ಧಾರವಾಡ:ವಿಜಯಪುರ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾದ ಐಎಎಸ್​ ಅಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅವರು ಅಧಿಕಾರ ಸ್ವೀಕರಿಸಲು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅಪಘಾತಕ್ಕೀಡಾಗಿದ್ದು, ಅಧಿಕಾರಿ ಸೇರಿ 7 ಮಂದಿ ಗಾಯಗೊಂಡಿದ್ದಾರೆ.
ವಿಜಯಮಹಾಂತೇಶ ಅವರು ಪತ್ನಿ ಶ್ವೇತಾ, ಮಕ್ಕಳಾದ ತನ್ವಿ, ವಿಹಾನ್​, ಮಾವ ಗಂಗಾಧರ, ಸಂಬಂಧಿ ಪ್ರವಿಣಕುಮಾರ ಜತೆ ಮಂಗಳವಾರ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಚಾಲಕ ಬಸವರಾಜನ ನಿಯಂತ್ರಣ ತಪ್ಪಿದ ಕಾರು ಧಾರವಾಡ ತಾಲೂಕಿನ ಯರಿಕೊಪ್ಪ ಬಳಿಯ ಬೈಪಾಸ್​ನಲ್ಲಿ ಪಲ್ಟಿಯಾಗಿದ್ದು, ಘಟನೆಯಲ್ಲಿ ಡಿಸಿ ಸೇರಿ 7 ಮಂದಿ ಗಾಯಗೊಂಡಿದ್ದಾರೆ. ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಹಿಂದೆ ದಾವಣಗೆರೆ ಜಿಪಂ ಸಿಇಒ ಆಗಿದ್ದ ವಿಜಯಮಹಾಂತೇಶ ದಾನಮ್ಮನವರ ಅವರನ್ನು ವಿಜಯಪುರ ಜಿಲ್ಲಾಧಿಕಾರಿಯಾಗಿ ವರ್ಗ ಮಾಡಿ ಸೋಮವಾರವಷ್ಟೇ ಆದೇಶಿಸಲಾಗಿತ್ತು. ಹೀಗಾಗಿ ಅಧಿಕಾರ ವಹಿಸಿಕೊಳ್ಳಲು ದಾವಣಗೆರೆಯಿಂದ ವಿಜಯಪುರಕ್ಕೆ ಹೊರಟಿದ್ದರು.
ಎದುರಿನಿಂದ ಬಂದ ವಾಹನ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಗ್ರಾಮೀಣ ಸಿಪಿಐ ಮಂಜುನಾಥ ಕುಸುಗಲ್ಲ ಮತ್ತು ಸಿಬ್ಬಂದಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು.
ಯುವ ಟೆನಿಸ್ ಆಟಗಾರ ಅಪಘಾತದಲ್ಲಿ ಸಾವು: ರಾಷ್ಟ್ರೀಯ ಟೂರ್ನಿಯಲ್ಲಿ ಪಾಲ್ಗೊಳ್ಳಲು ಹೋಗುವಾಗ ದುರಂತ

ಕೆಜಿಎಫ್-2 ಸಿನಿಮಾ ನೋಡುವಾಗ ಥಿಯೇಟರ್​ನಲ್ಲೇ ಗುಂಡಿನ ದಾಳಿ: ಯುವಕನ ಸ್ಥಿತಿ ಗಂಭೀರ, ಟಾಕೀಸ್ ಬಂದ್​

ಥೂ, ಇದೆಂಥಾ ಅಸಹ್ಯ? ಚೆನ್ನೈನಲ್ಲಿ ಮೂವರು ಬಾಲಕರ ಜತೆ ಗುಂಪು ಲೈಂಗಿಕ ಕ್ರಿಯೆ ನಡೆಸಿದ ಶಿಕ್ಷಕಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 18 =
Remember me
