ತುಮಕೂರು:ಕೂಲಿ ಕೆಲಸಕ್ಕಾಗಿ ರಾಯಚೂರು ಜಿಲ್ಲೆಯಿಂದ ಬೆಂಗಳೂರಿಗೆ ತೆರಳುತ್ತಿದ್ದವರು ಮಾರ್ಗಮಧ್ಯೆ ಅಪಘಾತದಲ್ಲಿ ದುರಂತ ಅಂತ್ಯ ಕಂಡ ಹೃದಯವಿದ್ರಾವಕ ಘಟನೆ ಶಿರಾ ತಾಲೂಕಿನ ಕಳ್ಳಂಬೆಳ್ಳದ ಬಾಲೆನಹಳ್ಳಿ ಗೇಟ್ ಬಳಿ ಇಂದು(ಗುರುವಾರ) ಬೆಳಗ್ಗೆ ಸಂಭವಿಸಿದೆ. ಮೃತರ ಸಂಖ್ಯೆ 10ಕ್ಕೇರಿದ್ದು, ಈ ಪೈಕಿ ಒಂದೇ ಕುಟುಂಬದ ನಾಲ್ವರು ಸೇರಿದ್ದಾರೆ. ನೋವಿನಲ್ಲೂ ಕುಟುಂಬಸ್ಥರು ಮೃತರ ಕಣ್ಣುಗಳನ್ನು ದಾನ ಮಾಡಿದ್ದು, ಮನಕಲಕುತ್ತೆ.
ಮೃತರೆಲ್ಲರೂ ಕೂಲಿ ಕಾರ್ಮಿಕರಾಗಿದ್ದು, ಈ ಪೈಕಿ ಇಬ್ಬರು ಮಕ್ಕಳು. ರಾಯಚೂರು ಜಿಲ್ಲೆಯಿಂದ ಬೆಂಗಳೂರಿಗೆ ಕೂಲಿ ಕೆಲಸ ಅರಸಿ ಕ್ರೂಸರ್​ ವಾಹನದಲ್ಲಿ ಗುಳೆ ಹೊರಟ್ಟಿದ್ದರು. ಮಾರ್ಗಮಧ್ಯೆ ಕ್ರೂಸರ್​ ಮತ್ತು ಲಾರಿ ನಡುವೆ ಭೀಕರ ಅಪಘಾತದಲ್ಲಿ 9 ಮಂದಿ ಸ್ಥಳದಲ್ಲೇ ಮೃತಪಟ್ಟರು. ಇನ್ನೊಬ್ಬರು ಬೆಂಗಳೂರಿನ ನಿಮ್ಹಾನ್ಸ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಈ ಪೈಕಿ 6 ಜನರ ಕಣ್ಣುಗಳನ್ನು ದಾನ ಮಾಡಲಾಗಿದ್ದು, ಸಾವಿನಲ್ಲೂ ಸಾರ್ಥಕತೆ ಮೆರೆಯಲಾಗಿದೆ.
ಸುಜಾತ, ಮೀನಾಕ್ಷಿ, ಮೂರು ವರ್ಷದ ಮಗು ವಿನೋದ್ ಮತ್ತು ಕೃಷ್ಣಪ್ಪ, ಪ್ರಭು, ಸಿದ್ದಾರ್ಥ ಅವರ ಕಣ್ಣುಗಳನ್ನು ದಾನ ಮಾಡಲಾಗಿದೆ. ಇದರಲ್ಲಿ ಒಂದೇ ಕುಟುಂಬದ ಮೂವರು ಇದ್ದಾರೆ.
ಚಾಮರಾಜಪೇಟೆ ಮೈದಾನದಲ್ಲಿ ಯಥಾಸ್ಥಿತಿ ಕಾಪಾಡಲು ಹೈಕೋರ್ಟ್​ ಸೂಚನೆ! ಗಣೇಶೋತ್ಸವಕ್ಕಿಲ್ಲ ಅವಕಾಶ

ತುಮಕೂರಲ್ಲಿ ಭೀಕರ ಅಪಘಾತ: 10ಕ್ಕೇರಿದ ಸಾವಿನ ಸಂಖ್ಯೆ, ಮೃತರ ಪೈಕಿ ನಾಲ್ವರು ಒಂದೇ ಮನೆಯರು!

ಅತ್ಯಾಚಾರ ಆರೋಪಿಯನ್ನೇ ಮದ್ವೆಯಾದ ಯುವತಿ! ಪೋಕ್ಸೋ ಪ್ರಕರಣ ರದ್ದುಪಡಿಸಿದ ಹೈಕೋರ್ಟ್​

ಪರಸ್ತ್ರೀಗಾಗಿ ಕೋಮುಗಲಭೆ ನಾಟಕ! ಶಿವಮೊಗ್ಗ ಪೊಲೀಸರನ್ನೇ ಬೆಚ್ಚಿಬೀಳಿಸಿದ್ದ ಪತ್ರ, ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ರಹಸ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 4 =
Remember me
