ತುಮಕೂರು:ನಿಂತಿದ್ದ ಲಾರಿಗೆ ಹಿಂಬದಿಯಿಂದ ಇನೋವಾ ಕಾರು ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಒಂದು ಮಗುವಿನ ಸ್ಥಿತಿ ಗಂಭೀರವಾಗಿದೆ.
ಇಂತಹ ಭೀಕರ ಅಪಘಾತ ಭಾನುವಾರ ಬೆಳಗ್ಗೆ ತುಮಕೂರು ತಾಲೂಕಿನ ಕಟ್ಟಿಗೇನಗಹಳ್ಳಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಸಂಭವಿಸಿದೆ. ಕಾರಿನಲ್ಲಿ 7 ಮಂದಿ ಪ್ರಯಾಣಿಸುತ್ತಿದ್ದರು. ಕಟ್ಟಿಗೇನಗಹಳ್ಳಿ ಗೇಟ್ ಬಳಿ ರಸ್ತೆಬದಿ ಲಾರಿಯೊಂದು ನಿಂತಿತ್ತು. ತುಮಕೂರು ಕಡೆಯಿಂದ ಶಿರಾದತ್ತ ತೆರಳುತ್ತಿದ್ದ ಕಾರು ಲಾರಿಗೆ ಡಿಕ್ಕಿಯಾಗಿದೆ.
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಮೂವರು ದುರಂತ ಅಂತ್ಯ ಕಂಡಿದ್ದಾರೆ. ಕಾರಿನಲ್ಲಿದ್ದ ಒಂದು ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಇನ್ನೂ ಮೂವರು ಮಕ್ಕಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರ ಹೆಸರು ವಿಳಾಸ ಇನ್ನೂ ತಿಳಿದುಬಂದಿಲ್ಲ. ಸ್ಥಳಕ್ಕೆ ಬಂದ ಕೋರಾ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಖಾಸಗಿ ವಾಹನಕ್ಕೆ ಸರ್ಕಾರಿ ಲಾಂಛನ-ನಾಮಫಲಕ ಹಾಕಿಕೊಂಡು ಪ್ರವಾಸಕ್ಕೆ ಬಂದ ಗ್ರಾಪಂ ಅಧ್ಯಕ್ಷ!

ಕೇಸರಿ ಶಾಲು ಧರಿಸಿ ಶ್ರೀರಾಮನವಮಿ ಆಚರಿಸಿದ ಮುಸ್ಲಿಮರು! ಪಾನಕ ಹಂಚಿ ನಾವೆಲ್ಲರೂ ಒಂದೇ ಎಂಬ ಸಂದೇಶ ರವಾನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − twelve =
Remember me
