ರಾಯಚೂರು:ರಾಯಚೂರನ್ನು ತೆಲಂಗಾಣಕ್ಕೆ ಸೇರಿಸಬೇಕು ಎಂದು ಮೂರು ತಿಂಗಳ ಹಿಂದೆ ರಾಯಚೂರು ನಗರ ಶಾಸಕ ಡಾ.ಶಿವರಾಜ ಪಾಟೀಲ್ ಹೇಳಿಕೆ ನೀಡಿದ ಬೆನ್ನಲ್ಲೇ ಸಾಕಷ್ಟು ಚರ್ಚೆಗಳು ಹುಟ್ಟಿಕೊಂಡಿದ್ದವು. ವಿವಾದ ಶುರುವಾಗುತ್ತಿದ್ದಂತೆ ತೆಲಂಗಾಣಕ್ಕೆ ರಾಯಚೂರು ಸೇರ್ಪಡೆ ಬೇಡ ಎನ್ನುವ ಮೂಲಕ ಚರ್ಚೆಗೆ ಪೂರ್ಣ ವಿರಾಮ ಹಾಕಿದ್ದ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರರಾವ್, ಇದೀಗ ಉದ್ಧಟತನ ತೋರುತ್ತಿದ್ದಾರೆ. ತೆಲಂಗಾಣ ರಾಜ್ಯದ ಸಾಧನೆಗಳನ್ನ ಪ್ರಸ್ತಾಪಿಸುತ್ತಾ, ಕರ್ನಾಟಕ ಸರ್ಕಾರವನ್ನ ಅಣಕಿಸಿದ್ದಾರೆ.
ತೆಲಂಗಾಣ ಸರ್ಕಾರದ ಕಲ್ಯಾಣ ಯೋಜನೆಗಳನ್ನು ನೋಡಿದ ಕಲ್ಯಾಣ ಕರ್ನಾಟಕದ ರಾಯಚೂರು ಜಿಲ್ಲೆಯ ಜನತೆ ಆಕರ್ಷಿತರಾಗಿದ್ದಾರೆ. ರಾಯಚೂರು ಜಿಲ್ಲೆಯ ಜನರು ತಮ್ಮ ಪ್ರದೇಶವನ್ನು ತೆಲಂಗಾಣದೊಂದಿಗೆ ವಿಲೀನಗೊಳಿಸಬೇಕೆಂದು ಒತ್ತಾಯಿಸುತ್ತಿದ್ದಾರೆ ಎಂದು ತೆಲಂಗಾಣ ಸಿಎಂ ಪುನರುಚ್ಛರಿಸಿದ್ದಾರೆ.
ಅಭಿವೃದ್ಧಿ ಆಗುತ್ತಿಲ್ಲ ಎಂದು ಅಸಮಾಧಾನ:ಕಳೆದ ಏಪ್ರಿಲ್​ನಲ್ಲಿ ಸಚಿವ ಪ್ರಭು ಚವ್ಹಾಣ್​ ರಾಯಚೂರು ನಗರಕ್ಕೆ ಆಗಮಿಸಿದ ಸಂದರ್ಭ ಅಭಿವೃದ್ಧಿ ವಿಷಯದಲ್ಲಿ ರಾಯಚೂರು ಜಿಲ್ಲೆಯನ್ನು ಕಡೆಗಣಿಸಲಾಗುತ್ತಿದೆ ಎಂದು ಹೇಳುತ್ತಾ ಭಾವೋದ್ವೇಗಕ್ಕೆ ಒಳಗಾಗಿದ್ದ ಶಾಸಕ ಡಾ.ಶಿವರಾಜ ಪಾಟೀಲ್, ರಾಯಚೂರನ್ನು ತೆಲಂಗಾಣಕ್ಕೆ ಸೇರಿಸಿ ಎನ್ನುವ ಮಾತುಗಳನ್ನಾಡಿದ್ದರು. ಈ ಹೇಳಿಕೆಯನ್ನು ಸ್ವಾಗತಿಸುವ ಮೂಲಕ ತೆಲಂಗಾಣದ ಗದ್ವಾಲ್ ಶಾಸಕ ಬಿ.ಕೃಷ್ಣಮೋಹನ ರೆಡ್ಡಿ, ರಾಯಚೂರನ್ನು ತೆಲಂಗಾಣಕ್ಕೆ ಸೇರಿಸಿದಲ್ಲಿ ದೇಶವೇ ಅಚ್ಚರಿ ಪಡುವಂತೆ ಅಭಿವೃದ್ಧಿ ಪಡಿಸಿ ತೋರಿಸುತ್ತೇವೆ ಎಂದಿದ್ದರು. ಅಲ್ಲದೆ ಇದರ ಜತೆಗೆ ಕಲಬುರಗಿ, ಬೀದರ್​ ಜಿಲ್ಲೆಗಳನ್ನೂ ತೆಲಂಗಾಣಕ್ಕೆ ಸೇರಿಸಬೇಕು ಎಂದಿದ್ದರು. ಮೂರೂ ಜಿಲ್ಲೆಗಳ ಶಾಸಕರು ಮತ್ತು ಮುಖಂಡರು ಕರ್ನಾಟಕದ ಮುಖ್ಯಮಂತ್ರಿ ಮೇಲೆ ಒತ್ತಡ ಹೇರಿ ಈ ಜಿಲ್ಲೆಗಳನ್ನು ತೆಲಂಗಾಣಕ್ಕೆ ಸೇರಿಸುವಂತೆ ಒಪ್ಪಿಸಿದಲ್ಲಿ ನಾವು ತೆಲಂಗಾಣದ ಮುಖ್ಯಮಂತ್ರಿಯನ್ನು ಒಪ್ಪಿಸುತ್ತೇವೆ ಎಂದು ಬಿ.ಕೃಷ್ಣಮೋಹನ್​ ರೆಡ್ಡಿ ಹೇಳಿದ್ದರು.
