ಕೋಲಾರ:ಪ್ಯಾಸೆಂಜರ್​ ರೈಲಿಂದ ಇಳಿದು ಹಳಿ ಮೇಲೆ ಕುಳಿತಿದ್ದ ಪ್ರಯಾಣಿಕನಿಗೆ ಮತ್ತೊಂದು ರೈಲು ಡಿಕ್ಕಿ ಹೊಡೆದ ಪರಿಣಾಮ ಆ ಪ್ರಯಾಣಿಕ ಸ್ಥಳದಲ್ಲೇ ದುರಂತ ಅಂತ್ಯಕಂಡ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಟೇಕಲ್ ಸ್ಟೇಷನ್​ನಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ.
ಪ್ರಯಾಣಿಕರನ್ನು ತುಂಬಿಕೊಂಡು ಮಾರಿಕುಪ್ಪಂನಿಂದ ಬೆಂಗಳೂರಿನ ಕಡೆಗೆ ಹೊರಟಿದ್ದ ಸ್ವರ್ಣ ಟ್ರೈನ್, ಸಿಗ್ನಲ್ ಸಮಸ್ಯೆಯಿಂದ ಟೇಕಲ್ ಸ್ಟೇಷನ್​ನಲ್ಲಿ ಟ್ರ್ಯಾಕ್ ಮೇಲೆಯೇ ನಿಂತಿತ್ತು. ಈ ವೇಳೆ ಮೈಸೂರಿನಿಂದ ಚೆನ್ನೈ ಕಡೆಗೆ ಎಕ್ಸ್‌ಪ್ರೆಸ್‌ ರೈಲು ಹೋಗುತ್ತಿತ್ತು. ತಾಂತ್ರಿಕ ದೋಷದಿಂದ ಸ್ಥಗಿತಗೊಂಡ ರೈಲಿನಿಂದ ಪ್ರಯಾಣಿಕರು ಇಳಿಯುತ್ತಿದ್ದರು. ಮೈಸೂರಿನಿಂದ ಚೆನ್ನೈಗೆ ಹೋಗುತ್ತಿದ್ದ ರೈಲಿಗೆ ಸ್ವರ್ಣ ಟ್ರೈನಿನ ಪ್ರಯಾಣಿಕರು ಸಿಲುಕಿದ್ದಾರೆ. ಈ ದುರಂತದಲ್ಲಿ ಪ್ರಯಾಣಿಕನೊಬ್ಬ ಮೃತಪಟ್ಟಿದ್ದಾನೆ.
ಈ ದುರಂತಕ್ಕೆ ಸ್ಟೇಷನ್ ಮಾಸ್ಟರ್​ನ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಮತ್ತು ಇತರ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಕಂಟೋನ್ಮೆಂಟ್ ಪೊಲೀಸರು ಮೃತ ವ್ಯಕ್ತಿಯ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಮಂಡ್ಯದಲ್ಲಿ ಇದೆಂಥಾ ಅಸಹ್ಯ? ಗ್ರಾಮದೇವತೆ ಹಬ್ಬದಲ್ಲಿ ಬಾಲಕನನ್ನು ಎಳೆದಾಡಿ ಅಶ್ಲೀಲವಾಗಿ ವರ್ತಿಸಿದ ನರ್ತಕಿಯರು!

ನಾವು ಲವ್​ ಮಾಡಿದ್ದೇ ತಪ್ಪಾ? ಚಿತ್ರಹಿಂಸೆ ಕೊಡ್ತಿದ್ದಾರೆ.. ಪ್ಲೀಸ್​ ನಮ್ಮನ್ನು ಕಾಪಾಡಿ.. ಬೆಂಗಳೂರಲ್ಲಿ ಸಚಿವರ ಪುತ್ರಿ ಕಣ್ಣೀರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 3 =
Remember me
