ಬಾಗಲಕೋಟೆ:ಸಂಬಂಧಿಕರೊಬ್ಬರ ಅಂತ್ಯಸಂಸ್ಕಾರಕ್ಕೆಂದು ತೆರಳಿದ್ದ ಮೂವರು ವಾಪಸ್​ ಮನೆಗೆ ಬರುವಾಗ ದುರಂತ ಅಂತ್ಯಕಂಡಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಗದಗ ಜಿಲ್ಲೆ ಡ.ಸ ಹಡಗಲಿ ಗ್ರಾಮದ ಬಸನಗೌಡ ಪಾಟಿಲ್(60), ಮಂಜುನಾಥ ಮಾರನಬಸರಿ(38) ಮತ್ತು ಸಂಗಮ್ಮ ಪಾಟಿಲ್(55) ಮೃತ ದುರ್ದೈವಿಗಳು. ಇವರೆಲ್ಲರೂ ಬಾಗಲಕೋಟೆ ತಾಲೂಕಿನ ಭಗವತಿ ಗ್ರಾಮಕ್ಕೆ ನಿನ್ನೆ(ಸೋಮವಾರ) ಸಂಬಂಧಿಕರೊಬ್ಬರ ಅಂತ್ಯಸಂಸ್ಕಾರಕ್ಕೆ ಕಾರಿನಲ್ಲಿ ಬಂದಿದ್ದರು. ಅಂತ್ಯಸಂಸ್ಕಾರ ಮುಗಿದ ಬಳಿಕ ಸೋಮವಾರ ರಾತ್ರಿ ವಾಪಸ್​ ಕಾರಿನಲ್ಲಿ ಸ್ವಗ್ರಾಮಕ್ಕೆ ಹಿಂತಿರುಗುತ್ತಿದ್ದರು. ಬಾದಾಮಿ ತಾಲೂಕಿನ ಜಾಲಿಹಾಳ ಗ್ರಾಮದ ಬಳಿ ಟ್ರ್ಯಾಕ್ಟರ್​ ರೂಪದಲ್ಲಿ ಬಂದ ಜವರಾಯ ಮೂವರ ಪ್ರಾಣ ಹೊತ್ತೊಯ್ದಿದ್ದಾನೆ.
ಜಾಲಿಹಾಳ ಗ್ರಾಮದ ಬಳಿ ಕಾರು ಮತ್ತು ಟ್ರ್ಯಾಕ್ಟರ್​ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಓರ್ವ ಮಹಿಳೆ ಗದಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಮತ್ತಿಬ್ಬರ ಸ್ಥಿತಿ ಗಂಭೀರವಾಗಿದ್ದು, ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಮಕೂರಲ್ಲಿ ಬುದ್ಧಿಮಾಂದ್ಯೆ ಮೇಲೆ ಅತ್ಯಾಚಾರವೆಸಗಿದ್ದ ಎಎಸ್​ಐಗೆ 20 ವರ್ಷ ಜೈಲು! 4 ವರ್ಷದ ಹಿಂದೆ ನಡೆದಿತ್ತು ಹೀನ ಕೃತ್ಯ

ಕೋವಿಡ್​-19 ಬೋರ್ಡ್​ ಹಾಕಿಕೊಂಡು ಎರಡೂವರೆ ಕೋಟಿ ಮೌಲ್ಯದ ರಕ್ತಚಂದನ ಸಾಗಿಸುತ್ತಿದ್ದ ಖತರ್ನಾಕ್​ ಕಳ್ಳ!

ಕೋವಿಡ್​-19 ಬೋರ್ಡ್​ ಹಾಕಿಕೊಂಡು ಎರಡೂವರೆ ಕೋಟಿ ಮೌಲ್ಯದ ರಕ್ತಚಂದನ ಸಾಗಿಸುತ್ತಿದ್ದ ಖತರ್ನಾಕ್​ ಕಳ್ಳ!

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:three × 1 =
Remember me
