ತುಮಕೂರು:ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣದಲ್ಲಿ ಸಹಾಯಕ ಪೊಲೀಸ್ ಸಬ್​ಇನ್ಸ್ ಪೆಕ್ಟರ್ ಉಮೇಶಯ್ಯ ವಿರುದ್ಧದ ಆರೋಪ ಸಾಬೀತಾಗಿದೆ.
2017ರ ಜ.15ರಂದು ನೈಟ್ ರೌಂಡ್ಸ್​ನಲ್ಲಿದ್ದ ಗ್ರಾಮಾಂತರ ಪೊಲೀಸ್​ ಠಾಣೆ ಎಎಸ್​ಐ ಉಮೇಶಯ್ಯ, ತುಮಕೂರು ನಗರದ ಅಂತರಸನಹಳ್ಳಿ ಸೇತುವೆ ಬಳಿ ಹೋಗುತಿದ್ದ ಬುದ್ಧಿಮಾಂದ್ಯೆಯನ್ನು ಖಾಸಗಿ ಜೀಪ್​ನಲ್ಲಿ ಕೂರಿಸಿಕೊಂಡು ಅತ್ಯಾಚಾರ ಎಸಗಿದ್ದ. ಸಂತ್ರಸ್ತೆಯ ಪೋಷಕರು ಎಎಸ್​ಐ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣ ರಾಜ್ಯಾದ್ಯಂತ ಭಾರಿ ಸದ್ದು ಮಾಡಿತ್ತು, ಪೊಲೀಸ್​ ಇಲಾಖೆಯೂ ತಲೆತಗ್ಗಿಸುವಂತಹ ಕೃತ್ಯ ಎಸಗಿದ್ದ ಉಮೇಶಯ್ಯ ವಿರುದ್ಧ ಕಠಿಣ ಕ್ರಮಕ್ಕೆ ಸಾರ್ವಜನಿಕರಿಂದ ಆಗ್ರಹ ದಟ್ಟವಾಗಿ ಕೇಳಿಬಂದಿತ್ತು.
ಈ ಪ್ರಕರಣದ ವಿಚಾರಣೆ ನಡೆಸಿದ 2ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಚ್.ಎಸ್. ಮಲ್ಲಿಕಾರ್ಜುನ ಸ್ವಾಮಿ, ಆರೋಪ ಸಾಬೀತಾಗಿದ್ದು ಉಮೇಶಯ್ಯ ತಪ್ಪಿತಸ್ಥನೆಂದು ನಿನ್ನೆ(ಜ.28) ತೀರ್ಪು ನೀಡಿದ್ದಾರೆ. ಜ.31ರಂದು ಶಿಕ್ಷೆ ಪ್ರಮಾಣ ಪ್ರಕಟಿಸಲಿದ್ದಾರೆ. ಸರ್ಕಾರಿ ಅಭಿಯೋಜಕಿ ವಿ.ಎ. ಕವಿತಾ ವಾದ ಮಂಡಿಸಿದ್ದರು. ಎರಡನೇ ಆರೋಪಿ ಖಾಸಗಿ ವಾಹನ ಚಾಲಕ ಈಶ್ವರನನ್ನು ನ್ಯಾಯಾಲಯವು ಆರೋಪದಿಂದ ಮುಕ್ತಗೊಳಿಸಿದೆ. ಅಪರಾಧಿ ಉಮೇಶಯ್ಯಗೆ 12 ವರ್ಷ ಜೈಲು ಶಿಕ್ಷೆ ಮತ್ತು ಸಂತ್ರಸ್ತೆಗೆ ಪರಿಹಾರ ಸಿಗುವ ಸಾಧ್ಯತೆ ಇದೆ.
10 ರೂ. ಕೊಡೋ ಯೋಗ್ಯತೆ ಇಲ್ಲ, ಕಾರ್ ತಗೋತೀಯಾ? ಎಂದ ಶೋ ರೂಂ ಸಿಬ್ಬಂದಿಗೆ 1 ತಾಸಲ್ಲೇ ಶಾಕ್​ ಕೊಟ್ಟ ಯುವರೈತ!

ಬಿಎಸ್​ವೈ ಮೊಮ್ಮಗಳು ಆತ್ಮಹತ್ಯೆ: ಡಾ.ಸೌಂದರ್ಯ ಸಾವಿನ ಮನೆಯ ಕದ ತಟ್ಟಿದ ಆ ಕ್ಷಣ…

10 ರೂ. ಕೊಡೋ ಯೋಗ್ಯತೆ ಇಲ್ಲ, ಕಾರ್ ತಗೋತೀಯಾ? ಎಂದ ಶೋ ರೂಂ ಸಿಬ್ಬಂದಿಗೆ 1 ತಾಸಲ್ಲೇ ಶಾಕ್​ ಕೊಟ್ಟ ಯುವರೈತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 11 =
Remember me
