ಮಂಡ್ಯ:ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಸಂಸದೆ ಸುಮಲತಾ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಅಲ್ಲದೆ ಅಂಬರೀಷ್​​ ಜತೆ ಕೈಕಟ್ಟಿಕೊಂಡು ನಿಂತು ಎಚ್​ಡಿಕೆ ತೆಗೆಸಿಕೊಂಡಿದ್ದ ಹಳೇ ಫೋಟೋವನ್ನು ಜಾಲತಾಣದಲ್ಲಿ ಹಾಕಿ ಹುಲಿ-ಇಲಿ ಯಾರೆಂದು ಟ್ರೋಲ್​ ಮಡುತ್ತಾ ವಾಗ್ದಾಳಿ ಮುಂದುವರಿಸಿದ್ದಾರೆ. ಇದೀಗ ಇವರಿಬ್ಬರ ಕಾಳಗಕ್ಕೆ ಸಂಸದ ಪ್ರತಾಪ್​ ಸಿಂಹ ಎಂಟ್ರಿ ಕೊಟ್ಟಿದ್ದು, ಎಚ್​ಡಿಕೆ ಪರ ಬ್ಯಾಟಿಂಗ್​ ಮಾಡಿದ್ದಾರೆ.
ಕೆಆರ್​ಎಸ್ ಡ್ಯಾಂ ಬಿರುಕು ಬಿಟ್ಟಿಲ್ಲ ಎಂದು ಅಧಿಕಾರಿಗಳೇ ತಿಳಿಸಿದ್ದಾರೆ. ಅಂಥಹದರಲ್ಲಿ ಡ್ಯಾಂ ಬಿರುಕು ಬಿಟ್ಟಿದೆ ಅನ್ನೋದು ಸರಿಯಲ್ಲ ಎಂದು ಪರೋಕ್ಷವಾಗಿ ಸಂಸದೆ ಸುಮಲತಾಗೆ ಪ್ರತಾಪ್ ಸಿಂಹ ಟಾಂಗ್​ ಕೊಟ್ಟಿದ್ದಾರೆ. ಅಕ್ರಮ ಗಣಿಗಾರಿಕೆ ಸ್ಥಳಗಳಲ್ಲಿ ಸುಮಲತಾಗೆ ಅಡ್ಡಿ ಪಡಿಸಲಾಯಿತು ಎಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ಪ್ರತಾಪ್​, ಅವರ ಹೇಳಿಕೆಯನ್ನೇ ಮಾಧ್ಯಮದವರು ಸತ್ಯ ಎಂದು ಭಾವಿಸಬೇಡಿ. ಸತ್ಯದ ಆಳಕ್ಕೆ ಹೋಗಿ ತಿಳಿದುಕೊಳ್ಳುವ ಮನಸ್ಥಿತಿ ಮಾಧ್ಯಮದವರಿಗೆ ಇರಬೇಕಾಗುತ್ತದೆ. ರಾಜಕೀಯವಾಗಿ ಯಾರು ಏನು ಬೇಕಾದರೂ ಹೇಳಿಕೆ ಕೊಡಬಹುದು. ಯಾರೊಬ್ಬರೂ ಎಲ್ಲಿಯೂ ಅಡ್ಡಿ ಪಡಿಸಿಲ್ಲ. ಇದೊಂದು ರಾಜಕೀಯ ಅಷ್ಟೇ ಎಂದು ಲೇವಡಿ ಮಾಡಿದರು.
ಕೆಆರ್​ಎಸ್ ಅಧಿಕಾರಿಗಳ ಜತೆ ಮಾತನಾಡಿದ್ದೇನೆ. ಅಲ್ಲಿ ಯಾವುದೇ ಸಮಸ್ಯೆ ಇಲ್ಲ. ಅಲ್ಲಿಯ ಅಧಿಕಾರಿಗಳೇ ನನಗರ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ ಮೈಸೂರು-ಬೆಂಗಳೂರು ದಶಪಥ ರಸ್ತೆ ಮಾಡುವುದಕ್ಕೂ ಬಿಡಲಿಲ್ಲ. ಸುಳ್ಳು ನೆಪಗಳನ್ನು ಹೇಳಿ ಕೆಲಸ ಮಾಡಲು ಅಡ್ಡಿಪಡಿಸಿದ್ರು ಎಂದು ಸುಮಲತಾರ ಹೆಸರನ್ನೇಳದೆ ಪ್ರತಾಪ್ ಸಿಂಹ ಕಿಡಿಕಾರಿದರು.
‘ಲೈಂಗಿಕ ಉತ್ಸವ’ದಲ್ಲಿ ಮಿಂದೆದ್ದ ನೂರಾರು ಜೋಡಿಗಳು! ನಾಲ್ಕು ದಿನ ನಡೆಯಿತು ಸೆಕ್ಸ್​ ಫೆಸ್ಟಿವಲ್​

ಆಂಟಿಗೆ ನವವಿವಾಹಿತ ಯುವಕನ ಮೇಲೆ ಮೋಹ! ಮುಂದಾಗಿದ್ದು ಘನಘೋರ ದುರಂತ

ಮಂಡ್ಯದಲ್ಲಿ ಕೆರೆಗೆ ಹಾರಿ ತಾಯಿ-ಮಕ್ಕಳು ಆತ್ಮಹತ್ಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + two =
Remember me
