ತುಮಕೂರು:2019ರಲ್ಲಿ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಸಮೀಪ ಅರೆಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಸುಮಾರು 26 ವರ್ಷ ವಯಸ್ಸಿನ ಮಹಿಳೆಯ ಮೃತದೇಹ ಪ್ರಕರಣದ ಆರೋಪಿ ಕೊನೆಗೂ 3 ವರ್ಷದ ಬಳಿಕ ಸಿಕ್ಕಿಬಿದ್ದಿದ್ದಾನೆ. ಆದರೆ, ಕೊಲೆಯಾದ ಮಹಿಳೆ ಯಾರೆಂದು ಇನ್ನೂ ಗೊತ್ತಾಗಿಲ್ಲ.
ಬೆಳಗಾವಿ ಮೂಲದ ರೂಪೇಶ್ ಬಂಧಿತ. ಗೊರವನಹಳ್ಳಿ ಸಮೀಪ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನ ಡ್ರಾಪ್ ಕೊಡುವ ನೆಪದಲ್ಲಿ ಕಾರಿಗೆ ಹತ್ತಿಸಿಕೊಂಡಿದ್ದ ರೂಪೇಶ್​, ಆಕೆಯ ಮೈಮೇಲಿದ್ದ ಚಿನ್ನಾಭರಣ ಮತ್ತು ಹಣ ದೋಚಿ ಆಕೆಯನ್ನು ಕೊಲೆ ಮಾಡಿದ್ದ. ಮೃತದೇಹಕ್ಕೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದ.
ಶವ ಸಿಕ್ಕ ಸ್ಥಳದಲ್ಲಿ ಚಿನ್ನದ ತಾಳಿಯೂ ಪತ್ತೆಯಾಗಿತ್ತು. ಕೊರಟಗೆರೆ ಪೊಲೀಸ್ ‌ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೂರ್ನಾಲ್ಕು ತಂಡಳನ್ನು ರಚಿಸಿದ್ದ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದರು. ಮೂರು ವರ್ಷದಾರೂ ಆರೋಪಿಯ ಸುಳಿವೇ ಸಿಕ್ಕಿರಲಿಲ್ಲ. ಪ್ರಕರಣದ ಬೆನ್ನುಬಿದ್ದ ತುಮಕೂರು ಎಸ್​ಪಿ ರಾಹುಲ್ ಕುಮಾರ್, ಕೊರಟಗೆರೆ ಸಿಪಿಐ ಸಿದ್ದರಾಮೇಶ್ವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ಆರೋಪಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಿನ್ನಾಭರಣ ಮತ್ತು ಹಣದಾಸೆಗೆ ಮಹಿಳೆಯನ್ನ ಕೊಲೆ ಮಾಡಿದ್ದಾಗಿ ಆರೋಪಿ ಬಾಯ್ಬಿಟ್ಟಿದ್ದಾನೆ. ಆದರೆ ಮೃತಳ ಹಿನ್ನೆಲೆ ಮಾತ್ರ ಗೊತ್ತಾಗಿಲ್ಲ.
ಲೈಂಗಿಕ ದೌರ್ಜನ್ಯ, ಮಹಿಳೆಗೆ 118 ಹೊಲಿಗೆ

ಬದುಕಿರುವಾಗಲೇ ಗುಬ್ಬಿ ಶಾಸಕ ಶ್ರೀನಿವಾಸ್​ರ ತಿಥಿ ಕಾರ್ಡ್​ ತಯಾರಿಸಿ ವಿಕೃತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 4 =
Remember me
