ಬೆಂಗಳೂರು:15 ಸಾವಿರ ಶಿಕ್ಷಕರ ನೇಮಕಾತಿಗಾಗಿ ಶನಿವಾರ ನಡೆದ ಮೊದಲ ದಿನದ ಸಿಇಟಿ ಪರೀಕ್ಷೆಯೂ ಸುಸೂತ್ರವಾಗಿ ನಡೆದಿದೆ. ಪಿಎಸ್ಐ ಮತ್ತು ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದ ಹಿನ್ನೆಲೆ ಶಿಕ್ಷಕರ ನೇಮಕಾತಿ ಪರೀಕ್ಷೆ ಪೊಲೀಸ್​ ಬಿಗಿ ಬಂದೋಬಸ್ತ್​ನಲ್ಲಿ ನಡೆದಿದೆ. ಪರೀಕ್ಷೆ ಬರೆಯಲು ಬಂದಿದ್ದ ಅಭ್ಯರ್ಥಿಗಳನ್ನು ತೀವ್ರ ತಪಾಸಣೆ ನಡೆಸಿ ಒಳ ಬಿಡುತ್ತಿದ್ದ ದೃಶ್ಯ ಎಲ್ಲೆಡೆ ಕಂಡು ಬಂತು.
ರಾಜ್ಯಾದ್ಯಂತ 435 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 1.05 ಲಕ್ಷ ಅಭ್ಯರ್ಥಿಗಳು ಮೊದಲ ದಿನದ ಪರೀಕ್ಷೆ ಬರೆದಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಮೆಟಲ್​ ಡಿಟೆಕ್ಟರ್​, ಆವರಣ ಮತ್ತು ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸುವ ಮೂಲಕ ಅಭ್ಯರ್ಥಿಗಳ ಚಲನ ವಲನಗಳ ಮೇಲೆ ಹದ್ದಿನ ಕಣ್ಣು ಇಡಲಾಗಿತ್ತು. ಪರೀಕ್ಷಾ ಕೊಠಡಿಯ ಒಳಗೆ ಮೊಬೈಲ್​ ಫೋನ್​, ಬ್ಲೂಟೂತ್​, ಕ್ಯಾಲ್ಕುಲೇಟರ್​, ಕೈಗಡಿಯಾರ, ಎಲೆಕ್ಟ್ರಾನಿಕ್​ ಉಪಕರಣ ನಿಷೇಧವಿದ್ದ ಹಿನ್ನೆಲೆಯಲ್ಲಿ ಸಿಬ್ಬಂದಿ ಪ್ರತಿಯೊಬ್ಬರನ್ನೂ ತಪಾಸಣೆ ನಡೆಸಿ ಇಲ್ಲ ಎಂದು ಖಚಿತವಾದ ಬಳಿಕವಷ್ಟೇ ಕಳುಹಿಸುತ್ತಿದ್ದ ದೃಶ್ಯ ಕಂಡುಬಂತು. ಪ್ರತಿ ಪರೀಕ್ಷಾ ಕೇಂದ್ರಗಳಿಗೂ ಖಾಕಿ ಸರ್ಪಗಾವಲು ಹಾಕಲಾಗಿತ್ತು. ಮೀಸಲು ಪಡೆಯನ್ನೂ ನಿಯೋಜಿಸಲಾಗಿತ್ತು.
ಕುಣಿಗಲ್​ನಲ್ಲಿ 6 ತಿಂಗಳ ಹಿಂದೆ ಪತ್ತೆಯಾಗಿದ್ದ ಬೈಕ್​ನ ಹಿಂದಿದೆ ದುರಂತ ಪ್ರೇಮಕತೆ! ಯುವಕ-ಯುವತಿ-ತಾಯಿ… ಒಬ್ಬರ ಹಿಂದೆ ಒಬ್ಬರ ಸಾವು

ಮಗಳಿಗೆ ಕಿಡ್ನಿ ಕೊಟ್ಟ ತಾಯಿ! ಶಿಕ್ಷಕಿಗಾಗಿ ಮಿಡಿದ ಹೃದಯ… ಶಿವಮೊಗ್ಗದಲ್ಲಿ ಮನಕಲಕುವ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 2 =
Remember me
