ತುಮಕೂರು:ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸಾಮಾಜಿಕ ಜಾಲತಾಣ ವಿಭಾಗದ ಕಾರ್ಯಕರ್ತನ ಮೇಲೆ ಮಾಜಿ ಜಿಲ್ಲಾಧ್ಯಕ್ಷ ಬಿ.ಸುರೇಶ್​ಗೌಡರ ಬೆಂಬಲಿಗನೊಬ್ಬ ತೀವ್ರ ಹಲ್ಲೆ ನಡೆಸಿರುವ ಪ್ರಕರಣ ಹೊಸ ಬಡಾವಣೆ ಠಾಣೆ ಮೆಟ್ಟಿಲೇರಿದೆ.
ಮಂಗಳವಾರ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆ ಹಿನ್ನೆಲೆಯಲ್ಲಿ ಪಕ್ಷದ ಹಿರಿಯ ಮುಖಂಡರು ಭಾಗವಹಿಸಿದ್ದ ಸಂದರ್ಭದಲ್ಲಿಯೇ ಕಾರ್ಯಕರ್ತರ ನಡುವೆ ಗಲಾಟೆಯಾಗಿದೆ. ಕ್ಯಾತಸಂದ್ರದ ಬಿಜೆಪಿ ಕಾರ್ಯಕರ್ತ ಕಾಂತರಾಜು, ಸಾಮಾಜಿಕ ಜಾಲತಾಣದ ಪ್ರಚಾರದಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ವಿಭಾಗದ ಸಂಚಾಲಕ ವಿನಯ ಅದ್ವೈತ್​​ ಮೇಲೆ ತೀವ್ರ ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಭೇಟಿಯಾಗಿದ್ದ ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಬಿ.ಸುರೇಶ್​ಗೌಡ ಅವರ ಹೆಸರನ್ನು ಸಾಮಾಜಿಕ ಜಾಲತಾಣದ ಪ್ರಚಾರದಲ್ಲಿ ಬಳಸಿಲ್ಲ ಎಂಬ ಕಾರಣಕ್ಕೆ ಅದ್ವೈತ್​ ಮೇಲೆ ಹಲ್ಲೆ ನಡೆದಿದೆ.
ಶಿಸ್ತಿನ ಪಕ್ಷದ ಯುವ ಕಾರ್ಯಕರ್ತರು ಪಕ್ಷದ ಕಚೇರಿಯಲ್ಲಿಯೇ ಬಡಿದಾಡಿಕೊಂಡು ಠಾಣೆಯಲ್ಲಿ ದೂರು ದಾಖಲಿಸಿರುವುದು ಪಕ್ಷದ ಮುಖಂಡರ ನಡುವೆಯೇ ಮುಸುಕಿನ ಗುದ್ದಾಟಕ್ಕೂ ಕಾರಣವಾಗಿದೆ. ಹೊಸ ಬಡಾವಣೆ ಠಾಣೆಯಲ್ಲಿ ಮಂಗಳವಾರ ಸಂಜೆ ಪ್ರಕರಣ ದಾಖಲಾಗಿದೆ.
ಬೆಂಗಳೂರಲ್ಲಿ ರೋಗಿಯ ಪ್ರಾಣ ಉಳಿಸಲು ಸ್ವತಃ ತಾನೇ ಮೆಕ್ಯಾನಿಕ್ ಆದ ಪೊಲೀಸ್​! ತಪ್ಪಿತು ಅನಾಹುತ, ಪೇದೆ ಕಾರ್ಯಕ್ಕೆ ಶ್ಲಾಘನೆ

ಮುದ್ದಹನುಮೇಗೌಡ ಬಿಜೆಪಿ ಅಭ್ಯರ್ಥಿ? ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿಸಲು ಚಿಂತನೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × 3 =
Remember me
