ತುಮಕೂರು:ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೇರಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮೃತರೆಲ್ಲರೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಎನ್ನಲಾಗಿದೆ.
ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಖಾಸಗಿ ಬಸ್ ಶನಿವಾರ ಬೆಳಗ್ಗೆ 9 ಗಂಟೆಯಲ್ಲಿ ಅಪಘಾತಕ್ಕೀಡಾಗಿದೆ. ಈ ಬಸ್​ನಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳೇ ಪ್ರಯಾಣಿಸುತ್ತಿದ್ದರು. ಪಳವಳ್ಳಿ ಕಟ್ಟೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್​, ರಸ್ತೆ ಡಿವೈಡರ್ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು, ಮತ್ತೊಬ್ಬರುಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. 20ಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರವಾಗಿದೆ. ಮತ್ತಷ್ಟು ಸಾವು-ನೋವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದ್ದು, ಪಾಲಕರು ಮತ್ತು ಕುಟುಂಸ್ಥರ ಗೋಳಾಟ ಮುಗಿಲು ಮುಟ್ಟಿದೆ.
ಗಾಯಾಳುಗಳನ್ನು ಪಾವಗಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದ ಭೀಕರತೆ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಮೃತದೇಹಗಳು ರಸ್ತೆ, ರಸ್ತೆ ಬದಿ… ಹೀಗೆ ಎಲ್ಲೆಂದರಲ್ಲಿ ಚೆಲ್ಲಾಪಿಲ್ಲಿಯಾಗಿದ್ದವು.(ಇದಿಷ್ಟು ಪ್ರಾಥಮಿಕ ಮಾಹಿತಿ)
ಪಾವಗಡ ವ್ಯಾಪ್ತಿ ಎಲ್ಲ ಖಾಸಗಿ ಬಸ್‌ಗಳ ಪರವಾನಗಿ ರದ್ದು: 5 ಮಂದಿ ಸಾವಿನ ಬಳಿಕ ಎಚ್ಚೆತ್ತ ಸಾರಿಗೆ ಸಚಿವ

ತಕ್ಷಣ ಡಾನ್ಸ್​ ಕ್ಲಾಸ್​ಗೆ ಬಾ, ನನ್ನನ್ನು ಪ್ರೀತಿಸು, ಇಲ್ಲಾಂದ್ರೆ ಸಾಯಿಸುವೆ… ಅಪ್ರಾಪ್ತೆಗೆ ಅನ್ಯಕೋಮಿನ ಯುವಕನಿಂದ ಬೆದರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + seven =
Remember me