ಎಂಎಲ್​ಎ ಕ್ಷಮೆ ಕೇಳಿದ್ದರು:ಡಾ.ಶಿವರಾಜ ಪಾಟೀಲ್ ಹೇಳಿಕೆ ಖಂಡಿಸಿ ಕನ್ನಡಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿ, ಹೋರಾಟ ನಡೆಸಿದ ಬೆನ್ನಲ್ಲೇ ಎಚ್ಚೆತ್ತ ಶಾಸಕ ಡಾ.ಶಿವರಾಜ ಪಾಟೀಲ್, ರಾಯಚೂರು ಜಿಲ್ಲೆಗೆ ಪ್ರಾತಿನಿಧ್ಯ ಸಿಗಬೇಕು ಎನ್ನುವ ದೃಷ್ಟಿಯಿಂದ ಕೋಪದಿಂದ ರಾಯಚೂರನ್ನು ತೆಲಂಗಾಣಕ್ಕೆ ಸೇರಿಸಿ ಎಂದು ಹೇಳಿದ್ದೆ. ಐಐಟಿ ಮತ್ತು ಏಮ್ಸ್​ ಮಂಜೂರು ಮಾಡುವಲ್ಲಿ ಅನ್ಯಾಯವಾಗಿದೆ ಎನ್ನುವ ಉದ್ದೇಶದಿಂದ ಆ ಮಾತನ್ನು ಹೇಳಿದ್ದೆ. ಹಲವಾರು ಅಭಿವೃದ್ಧಿ ಕಾರ್ಯಗಳ ಬಗ್ಗೆ ಕೇಳಿದಾಗ ಸಚಿವರು ಅನುದಾನದ ಕೊರತೆ ಬಗ್ಗೆ ಮಾತನಾಡಿದರು. ಆಗ ಈ ಮಾತನ್ನು ಆಡಿದೆ. ಕನ್ನಡ ನಾಡು, ಜಲ, ನೆಲಕ್ಕಾಗಿ ಪ್ರಾಣ ತ್ಯಾಗಕ್ಕೂ ನಾನು ಸಿದ್ಧನಿದ್ದೇನೆ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದಿದ್ದರು.
ಆ ವೇಳೆ ತೆಲಂಗಾಣ ಸಿಎಂ ಚಂದ್ರಶೇಖರರಾವ್ ಕೂಡ ಡಾ.ಶಿವರಾಜ ಪಾಟೀಲರ ಹೇಳಿಕೆ ಉಲ್ಲೇಖಿಸಿ ರಾಯಚೂರನ್ನು ತೆಲಂಗಾಣಕ್ಕೆ ಸೇರಿಸುವುದು ಬೇಡ ಎನ್ನುವ ಸ್ಪಷ್ಟ ಸಂದೇಶ ನೀಡಿದ್ದರು. ಇದು ಸದ್ಯ ಇಲ್ಲಿಗೆ ಮುಗಿಯುವಂತಿಲ್ಲ. ಮೇಲ್ನೋಟಕ್ಕೆ ವಿವಾದಕ್ಕೆ ತೆರೆದ ತೆಲಂಗಾಣ ಸಿಎಂ, ರಾಯಚೂರು ಜಿಲ್ಲೆಯನ್ನ ತೆಲಂಗಾಣಕ್ಕೆ ವಿಲೀನಗೊಳಿಸಿ ಅಂತ ಅಲ್ಲಿನ ಜನ ಕೇಳ್ತಿದ್ದಾರೆ ಎಂದು ಮತ್ತೆ ಪುನರುಚ್ಛರಿಸಿದ್ದಾರೆ.
ಮಿನಿಷ್ಟ್ರು ಬಂದ್ರೂ ಮೇಷ್ಟ್ರು ಬರಲಿಲ್ಲ! ಬಿ.ಸಿ.ನಾಗೇಶ್ ಎದುರೇ ಅವ್ಯವಸ್ಥೆ ಬಯಲು, ಶಿಕ್ಷಕರಿಗೆ ನೋಟಿಸ್ ಜಾರಿ

PSI ಆಗುವ ಕನಸು ಕಂಡಿದ್ದ ಬೆಂಗ್ಳೂರಿನ ಯುವಕ ಕಳ್ಳನಾದ! ಇಂಜಿನಿಯರಿಂಗ್​ನಲ್ಲಿ ಟಾಪರ್ ಆಗಿದ್ದವ ದಾರಿ ತಪ್ಪಿದ್ದೇಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 5 =
Remember me
