ಬೆಂಗಳೂರು:ಹಾಸನ ಅಶ್ಲೀಲ ವಿಡಿಯೋ ಪ್ರಕರಣದ ಸಂತ್ರಸ್ತ ಮಹಿಳೆಯ ಕಿಡ್ನಾಪ್ ಕೇಸ್​ ಪ್ರಕರಣಕ್ಕೆ ಮತ್ತೊಂದು ಮಹತ್ವದ ತಿರುವು ಸಿಕ್ಕಿದೆ. ಕೆ.ಆರ್.ನಗರ ಮಹಿಳೆ ಅಪಹರಣ ಕೇಸ್​ಗೆ ಸಂಬಂಧಿಸಿದಂತೆ ಸಂತ್ರಸ್ತೆಯನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳುವ ಮೊದಲು ಮಾಡಲಾಗಿದೆ ಎನ್ನಲಾಗಿರುವ ವಿಡಿಯೋ ವೈರಲ್​ ಆಗಿದೆ.
ಇದನ್ನೂ ಓದಿ:ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ವ್ಯಕ್ತಿ ಸಾವು: ಕಾರಣ ಹೀಗಿದೆ..!
ವೈರಲ್​ ಆಗಿರೋ ವಿಡಿಯೋದಲ್ಲಿ ಏನಿದೆ ?: ನನ್ನನ್ನೂ ಯಾರೂ ಕಿಡ್ನಾಪ್ ಮಾಡಿಲ್ಲ, ನನ್ನ ಮಗ ಗೊತ್ತಿಲ್ಲದೇ ದೂರು ಕೊಟ್ಟಿದ್ದಾನೆ. ರೇವಣ್ಣ, ಪ್ರಜ್ವಲ್, ಭವಾನಿ ಅಕ್ಕನಿಂದ​ ರೇವಣ್ಣ ಕುಟುಂಬದಿಂದ ಯಾವುದೇ ತೊಂದರೆ ಆಗಿಲ್ಲ. ನಾನು ಸುರಕ್ಷಿತವಾಗಿದ್ದೇನೆ, ನನಗೆ ಯಾರಿಂದಲೂ ತೊಂದರೆಯಾಗಿಲ್ಲ. ಚೆನ್ನಾಗಿ ನೋಡಿಕೊಂಡಿದ್ದಾರೆ ಸಂಬಂಧಿಕರ ಮನೆಯಲ್ಲಿದ್ದೀನಿ, 4 ದಿನ ಹೊರಗೆ ಹೋಗಿದ್ದೀನಿ, ವಾಪಸ್ ಬರ್ತೀನಿ . ನಾನು ಕೂಲಿ ಮಾಡಿ ಬದುಕುತ್ತಿದ್ದೀನಿ. ನಮಗೆ ಯಾವುದೇ ಹಿಂಸೆ ಕೊಡಬೇಡಿ. ನಮಗೆ ಏನಾದ್ರೂ ತೊಂದರೆ ಆದರೆ ನೀವೇ ಹೊಣೆ ಎಂದು ಹೇಳಿಕೊಂಡಿರುವ ವಿಡಿಯೋ ವೈರಲ್ ಆಗಿದೆ.

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:15 + twelve =
Remember me
