ಕೋಲಾರ:ಆಂಧ್ರಪ್ರದೇಶದ ವಲಸೆ ಕಾರ್ಮಿಕರಿಗೆ ಡ್ರಾಪ್ ಕೊಡುವ ನೆಪದಲ್ಲಿ ಟಾಟಾ ಏಸ್ ಚಾಲಕ ಲೈಂಗಿಕ ಕಿರುಕುಳ ಕೊಟ್ಟ ಪರಿಣಾಮ ಮಹಿಳೆ ಸೇರಿದಂತೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಇದನ್ನೂ ಓದಿ:ಕೆಫೆ ಡೇ ಸಂಸ್ಥಾಪಕ ಸಿದ್ದಾರ್ಥ್​ ಪುತ್ರ ಅಮಾರ್ತ್ಯರೊಂದಿಗೆ ಡಿಕೆಶಿ ಪುತ್ರಿ ಐಶ್ವರ್ಯಾ ವಿವಾಹ…?!
ಶ್ರೀನಿವಾಸಪುರ ತಾಲೂಕಿನ ನಾಗದೇವನಹಳ್ಳಿ ಬಳಿ ಮಧ್ಯರಾತ್ರಿ ಈ ಘಟನೆ ನಡೆದಿದೆ. ರೋಣೂರು ಗ್ರಾಮದ ಟಾಟಾ ಏಸ್ ಚಾಲಕ ಗೌಸ್ ಎಂಬಾತನಿಗೆ ಸಾರ್ವಜನಿಕರು ಥಳಿಸಿದ್ದಾರೆ. ಬಸ್ ವ್ಯವಸ್ಥೆ ಇಲ್ಲದ ಹಿನ್ನೆಲೆಯಲ್ಲಿ ಆಂಧ್ರ ಮೂಲದ ಕೂಲಿ ಕಾರ್ಮಿಕರು ಕುಟುಂಬ ಸಮೇತರಾಗಿ ಬೆಂಗಳೂರಿನಿಂದ ಆಂಧ್ರಪ್ರದೇಶಕ್ಕೆ ನಡೆದುಕೊಂಡು ಹೋಗುತ್ತಿದ್ದರು.
ಕುಟುಂಬಕ್ಕೆ ಸಹಾಯ ಮಾಡುವ ನೆಪದಲ್ಲಿ ಆಂಧ್ರದ ಬಾರ್ಡರ್​ವರೆಗೂ ಬಿಡೋದಾಗಿ ಪುಸಲಾಯಿಸಿ ತನ್ನ ಟಾಟಾ ಏಸ್ ಗಾಡಿಯಲ್ಲಿ ಮಹಿಳೆ ಹಾಗೂ ಆಕೆಯ ಮಗಳನ್ನು ಮುಂದೆ ಕೂರಿಸಿಕೊಂಡಿದ್ದಾನೆ. ಮೊದಲೆ ಪ್ಲಾನ್ ಮಾಡಿಕೊಂಡಿದ್ದ ಚಾಲಕ ಗಂಡನನ್ನು ಹಿಂದೆ ಕೂರಿಸಿ, ನಂತರ ಚಾಲನೆ ಮಾಡುತ್ತಾ ಕಾಮ ದೃಷ್ಟಿಯನ್ನು ಮಹಿಳೆ ಮೇಲೆ ಬೀರಿದ್ದಾನೆ.
ಇದನ್ನೂ ಓದಿ:ಎರಡು ವರ್ಷಗಳಿಂದಲೂ ನಡೆದಿದ್ದ ಕೊಲೆಯ ಸಂಚಿಗೆ ಸಿಲುಕದವನು ಬಾತ್​ರೂಮ್​ನಲ್ಲಿ ಅಸಹಾಯಕನಾದ…!
ಆಕೆಯ ಮೈ ಕೈ ಮುಟ್ಟಿ ಕಿರುಕುಳ ನೀಡಿದ್ದು, ಇದರಿಂದ ಎಚ್ಚೆತ್ತ ಮಹಿಳೆ ಕೂಡಲೆ ಗಾಡಿಯಿಂದ ಕೆಳಗಿಳಿದು ಚಾಲಕನನ್ನು ತರಾಟೆ ತೆಗೆದುಕೊಂಡಿದ್ದಾಳೆ. ಇನ್ನೂ ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.(ದಿಗ್ವಿಜಯ ನ್ಯೂಸ್​)
ಸರ್ಕಾರದ ವಿಡಿಯೋ ಕಾನ್ಫರೆನ್ಸ್​ ವೇಳೆ ಟಾಪ್​ಲೆಸ್​ ಆದ ಮೆಕ್ಸಿಕೋ ಸಂಸದೆ…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − three =
Remember me
