ಕೊಪ್ಪಳ:ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ನಡುವೆ ಗುರುವಾರ ಬೆಳಗ್ಗೆ ಮಾರಾಮಾರಿ ನಡೆದಿದ್ದು, ಇಬ್ಬರು ಕೊಲೆಯಾಗಿದ್ದಾರೆ. ಓರ್ವ ಯುವಕನ ಸ್ಥಿತಿ ಗಂಭೀರವಾಗಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ.
ಯಕಪ್ಪ ತಳವಾರ (60) ಮತ್ತು ಬಾಷಾಸಾಬ(22) ಮೃತ ದುರ್ದೈವಿಗಳು. ಧರ್ಮಣ್ಣ ಹರಿಜನ ಎಂಬಾತನಿಗೆ ಗಂಭೀರ ಗಾಯವಾಗಿದ್ದು, ‌ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಎಸ್ಪಿ ಅರುಣಾಂಗ್ಷು ಗಿರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ಪ್ರಕ್ಷ್ಯುಬ್ಧ ವಾತಾವರಣ ನಿರ್ಮಾಣವಾಗಿದೆ. 4 ಜಿಲ್ಲಾ ಶಶಸ್ತ್ರ ಮೀಸಲು ಪಡೆ, ಡಿವೈಎಸ್ಪಿ ಸಹಿತ ಪೊಲೀಸ್ ಸಿಬ್ಬಂದಿ ಗ್ರಾಮದಲ್ಲಿ ಬೀಡು ಬಿಟ್ಟಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಯತ್ನಿಸುತ್ತಿದ್ದಾರೆ.

ಘಟನೆ ಸಂಬಂಧ ಕೆಲ ಮುಸ್ಲಿಂ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನು ಖಂಡಿಸಿ ಸಮುದಾಯದ ಜನರು ಪೊಲೀಸರ ವಿರುದ್ಧವೇ ಪ್ರತಿಭಟನೆಗೆ ಮುಂದಾಗಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಗ್ರಾಮದ ಸುತ್ತ 2 ಕಿಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಕುಂದಾಪುರದಲ್ಲಿ ದೇವಸ್ಥಾನಕ್ಕೆ ಕನ್ನ ಹಾಕಲು ಹಾಡಹಗಲೇ ಬಂದು ಸಿಕ್ಕಿಬಿದ್ದ ದಂಪತಿಯ ಮದ್ವೆ ರಹಸ್ಯ ಬಯಲು!

ಖಾಸಗಿ ವಿಡಿಯೋ ಲೀಕ್ ಆಗಿದ್ದು ಹೇಗೆ? ಬಿಗ್​ ಬಾಸ್​ ಮನೆಯಲ್ಲಿ ಕಣ್ಣೀರಿಡುತ್ತಲೇ ವಿವರಿಸಿದ ಸೋನು

ಆಷಾಢ ಹಿನ್ನೆಲೆ ತವರಿಗೆ ಬಂದಾಕೆ ದುರಂತ ಅಂತ್ಯ: ಆ ಒಂದು ತಿಂಗಳಲ್ಲಿ ಆಗಬಾರದ್ದೆಲ್ಲಾ ಆಗಿ ಹೋಯ್ತು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
