ಹಾವೇರಿ:ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿ ಆಕೆಯ ಕೆನ್ನೆಗೆ ಮುತ್ತು ಕೊಟ್ಟ ಶಿಕ್ಷಕನ ವಿರುದ್ಧ ಕೇಸ್​ ದಾಖಲಾಗಿದೆ.
ಹಾವೇರಿ ಜಿಲ್ಲೆಯ ಹಿರೆಕೇರೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಅಡಿ ದೈಹಿಕ ಶಿಕ್ಷಣ ಶಿಕ್ಷಕ ಪರಮೇಶ ಎಸ್. ಐರಣಿ ಎಂಬಾತನ ಮೇಲೆ ಕೇಸ್​ ದಾಖಲಾಗಿದೆ. ಪರೀಕ್ಷಾ ಕೊಠಡಿ ಮೇಲ್ವಿಚಾರಕನಾಗಿದ್ದ ಪರಮೇಶ, ಏ.8ರಂದು ಹಿಂದಿ ವಿಷಯದ ಪರೀಕ್ಷೆ ಬರೆಯಲು ಆಗಮಿಸಿದ್ದ ವಿದ್ಯಾರ್ಥಿನಿಯೊಬ್ಬರಿಗೆ ಹೆಚ್ಚಿನ ಅಂಕ ಕೊಡಿಸುವ ಆಮಿಷವೊಡ್ಡಿದ್ದ. ಪರೀಕ್ಷಾ ಕೇಂದ್ರದ ಕಟ್ಟಡದ ಮೇಲೆ ಕರೆದೊಯ್ದು ಪ್ರವೇಶ ಪತ್ರದ ಸಂಖ್ಯೆ ಕೇಳುತ್ತಾ ನಿನಗೆ ಹೆಚ್ಚು ಅಂಕ ಕೊಡಿಸುತ್ತೇನೆ ಎಂದು ಮೈ-ಕೈ ಮುಟ್ಟಿ ಲೈಂಗಿಕ ಕಿರುಕುಳ ಕೊಟ್ಟು ಕೆನ್ನೆಗೆ ಮುತ್ತು ಕೊಟ್ಟಿದ್ದಾನೆ ಎಂದು ದೂರು ದಾಖಲಾಗಿದೆ.
ಪರಮೇಶನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸಂತ್ರಸ್ತೆಯ ಸಹೋದರ ಹಿರೇಕೆರೂರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಅಯ್ಯೋ ಅಣ್ಣ… ನಾನಷ್ಟು ಗೋಗರೆದ್ರೂ ಊಟ ಮಾಡದೆ ಕೆಲ್ಸ ಇದೆ ಅಂತ ಹೊರಟ್ಯಲ್ಲೋ: ಮಡಿಲಕ್ಕಿ ಕೊಟ್ಟು ಹಿಂತಿರುಗುವಾಗ ಸಾವು

ತಿಂಗಳ ಹಿಂದಷ್ಟೇ ಜನಿಸಿದ್ದ ಮುದ್ದು ಮಗುವಿಗೆ ತಂದೆಯಾಗಿದ್ದ ಪೊಲೀಸ್​ ಪೇದೆ ಬಾಳಲ್ಲಿ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − two =
Remember me
