊಟ್ಟರು. ರಫೀಕ್​ಗೆ ಎಚ್ಚರಿಕೆ ಕೊಟ್ಟು ಊರಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾಗರಹಾವಿನ ಹೆಡೆಯಿಂದ ಕ್ಷಣಾರ್ಧದಲ್ಲಿ ಮಗನನ್ನು ರಕ್ಷಿಸಿದ ತಾಯಿ! ಮಂಡ್ಯದಲ್ಲಿ ಎದೆ ಝಲ್​ ಅನ್ನಿಸೋ ಘಟನೆ, ವಿಡಿಯೋ ವೈರಲ್​

ಹೊಳೆನರಸೀಪುರ ಕೋರ್ಟ್ ಆವರಣದಲ್ಲೇ ಪತ್ನಿಯ ಕತ್ತು ಕುಯ್ದು ಕೊಂದ ಗಂಡ: ಎರಡೂ ಹೆಣ್ಣು ಮಕ್ಕಳಾಗಿದ್ದಕ್ಕೆ ಕ್ರೌರ್ಯ ಮೆರೆದ…



ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one − 1 =
Remember me
