ಬೆಂಗಳೂರು:ಕಾವೇರಿ ನದಿ ನೀರಿನ ವಿಚಾರದಲ್ಲಿ ತಮಿಳುನಾಡು ರಾಜಕೀಯ ಮಾಡಿಕೊಂಡು ಬಂದಿದೆ. ಈಗ ಪ್ರಧಾನಮಂತ್ರಿಗೆ ಪತ್ರ ಬರೆದಿರುವುದು ಮತ್ತೊಂದು ರಾಜಕೀಯ ಸ್ಟಂಟ್. ಇದ್ಯಾವುದಕ್ಕೂ ಕೇಂದ್ರ ಮಾನ್ಯತೆ ನೀಡುವುದಿಲ್ಲವೆಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.
ಆರ್​ಟಿ ನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರಿಗೆ ಮಂಗಳವಾರ ಪ್ರತಿಕ್ರಿಯಿಸಿದ ಸಿಎಂ, ಪ್ರಧಾನಿ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಬರೆದಿರುವ ಪತ್ರವನ್ನು ತರಿಸಿಕೊಂಡು ತಕರಾರಿನ ಅಂಶಗಳ ಬಗ್ಗೆ ತಿಳಿದುಕೊಳ್ಳುವೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ಜೂ.16ರಂದು ನಡುವೆ ನಿಗದಿಯಾಗಿದ್ದು, ಕರ್ನಾಟಕದ ಜತೆಗೆ ತಮಿಳುನಾಡು, ಪಾಂಡಿಚೇರಿ, ಕೇಂದ್ರ ಸರ್ಕಾರದ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಕೇಂದ್ರಕ್ಕೆ ತಮಿಳುನಾಡು ಸರ್ಕಾರ ಪತ್ರ ಬರೆದಿರುವುದು ಕಾನೂನು ಬಾಹಿರ. ಒಕ್ಕೂಟ ವ್ಯವಸ್ಥೆಯ ವಿರುದ್ಧವಷ್ಟೇ ಅಲ್ಲ, ನಮ್ಮ ರಾಜ್ಯದ ನೀರಿನ ಹಕ್ಕು ದುರ್ಬಳಕೆ ಮಾಡಿಕೊಳ್ಳಲು ಹುನ್ನಾರ ಹೂಡಿದೆ ಎಂದು‌ ಕಿಡಿಕಾರಿದರು.
ಈಗಾಗಲೇ ಪ್ರಾಧಿಕಾರದ 15 ಸಭೆಗಳಾಗಿದ್ದು, ತಮಿಳುನಾಡು ಪಾಲ್ಗೊಳ್ಳದೆ ಅಸಹಕಾರ ತೋರಿದೆ. ಕೇಂದ್ರೀಯ ಜಲ ಆಯೋಗವು ವಿಸ್ತೃತ ಯೋಜನಾ ವರದಿಗೆ ಒಪ್ಪಿಗೆ ನೀಡಿ, ಮುಂದಿನ ಹಂತದ ಅನುಮೋದನೆಗಾಗಿ ಪ್ರಾಧಿಕಾರಕ್ಕೆ ರವಾನಿಸಿದೆ. ಪೂರ್ವಭಾವಿ ಪ್ರಕ್ರಿಯೆಗಳು ಮುಗಿದಿರುವ ಕಾರಣ ತಮಿಳುನಾಡು ತಗಾದೆಗೆ ಯಾವುದೇ ಮಾನ್ಯತೆಯಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.
ಗ್ರಾಹಕರ ಫೋಟೋ ಎಡಿಟ್​ ಮಾಡಿ ಬ್ಲ್ಯಾಕ್​ಮೇಲ್​: ಧಾರವಾಡದಲ್ಲಿ ಐವರು ಲೋನ್​ ಆ್ಯಪ್​ ಏಜೆಂಟರ ಬಂಧನ

ಲೈಂಗಿಕ ದೌರ್ಜನ್ಯ, ಮಹಿಳೆಗೆ 118 ಹೊಲಿಗೆ

ಗೊರವನಹಳ್ಳಿ ಸಮೀಪ ಘೋರ ಕೃತ್ಯ: 3 ವರ್ಷದ ಬಳಿಕ ಸಿಕ್ಕಿಬಿದ್ದವ ಬಾಯ್ಬಿಟ್ಟ ರಹಸ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − nine =
Remember me
