ಉಡುಪಿ:ಕಾಲೇಜಿಗೆ ರಜೆ ಹಿನ್ನೆಲೆ ಸ್ನೇಹಿತರೊಂದಿಗೆ ವಿಹಾರಕ್ಕೆಂದು ಬಂದಿದ್ದ ಮೂವರು ಬಿಇ ವಿದ್ಯಾರ್ಥಿಗಳು ಹೂಡೆ ಸಮೀಪದ ಬೀಚ್​ನಲ್ಲಿ ಆಟವಾಡಲು ಹೋಗಿ ದುರಂತ ಅಂತ್ಯಕಂಡಿದ್ದಾರೆ. ಮೃತರೆಲ್ಲರೂ ಮಣಿಪಾಲ ಎಂಐಟಿ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿಗಳು.
ಭಾನುವಾರ ರಜಾ ದಿನವಾದ್ದರಿಂದ ಮಣಿಪಾಲದ 15ಕ್ಕೂ ಅಧಿಕ ವಿದ್ಯಾರ್ಥಿಗಳು ಹೂಡೆ ಬೀಚ್​ಗೆ ವಿಹಾರಕ್ಕೆಂದು ಬಂದಿದ್ದರು. ಕೆಲವರು ಸಮುದ್ರ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ, ಬೃಹತ್ ಗಾತ್ರದ ಅಲೆ ಅಪ್ಪಳಿಸಿದ್ದು, ಅಲೆಗಳ ಹೊಡೆತಕ್ಕೆ ಸಿಲುಕಿ ಮೂವರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.
ಈ ಪೈಕಿ ಬೆಂಗಳೂರಿನ ನಿಶಾಂತ್​(21) ಹಾಗೂ ಷಣ್ಮುಗ(21) ಅವರನ್ನು ಹೊರಗೆ ಕರೆತರಲಾಯಿತ್ತಾದರೂ ಬದುಕಲಿಲ್ಲ. ನೀರಲ್ಲಿ ಮುಳುಗಿದ್ದರಿಂದ ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಹೈದರಾಬಾದ್​ನ ಶ್ರೀಕರ್(21) ನೀರಲ್ಲಿ ನಾಪತ್ತೆಯಾಗಿದ್ದ. ಶ್ರೀಕರ್​ಗಾಗಿ ಶೋಧಕಾರ್ಯ ಮುಂದುವರಿದಿತ್ತು. ಸೋಮವಾರ ಬೆಳಗ್ಗೆ ಶ್ರೀಕರ್​ ಮೃತದೇಹ ಪತ್ತೆಯಾಗಿದೆ. ಮೂವರ ಸಾವಿನ ಸುದ್ದಿ ಕೇಳಿ ಸಹಪಾಠಿಗಳು ಆಘಾತಗೊಂಡಿದ್ದಾರೆ.
ಸಾವು-ಬದುಕಿನ ನಡುವೆ ಹೋರಾಡುತ್ತಿರುವ ಸಿಪಿಐ ಇಲ್ಲಾಳ್: ಹೆಚ್ಚಿನ ಚಿಕಿತ್ಸೆಗೆ ಏರ್​ಲಿಫ್ಟ್ ಮೂಲಕ ಬೆಂಗಳೂರಿಗೆ ಸ್ಥಳಾಂತರ

ಸಾವು-ಬದುಕಿನ ನಡುವೆ ಹೋರಾಡುತ್ತಿರುವ ಸಿಪಿಐ ಇಲ್ಲಾಳ್: ಹೆಚ್ಚಿನ ಚಿಕಿತ್ಸೆಗೆ ಏರ್​ಲಿಫ್ಟ್ ಮೂಲಕ ಬೆಂಗಳೂರಿಗೆ ಸ್ಥಳಾಂತರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × three =
Remember me
