ಗದಗ:ಬಹಳ ದಿನಗಳಿಂದ ಉತ್ತರ ಕರ್ನಾಟಕ ಭಾಗದ ಹಲವೆಡೆಗಳಲ್ಲಿ ಮಕ್ಕಳ ಕಳ್ಳರ ಕುರಿತಾಗಿ ವದಂತಿಯೊಂದು ನಿರಂತರವಾಗಿ ಹರಡುತ್ತಲೇ ಇದೆ. ಈ ಹಿಂದೆ ಬಾಗಲಕೋಟೆ ಹಾಗೂ ಕಲಬುರಗಿಯಲ್ಲಿ ಮಕ್ಕಳ ಕಳ್ಳರು ಎಂದು ಅನುಮಾನಾಸ್ಪದವಾಗಿ ಕಂಡು ಬಂದ ವ್ಯಕ್ತಿಗಳನ್ನು ಜನರು ಪೋಲಿಸರಿಗೆ ಒಪ್ಪಿಸಿದ್ದರು.
ಇದೀಗ ಗದಗ ಜಿಲ್ಲೆಯ ಗಜೇಂದ್ರಗಡ ದುರ್ಗಮ್ಮನ ದೇವಸ್ಥಾನದ ಹತ್ತಿರ ಅನುಮಾನಾಸ್ಪದವಾಗಿ ವ್ಯಕ್ತಿಯೊಬ್ಬ ಓಡಾಡಿಕೊಂಡಿರುವುದು ತಿಳಿದು ಬಂದಿದೆ. ಈ ವದಂತಿ ಹಬ್ಬುತ್ತಿದ್ದಂತೆ ಸ್ಥಳಕ್ಕೆ ಬಂದ ಊರಿನ ಜನರು ಮಕ್ಕಳ ಕಳ್ಳ ಎಂದು ಆ ವ್ಯಕ್ತಿಯ ಕೈಗೆ ಹಗ್ಗವನ್ನು ಕಟ್ಟಿ ತಪ್ಪಿಸಿಕೊಂಡು ಹೋಗದಂತೆ ಕೂರಿಸಿದ್ದರು.
ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಗಜೇಂದ್ರಗಡ ಪೋಲಿಸರು ಆ ವ್ಯಕ್ತಿಯನ್ನು ಆಟೋದಲ್ಲಿ ಕೂರಿಸಿಕೊಂಡು ಕರೆದೊಯ್ದಿದ್ದಾರೆ. ಅಷ್ಟೊತ್ತಿಗಾಗಲೇ ಈ ವಿಷಯ ಊರಿಡೀ ಹರಡಿ ಆ ವ್ಯಕ್ತಿಯನ್ನು ನೋಡಲು ನೂರಾರು ಜನರು ಬಂದಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 4 =
Remember me
