ಬೆಂಗಳೂರು:ಓದಿದ್ದು ಎಂಬಿಎ. ಇಳಿದದ್ದು ಸರಗಳ್ಳತನಕ್ಕೆ! ಅರೆ, ಯಾವುದಾದರೂ ಕಂಪನಿಗೆ ಹೋಗಿ ಕೆಲಸ ಗಿಟ್ಟಿಸಿಕೊಂಡು ಜೀವನ ಮಾಡೋದನ್ನು ಬಿಟ್​ ಅದ್ಯಾಕೆ ಕಳ್ಳನಾದ? ಎಂಬ ಪ್ರಶ್ನೆ ಮೂಡದೆ ಇರದು.
ಹೌದು, ಆತ ಎಂಬಿಎ ಪದವೀಧರ. ಖಾಸಗಿ ಕಂಪನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಕೂಡ ಮಾಡುತ್ತಿದ್ದ. ಆದರೀಗ ಸರಗಳ್ಳತನ ಕೇಸ್​ನಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ! ಅವರ ಹೆಸರು ಶೇಖ್ ಗೌಸ್.
ಜಯನಗರದ ಪೂರ್ಣಿಮಾ ಕನ್ವೆನ್ಷನ್ ಹಾಲ್​ನಿಂದ ಬರುತ್ತಿದ್ದ ಮಹಿಳೆಯ ಸರ ಎಗರಿಸಿದ ಶೇಖ್​ ಗೌಸ್​ನನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿ ಬಾಯ್ಬಿಟ್ಟ ಸತ್ಯ ಕೇಳಿ ಪೊಲೀಸರೇ ಶಾಕ್​ ಆಗಿದ್ದಾರೆ.
“ಸರ್..ನಾನು ಎಂಬಿಎ ಪದವೀಧರ. ಕರೋನಾ ಲಾಕ್​ಡೌನ್​ ವೇಳೆ ನನ್ನನ್ನು ಕೆಲಸದಿಂದ ತೆಗೆದುಹಾಕಿದ್ರು. ನನಗೆ 35 ಸಾವಿರ ರೂಪಾಯಿ ಸಾಲ ಇದೆ. ಸಾಲಗಾರರ ಕಿರುಕುಳ ಹೆಚ್ಚಾಗಿತ್ತು. ಬೇರೆಡೆ‌‌ ಕೆಲಸಕ್ಕೆ ಟ್ರೈ ಮಾಡಿದರೂ ಸಿಗಲಿಲ್ಲ. ಕೊನೆಗೆ ಸರಗಳ್ಳತನಕ್ಕೆ ಮುಂದಾದೆ…” ಎಂದು ಆರೋಪಿ ಹೇಳಿದ್ದಾನೆ.
ಮನೆಯೊಳಗೆ ಅಕ್ಕ-ತಂಗಿ ನಿಗೂಢ ಸಾವು! 5 ದಿನದ ಹಿಂದೆ ಆ ಮನೆಗೆ ಬಂದು ಹೋಗಿದ್ದ ಅಕ್ಕನ ಗಂಡ

ಕಿಡ್ನ್ಯಾಪ್‌ ಆಗಿದ್ದ ಕೇರಳ ಯುವಕನನ್ನು ಪ್ರಾಣದ ಹಂಗು ತೊರೆದು ಕಾಪಾಡಿದ ಹಾಸನ ಪೊಲೀಸರು! ವಿಡಿಯೋ ವೈರಲ್​

ಗಂಡನಿಗೆ ಹಣದಾಹ, ಮಾವನಿಗೆ ಕಾಮದಾಹ… ಪೊಲೀಸರ ಮುಂದೆ ನರಕಯಾತನೆ ಬಿಚ್ಚಿಟ್ಟ ಯುವತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × three =
Remember me
