ಉತ್ತರಕನ್ನಡ:ಕರೊನಾ ಸೋಂಕಿನ ಭೀತಿ ನಡುವೆಯೂ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಲೆಂದು ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಮಾರ್ಗ ಮಧ್ಯೆ ಮತ್ತೊಂದು ಸಮಸ್ಯೆ ಎದುರಾಗಿ ಆತಂಕ ತಂದೊಡ್ಡಿತ್ತು.
ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಯಾಣ ರಸ್ತೆಯಲ್ಲಿ ಶುಕ್ರವಾರ ಬೆಳಗ್ಗೆ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಕೆಎಸ್ಆರ್​ಟಿಸಿ ಬಸ್​ನಲ್ಲಿ ಕರೆದೊಯ್ಯಲಾಗುತ್ತಿತ್ತು. ಯಾಣ ರಸ್ತೆಯ ಮಾರ್ಗದಲ್ಲಿ ಬಿರುಗಾಳಿ ಸಹಿತ ಮಳೆಗೆ ಬೃಹತ್ ಮರವೊಂದು ಬಿದ್ದಿತ್ತು. ಹಾಗಾಗಿ ಬಸ್​ ಅನ್ನು ಅಲ್ಲೇ ನಿಲ್ಲಿಸಿದ್ದರಿಂದ ವಿದ್ಯಾರ್ಥಿಗಳು ಭಯಗೊಂಡಿದ್ದರು. ಈ ವೇಳೆ ಸಮಯಪ್ರಜ್ಞೆ ಮೆರೆಯುವ ಮೂಲಕ ಡ್ರೈವರ್ ಮತ್ತು ಕಂಡಕ್ಟರ್ ಮಕ್ಕಳ ಆತಂಕ ದೂರ ಮಾಡಿದರು.ಇದನ್ನೂ ಓದಿರಿಆಂಬುಲೆನ್ಸ್​ನಲ್ಲೇ ಹೆರಿಗೆ
ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರದ ರಂಬೆ-ಕೊಂಬೆಗಳನ್ನು ಚಾಲಕ ಮತ್ತು ನಿರ್ವಾಹಕ ಇಬ್ಬರೇ ಪ್ರಯಾಸಪಟ್ಟು ತೆರವುಗೊಳಿಸಿದರು. ಸಮಯಕ್ಕೆ ಸರಿಯಾಗಿ ವಿದ್ಯಾರ್ಥಿಗಳನ್ನ ಪರೀಕ್ಷಾ ಕೇಂದ್ರಕ್ಕೆ ತಲುಪಿಸಿದರು. ಇವರ ಕಾರ್ಯಕ್ಕೆ ವಿದ್ಯಾರ್ಥಿಗಳು ಮತ್ತು ಪಾಲಕರು ಕೃತಜ್ಞತೆ ಸಲ್ಲಿಸಿದ್ದಾರೆ.
ಕೆಎಸ್​ಆರ್​ಟಿಸಿ ಸಿಬ್ಬಂದಿಯ ಕಾರ್ಯಕ್ಕೆ ಮುಚ್ಚುಗೆ ವ್ಯಕ್ತಪಡಿಸಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್​, ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. ‘ಉತ್ತರ ಕನ್ನಡ ಜಿಲ್ಲೆಯ ಯಾಣ ಮತ್ತು ಕುಮಟಾ ರಸ್ತೆಯಲ್ಲಿ ಮರ ಬಿದ್ದು ರಸ್ತೆ ಬಂದಾಗಿತ್ತು. ಕೆಎಸ್​ಆರ್​ಟಿಸಿ ಸಿಬ್ಬಂದಿಗಳ ಶ್ರಮದಿಂದ ಎಲ್ಲ ವಿದ್ಯಾರ್ಥಿಗಳು ಸುರಕ್ಷಿತವಾಗಿ ನಿಗದಿತ ಸಮಯದಲ್ಲಿ ಪರೀಕ್ಷಾ ಕೇಂದ್ರ ತಲುಪಿದ್ದಾರೆ’ ಎಂದು ಹೇಳಿಕೊಂಡಿರುವ ಸಚಿವರು, ಸಿಬ್ಬಂದಿ ಮರ ತೆರವು ಮಾಡುತ್ತಿದ್ದ ಫೋಟೋಗಳನ್ನೂ ಶೇರ್​ ಮಾಡಿಕೊಂಡಿದ್ದಾರೆ.
ಜನರ ಎದುರಲ್ಲೇ ಕೈ-ಕಮಲ ಬೀದಿ ರಂಪಾಟ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nine − 3 =
Remember me
