ಬೆಂಗಳೂರು:ಕೋವಿಡ್‌ ಸಂಕಷ್ಟದ ಸಮಯದಲ್ಲಿ ಮುಷ್ಕರ ಹೂಡುವುದು ಸರಿಯಲ್ಲ, ಅದರಿಂದ ಸಾರ್ವಜನಿಕರ ಮೂಲಭೂತ ಹಕ್ಕುಗಳಿಗೆ ಧಕ್ಕೆಯಾಗಲಿದೆ. ಕೂಡಲೇ ಸೇವೆ ಆರಂಭಿಸಿ ಎಂದು ಮುಷ್ಕರ ನಿರತ ಸಾರಿಗೆ ನೌಕರರಿಗೆ ಹೈಕೋರ್ಟ್​ ಮಂಗಳವಾರ ಸೂಚಿಸಿದ್ದರ ಪರಿಣಾಮ ಹಲವರು ಕೆಲಸಕ್ಕೆ ಹಾಜರ್​ ಆಗಿದ್ದಾರೆ.
6ನೇ ವೇತನ ಆಯೋಗದ ಶಿಫಾರಸು ಜಾರಿಗೆ ಆಗ್ರಹಿಸಿ ಕಳೆದ 15 ದಿನಗಳಿಂದ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಈ ಮುಷ್ಕರಕ್ಕೆ ಸಂಬಂಧಿಸಿದಂತೆ ಮಂಗಳವಾರ ಹೈಕೋರ್ಟ್, ಸದ್ಯದ ಸ್ಥಿತಿಯಲ್ಲಿ ಮುಷ್ಕರ ನಡೆಸುವುದು ಒಳ್ಳೆಯದಲ್ಲ. ನೌಕರರು ಕೆಲಸಕ್ಕೆ ಹಾಜರಾಗುವಂತೆ ಮೌಖಿಕ ಸೂಚನೆ ನೀಡಿತ್ತು. ಹೀಗಿದ್ದಾಗ್ಯೂ ನೌಕರ ಮುಖಂಡರು ಮುಷ್ಕರದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದರು.
ಆದರೆ, ಬುಧವಾರ ಕೆಲ ನೌಕರರು ಸ್ವಯಂ ಪ್ರೇರಿತವಾಗಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಪರಿಣಾಮ ಬುಧವಾರ ಸರ್ಕಾರಿ ಬಸ್ ಸಂಚಾರ ಪ್ರಮಾಣ ಹೆಚ್ಚಾಗಿದೆ. ಮಧ್ಯಾಹ್ನ 12 ಗಂಟೆ ವೇಳೆಗೆ ನಾಲ್ಕು ನಿಗಮಗಳಿಂದ 9229 ಬಸ್ ಗಳು ಸೇವೆ ನೀಡಿವೆ.
ಕೂಡಲೇ ಬಸ್‌ ಸೇವೆ ಆರಂಭಿಸಿ; ಮುಷ್ಕರನಿರತ ಸಾರಿಗೆ ನೌಕರರಿಗೆ ಹೈಕೋರ್ಟ್ ಸೂಚನೆ

ಇಬ್ಬರು ಯುವತಿಯರೊಂದಿಗೆ ಯುವಕನ ಲವ್ವಿಡವ್ವಿ! ಪ್ರಶ್ನಿಸಿದ ಪೋಷಕರಿಗೆ ಶಾಕಿಂಗ್​ ಉತ್ತರ ಕೊಟ್ಟ ಪ್ರಿಯಕರ

ಗಂಡನ ಬಿಟ್ಟು ಅತ್ತೆಮಗನ ಜತೆ ಬಂದವಳ ಬದುಕಲ್ಲಿ ದುರಂತ! ಪ್ರಿಯಕರನಿಂದಲೇ ನಡೆಯಿತು ಘೋರ ಕೃತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
