ತುಮಕೂರು:ಕರೊನಾ ಸೃಷ್ಟಿಸುತ್ತಿರುವ ಅವಾಂತರ ಅಷ್ಟಿಷ್ಟಲ್ಲ. ಕೋವಿಡ್​ ಸೋಂಕಿತರ ಸಂಖ್ಯೆ ಉಲ್ಬಣಗೊಂಡಂತೆ ಸಾವು-ನೋವಿನ ಪ್ರಮಾಣ ಹೆಚ್ಚುತ್ತಲೇ ಇದೆ. ಕರೊನಾ ಸೋಂಕು ತಗುಲಿದೆ ಎಂಬ ಸುದ್ದಿ ಕೇಳಿಯೇ ಆಘಾತಕ್ಕೊಳಗಾಗುವ ಜನರ ನಡುವೆ ಕೆಲವು ಆತ್ಮಹತ್ಯೆಯ ಹಾದಿ ಹಿಡಿಯುತ್ತಿರುವುದು ವಿಪರ್ಯಾಸ. ಆದರೆ ಇಲ್ಲೊಬ್ಬ ಬಾಲಕಿ ತನ್ನ ದೊಡ್ಡಮ್ಮ ಕರೊನಾಗೆ ಬಲಿಯಾದ ಸುದ್ದಿ ಕೇಳುತ್ತಿದ್ದಂತೆ ಪ್ರಾಣಬಿಟ್ಟ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ.
ಮಂಗಳವಾರ ರಾತ್ರಿ ಮಲ್ಲಿಕಾ (45) ಎಂಬುವರು ಕರೊನಾ ಸೋಂಕಿನಿಂದ ಮೃತಪಟ್ಟಿದ್ದರು. ಬುಧವಾರ ಬೆಳಗ್ಗೆ ಅಂತ್ಯ ಸಂಸ್ಕಾರ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿತ್ತು. ಇದನ್ನು ತಿಳಿದ ಮಲ್ಲಿಕಾ ಅವರ ಮೈದುನನ ಮಗಳು ಜಾಗೃತಿ(19) ತೀವ್ರ ಹೃದಯಾಘಾತಕ್ಕೆ ಒಳಗಾದರು.
ಜಾಗೃತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾಳೆ, ಹಲವು ದಿನಗಳಿಂದ ಜಾಗೃತಿಯನ್ನು ದೊಡ್ಡಮ್ಮ ಮಲ್ಲಿಕಾ ಅವರೇ ಆರೈಕೆ ಮಾಡುತ್ತಿದ್ದರು. ದೊಡ್ಡಮ್ಮನ ಸಾವಿನ ಸುದ್ದಿ ಜಾಗೃತಿಗೆ ಆಘಾತ ಉಂಟು ಮಾಡಿದ್ದು, ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರು ಹೇಳಿದ್ದಾರೆ.
ಕರೊನಾ ಹಿನ್ನೆಲೆ ದೇವರ ಉತ್ಸವ ಮಾಡಲ್ಲ ಎಂದ ಅರ್ಚಕನ ಕುಟುಂಬದ ಮೇಲೆ ಹಲ್ಲೆ, ಕುಡಿವ ನೀರು ಬಂದ್​

ಕಾರಿನಲ್ಲೇ ಟಿವಿ ಸೀರಿಯಲ್​ ನಟಿಯ ಬೆತ್ತಲೆ ದೃಶ್ಯ ಸೆರೆ! ಮುಂದೆ ಆಗಿದ್ದೆಲ್ಲವೂ ಅವಾಂತರ

ಮಾಲಾಶ್ರೀ ಪತಿ, ನಿರ್ಮಾಪಕ ರಾಮು ಮೃತಪಟ್ಟದ್ದು ಕರೊನಾದಿಂದಲ್ಲ! ಸಾವಿಗೆ ಬೇರೆ ಕಾರಣ ಇದೆ

ಬೆಳಗ್ಗೆ ಮಗ, ಸಂಜೆ ತಂದೆ, ಮರುದಿನ ಮಗಳು, ನಂತರ ಮತ್ತೊಬ್ಬ ಮಗಳ ಸಾವು… ಇನ್ನಿಬ್ಬರ ಸ್ಥಿತಿ ಚಿಂತಾಜನಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − fifteen =
Remember me
