ಬೆಂಗಳೂರು:ವರಮಹಾಲಕ್ಷ್ಮೀ ಹಬ್ಬದ ದಿನದಂದು ದೇವರಿಗೆ ಹಾಕಿದ್ದ ಬಂಗಾರವನ್ನೇ ಖದೀಮರು ದೋಚಿರುವ ಘಟನೆ ಮಹಾಲಕ್ಷ್ಮಿಲೇಔಟ್ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸತ್ಯನಾರಾಯಣ್ ಲೇಔಟ್​ನ ಮೋಹನ ಎಂಬುವರ ಮನೆಯಲ್ಲಿ ಕಳ್ಳತನವಾಗಿದೆ. ಶುಕ್ರವಾರ ಹಬ್ಬದ ಹಿನ್ನೆಲೆ ಮೋಹನ್​ರ ಮನೆಯಲ್ಲಿ ಕಿಟಕಿ ಬಳಿ ವರಮಹಾಲಕ್ಷ್ಮೀಯನ್ನು ಪ್ರತಿಷ್ಠಾಪಿಸಲಾಗಿತ್ತು. ದೇವರಿಗೆ ಚಿನ್ನಾಭರಣ ಮತ್ತು ಹೂವಿನಿಂದ ಅಲಂಕರಿಸಿ ಪೂಜೆ ಸಲ್ಲಿಸಿದ್ದರು.
ಅಂದು ರಾತ್ರಿ ಮನೆಯವರು ಮಲಗಿರೋ ವೇಳೆ ಯಾರೋ ಖತರ್ನಾಕ್​ ಕಳ್ಳರು ಕಿಟಕಿ ಮೂಲಕ ಕೋಲು ಬಳಸಿ ದೇವರ ಮೈಮೇಲಿದ್ದ ಬಂಗಾರವನ್ನು ಹೊರಗೆ ಎಳೆದುಕೊಂಡು ಪರಾರಿಯಾಗಿದ್ದಾರೆ. ಸುಮಾರು 200 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿರುವ ಪೊಲೀಸರು, ಸಮೀಪದ ಸಿಸಿಟಿವಿಗಳನ್ನೂ ಪರಿಶೀಲನೆ ನಡೆಸುತ್ತಿದ್ದಾರೆ.
ಬುದ್ಧಿಮಾಂದ್ಯ ಎಂಬ ಕಾರಣಕ್ಕೆ ತನ್ನ ಮಗುವನ್ನೇ ಕೊಂದ ವೈದ್ಯೆ ಪ್ರಕರಣ: ತಂದೆಯ ಹೇಳಿಕೆ ಕೇಳಿದ್ರೆ ಮನಸ್ಸು ಭಾರ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
