ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ದೊಡ್ಡ ಯಶಸ್ಸು ಸಾಧಿಸುವ ಉದ್ದೇಶ ಇಟ್ಟುಕೊಂಡು ಕಾರ್ಯಚಟುವಟಿಕೆ ಆರಂಭಿಸಿರುವ ಕಾಂಗ್ರೆಸ್ ಇಂದು (ಸೋಮವಾರ) ಮಹತ್ವ ಸಭೆ ಕರೆದಿದೆ.ಕ್ವೀನ್ಸ್ ರಸ್ತೆಯಲ್ಲಿರುವ ಇಂದಿರಾಗಾಂಧಿ ಭವನದಲ್ಲಿ ನಡೆಯುವ ಸಭೆಯಲ್ಲಿ ಕೆಪಿಸಿಸಿ ಪದಾಧಿಕಾರಿಗಳು, ಎಐಸಿಸಿ ಸದಸ್ಯರು, ಶಾಸಕರು, ಮಾಜಿ ಸಂಸದರು ಹಾಗೂ ಶಾಸಕರು, ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆ ಅಭ್ಯರ್ಥಿಗಳು, ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮುಂಚೂಣಿ ಘಟಕಗಳ ಅಧ್ಯಕ್ಷರು ಸೇರಿ ಒಂದು ಸಾವಿರ ಪ್ರಮುಖರು ಹಾಜರಿರುವರು.ಈ ಸಭೆಯಲ್ಲಿ ಮೊದಲಿಗೆ ಲೋಕಸಭೆ ಚುನಾವಣೆ ಉದ್ದೇಶವನ್ನಿಟ್ಟುಕೊಂಡು ಪಕ್ಷ ಸಂಘಟನೆ ಚುರುಕು ಗೊಳಿಸಲು ಅಗತ್ಯ ಸೂಚನೆ ನೀಡಲಾಗುತ್ತದೆ. ಜತೆ ಜತೆಗೆ ಗ್ಯಾರಂಟಿ ಯೋಜನೆ ಅನುಷ್ಠಾನವನ್ನು ಪ್ರಚಾರಕ್ಕೆ ಬಳಸಿಕೊಳ್ಳುವಂತೆ ಅಗತ್ಯ ಮಾಹಿತಿ ನೀಡಲಾಗುತ್ತದೆ. ಎರಡನೇಯದಾಗಿ ಸರ್ಕಾರದ ಮಹತ್ವಾಕಾಂಕ್ಷಿಯ ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಯು 11 ಸಾವಿರ ಸ್ಥಳಗಳಲ್ಲಿ ಏಕಕಾಲದಲ್ಲಿ ನಡೆಯಲಿದ್ದು, ಅಂತಹ ಕಡೆ ಕಾರ್ಯರ್ಕರನ್ನು ಸೇರಿಸಿ ಜನರ ನಡುವೆ ಸಂಚಲನ ಮೂಡಿಸುವ ಕೆಲಸವಾಗಬೇಕೆಂದು ನಿರ್ದೇಶನ ಕೊಡಲಾಗುತ್ತದೆ. ಏಕೆಂದರೆ, ಸರಿಸುಮಾರು ಒಂದು ಕೋಟಿಗಿಂತ ಹೆಚ್ಚಿನ ಮನೆಗಳಲ್ಲಿ ಈ ಯೋಜನೆ ಲಾನುಭವಿಗಳಿರುತ್ತಾರೆ, ನೇರವಾಗಿ ಪ್ರತಿ ತಿಂಗಳು ಎರಡು ಸಾವಿರ ರೂ. ಜಮಾ ಆಗುವ ಕಾರಣ ಹೆಚ್ಚು ಪರಿಣಾಮಕಾರಿಯಾಗಿರಲಿದೆ, ಇದರ ಲಾಭ ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಸಿಗಬೇಕೆಂಬುದು ಪಕ್ಷದ ಬಯಕೆಯಾಗಿದೆ. ಹೀಗಾಗಿ ಗೃಹ ಲಕ್ಷ್ಮಿ ಯೋಜನೆಗೆ ಸಾಕಷ್ಟು ಒತ್ತುಕೊಡಲಾಗುತ್ತಿದೆ.ಮೂರನೇ ವಿಷಯವಾಗಿ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ತಯಾರಾಗುವುದು ಮತ್ತು ಪಕ್ಷವನ್ನು ಸಜ್ಜುಗೊಳಿಸಲು ಸೂಚನೆ ನೀಡಲಾಗುತ್ತದೆ. ಜತೆಗೆ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ, ಬಿಜೆಪಿ ಹಾಗೂ ಜೆಡಿಎಸ್‌ನ ರಾಜಕೀಯ ಟೀಕೆಗಳಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡುವುದರ ಕುರಿತಂತೆಯೂ ನಾಯಕರು ಸೂಚನೆ ನೀಡಲಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರೆಲ್ಲ ಪಾಲ್ಗೊಳ್ಳುವರು.ಸಭೆ ಕುರಿತು ವಿಜಯವಾಣಿಗೆ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಲೋಕಸಭೆ ಚುನಾವಣೆಗೆ ಮುನ್ನ ಪಕ್ಷದ ಸಂಘಟನೆಯನ್ನು ಸಕ್ರಿಯವಾಗಿಡುವುದು, ಸರ್ಕಾರದ ಯೋಜನೆಗಳ ಪ್ರಚಾರ ಸೇರಿ ವಿವಿಧ ಉದ್ದೇಶವನ್ನಿಟ್ಟುಕೊಂಡು ಸಭೆ ಕರೆಯಲಾಗಿದೆ. ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯವರು ಸಭೆಯಲ್ಲಿ ಪಾಳ್ಗೊಳ್ಳುವವರಿಗೆ ಮಾರ್ಗದರ್ಶನ ಮಾಡಲಿದ್ದಾರೆ ಎಂದು ವಿವರಿಸಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:15 + two =
Remember me
