ತುಮಕೂರು:ಜಿಲ್ಲಾ ಬಿಜೆಪಿ ಮುಖಂಡರೊಬ್ಬರ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನ ಪ್ರಕರಣ ಸಂಬಂಧ ಲೋಕೋಪಯೋಗಿ ಇಲಾಖೆಯ ಇಬ್ಬರು ಇಂಜಿನಿಯರ್​ಗಳನ್ನು ಕೆಲಸದಿಂದ ಅಮಾನುತು ಮಾಡಲಾಗಿದೆ.
ತುಮಕೂರು ಲೋಕೋಪಯೋಗಿ ವೃತ್ತದ ಸಹಾಯಕ ಇಂಜಿನಿಯರ್ ಶಂಭುಕುಮಾರ್ ಮತ್ತು ಬೆಂಗಳೂರು ಕೆಆರ್ ವೃತ್ತದ ಲೋಕೋಪಯೋಗಿ ಇಲಾಖೆ ಪಿಆರ್​ಎಎಂಸಿ ವಿಭಾಗದ ಇಂಜಿನಿಯರ್ ಎಂ. ಅಶ್ವಿನಿ ಅವರನ್ನು ಅಮಾನತು ಮಾಡಲಾಗಿದೆ.
ತುಮಕೂರು ಬಿಜೆಪಿ ಜಿಲ್ಲಾ ಘಟಕದ ಎಸ್​ಸಿ ಮೋರ್ಚಾ ಅಧ್ಯಕ್ಷ ಓಂಕಾರೇಶ್ವರ್ ಅವರ ಮೇಲೆ ಕಾರು ಹರಿಸಿ ಕೊಲೆ ಮಾಡಲು ಶಂಭುಕುಮಾರ್, ಅಶ್ವಿನಿ ಮತ್ತು ಮತ್ತೊಬ್ಬ ಮಹಿಳೆ ಯತ್ನಿಸಿದ್ದರು ಎಂದು ಏಪ್ರಿಲ್ 12ರಂದು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಶ್ವಿನಿಯನ್ನು ಬಂಧಿಸಿದ್ದ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಶಂಭುಕುಮಾರ್ ತಲೆಮರೆಸಿಕೊಂಡಿದ್ದಾನೆ. ಈತನಿಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಲೋಕೋಪಯೋಗಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಜಯಲಕ್ಷ್ಮೀ ಅವರು ಇಂಜಿನಿಯರ್​ಗಳಾದ ಶಂಭುಕುಮಾರ್ ಮತ್ತು ಅಶ್ವಿನಿ ಅವರನ್ನು ಕೆಲಸದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಕುಣಿಗಲ್​ನಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು, 6 ಜನರ ಸ್ಥಿತಿ ಗಂಭೀರ

ದಕ್ಷಿಣ ಕನ್ನಡದಲ್ಲಿ ಕಟ್ಟಡವೊಂದರ ಮೇಲಿಂದ ಸುರಿಯಿತು ಹಣದ ಮಳೆ! ನೋಟುಗಳನ್ನ ಆಯ್ದುಕೊಳ್ಳಲು ಮುಗಿಬಿದ್ದ ಜನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × two =
Remember me
