ಬೆಂಗಳೂರು:ಕರೊನಾ ನಿರೋಧಕ ಲಸಿಕೆ ಅಕ್ರಮಕ್ಕೆ ಸರ್ಕಾರ ಅವಕಾಶ ಕೊಡುವುದಿಲ್ಲ. ಸಾರ್ವಜನಿಕರು ವ್ಯಾಕ್ಸಿನ್ ಕಳ್ಳ ದಂಧೆ ಮೇಲೆ ಕಣ್ಣಿಟ್ಟು, ಮಾಹಿತಿ ನೀಡಿದರೆ ನಿರ್ದಾಕ್ಷಿಣ್ಯವಾಗಿ ಕ್ರಮಕೈಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ‌ ಹೇಳಿದರು.
ಈ ಹಿಂದೆ ರೆಮ್ ಡೆಸಿವಿರ್ ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಾಟವಾಗುತ್ತಿತ್ತು. ಕಟ್ಟುನಿಟ್ಟಿನ ಕ್ರಮವಹಿಸಿದ ಬಳಿಕ ಪರಿಸ್ಥಿತಿ ಹತೋಟಿಗೆ ಬಂದಿದ್ದು, ಲಸಿಕೆ ವಿಚಾರದಲ್ಲೂ ಇದೇ ರೀತಿಯ ಕಾರ್ಯಾಚರಣೆ ನಡೆಯಲಿದೆ ಎಂದರು.
ಖಾಸಗಿಯವರು ಹೆಚ್ಚಿನ ದರದಲ್ಲಿ ಲಸಿಕೆ ಮಾರಾಟದ ವಿಷಯದಲ್ಲಿ ರಾಜ್ಯ ಸರ್ಕಾರ ಮಧ್ಯೆ ಪ್ರವೇಶಿಸಲಾಗದು. ಈ ವಿಷಯದಲ್ಲಿ ಕೇಂದ್ರ ಸರ್ಕಾರವೇ ಏಕರೂಪದ ನೀತಿ ರೂಪಿಸಬೇಕಾಗುತ್ತದೆ ಎಂದು ಬಸವರಾಜ ಬೊಮ್ಮಾಯಿ‌ ಹೇಳಿದರು.
ಬಿಗಿ ಕ್ರಮಕ್ಕೆ ಸೂಚನೆ:ಕರೊನಾ 2ನೇ ಅಲೆ ಅಬ್ಬರ ತಗ್ಗಿಸಿ, ಸೋಂಕು ನಿಯಂತ್ರಿಸಲು 2ನೇ ಹಂತದ ಲಾಕ್​ಡೌನ್ ವಿಸ್ತರಣೆ ಸೋಮವಾರದಿಂದ ಜಾರಿಗೆ ಬಂದಿದ್ದು, ಬಿಗಿಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಲಾಗಿದೆ. ಹಳ್ಳಿಗಳಲ್ಲಿ ಇದೀಗ ಲಾಕ್​ಡೌನ್ ಸರಿಯಾಗಿ‌ ಪಾಲನೆಯಾಗುತ್ತಿದೆ. ಪಟ್ಟಣ ಪ್ರದೇಶದಲ್ಲಿ ಇನ್ನಷ್ಟು ಬಿಗಿಯಾಗಬೇಕಾಗಿದೆ. ಕರೊನಾ ವಿರುದ್ಧದ ಹೋರಾಟದಲ್ಲಿ ಯಶಸ್ವಿಯಾಗಲು ಜನರ ಸಹಕಾರವೂ ಮುಖ್ಯವೆಂದು ಬೊಮ್ಮಾಯಿ‌ ಹೇಳಿದರು.
ಏಕಕಾಲಕ್ಕೆ ಅಕ್ಕ-ತಂಗಿ ಇಬ್ಬರಿಗೂ ತಾಳಿಕಟ್ಟಿದ ಯುವಕ! ಈತ ಕೋಲಾರದ ಉಮಾಪತಿಯಲ್ಲ…

ಗಂಡನ ಅಂತ್ಯಸಂಸ್ಕಾರ ನೆರವೇರುತ್ತಿದ್ದಂತೆ ಸಾವಿನ ಮನೆಯ ಕದ ತಟ್ಟಿದ ಪತ್ನಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

ಪರಸ್ತ್ರೀ ಜತೆ ಯುವಕನ ಸಲ್ಲಾಪ! ಸೆಕ್ಸ್​ ಮಾಡುತ್ತಿರುವಾಗಲೇ ಸಿಕ್ಕಿಬಿದ್ದ ಜೋಡಿ… ಕ್ಷಣಾರ್ಧದಲ್ಲೇ ನಡೆಯಿತು ದುರಂತ

ರಾಜ್ಯದ ಈ ಐದು ಜಿಲ್ಲೆಯಲ್ಲಿ 54 ವಕೀಲರು ಕರೊನಾಗೆ ಬಲಿ! ಕುಟುಂಬದ 50 ಸದಸ್ಯರೂ ಸಾವು

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:three × three =
Remember me
