ಬೆಂಗಳೂರು:ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಮತ್ತು ರಾಜ್ಯ ಬಿಜೆಪಿ ನಾಯಕತ್ವ ವಿಚಾರ ಕಳೆದೊಂದು ವಾರದಿಂದ ಭಾರೀ ಸಂಚಲನ ಮೂಡಿಸಿತ್ತು. ಇದೀಗ ನೂತನ ಸಿಎಂ ಅಧಿಕಾರ ಸ್ವೀಕರಿಸಿದ್ದು, ಸಂಪುಟ ವಿಸ್ತರಣೆಯೊಂದು ಆಗಿಬಿಟ್ಟರೆ ಎಲ್ಲವೂ ತಿಳಿಯಾಗಲಿದೆ ಎನ್ನುತ್ತಿರುವುವಾಗಲೇ ವಿಜೇತಾ ಅನಂತಕುಮಾರ್​ ಅವರ ಟ್ವೀಟ್​ ಚರ್ಚೆಗೆ ಗ್ರಾಸವಾಗಿದೆ.
ಕೇಂದ್ರದ ಮಾಜಿ ಸಚಿವ ದಿವಗಂತ ಅನಂತಕುಮಾರ್​ ಅವರ ಪುತ್ರಿ ವಿಜೇತಾ, ‘ಕರ್ನಾಟಕ ರಾಜಕೀಯ ನಿಜಕ್ಕೂ ಆಸಕ್ತಿದಾಯಕ ಏಕೆ? ಜೆಡಿಎಸ್​ ಇನ್ನೂ ಪ್ರಬಲ ರಾಜಕೀಯ ಶಕ್ತಿಯಾಗುತ್ತಿದೆ..’ ಎಂದು ಟ್ವೀಟ್​ ಮಾಡಿಕೊಂಡಿದ್ದಾರೆ. ಬಿಜೆಪಿಯ ಪ್ರಭಾವಿ ನಾಯಕರಾಗಿದ್ದ ಅನಂತಕುಮಾರ್​ರ ಮಗಳು ಜೆಡಿಎಸ್​ ಪರ ಬ್ಯಾಟಿಂಗ್​ ಮಾಡಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ಅನಂತಕುಮಾರ್​ರ ಪತ್ನಿ ತೇಜಸ್ವಿನಿ ಅನಂತಕುಮಾರ್​ ಅವರಿಗೆ ಟಿಕೆಟ್​ ನೀಡಲಾಗುತ್ತೆ ಎಂದೇ ನಿರೀಕ್ಷಿಸಲಾಗಿತ್ತು. ಅಂತಿಮ ಕ್ಷಣದಲ್ಲಿ ಬಿ ಫಾರಂ ಸೇರಿದ್ದು ತೇಜಸ್ವಿ ಸೂರ್ಯ ಕೈಗೆ. ತಂದೆ ನಿಧನದ ಬಳಿಕ ಬಿಜೆಪಿ, ತಮ್ಮ ಕುಟುಂಬದವರನ್ನು ಕಡೆಗಣಿಸುತ್ತಿದೆ ಎಂಬುದಕ್ಕೆ ಪುಷ್ಟಿ ನೀಡುತ್ತಿದೆ ವಿಜೇತಾ ಅವರ ಈ ಟ್ವೀಟ್​.
Why Karnataka politics is really interesting?
JDS is still a very strong political force
— Vijeta AnanthKumar (@vijeta_at)July 29, 2021

ಹಲವರು ವಿಜೇತಾ ಅವರ ಈ ಹೇಳಿಕೆ ಕಂಡು ಜೆಡಿಎಸ್​ಗೆ ಬರುತ್ತಾರೆ ಎಂದೇ ಮಾತನಾಡಿಕೊಳ್ಳುತ್ತಿದ್ದಾರೆ. ಇನ್ನು ಕೆಲವರು ರಾಜ್ಯ ಬಿಜೆಪಿಯಲ್ಲಿನ ಈ ಬೆಳವಣಿಗೆಗಳು ಪ್ರಾದೇಶಿಕ ಪಕ್ಷ ಜೆಡಿಎಸ್​ ಪಾಲಿಗೆ ವರವಾಗಿ ಪರಿಣಮಿಸುತ್ತಿದೆ. ಇದನ್ನು ಮನಗಂಡ ವಿಜೇತಾ ಅವರು ಸತ್ಯವನ್ನೇ ಹೇಳಿದ್ದಾರೆ ಎನ್ನುತ್ತಿದ್ದಾರೆ.
ನಾವು ಸನ್ಯಾಸಿಗಳಲ್ಲ… ಬೊಮ್ಮಾಯಿ ಆಯ್ಕೆ ಶ್ರೀಕೃಷ್ಣನ ತಂತ್ರಗಾರಿಕೆ: ಈಶ್ವರಪ್ಪ

ಕಿಡ್ನ್ಯಾಪ್‌ ಆಗಿದ್ದ ಕೇರಳ ಯುವಕನನ್ನು ಪ್ರಾಣದ ಹಂಗು ತೊರೆದು ಕಾಪಾಡಿದ ಹಾಸನ ಪೊಲೀಸರು! ವಿಡಿಯೋ ವೈರಲ್​

ನಾಚಿಕೆ ಆಗ್ತಿಲ್ವಾ? ಮತ್ತೆ ಬಾಲ ಬಿಚ್ಚಿದ್ರೆ ಶೂಟೌಟ್ ಮಾಡ್ತೀವಿ… ಕುಣಿಗಲ್ ಗಿರಿಗೆ ಖಡಕ್​ ವಾರ್ನಿಂಗ್​ ಕೊಟ್ಟ ಸಿಸಿಬಿ!

ಗಂಡನಿಗೆ ಹಣದಾಹ, ಮಾವನಿಗೆ ಕಾಮದಾಹ… ಪೊಲೀಸರ ಮುಂದೆ ನರಕಯಾತನೆ ಬಿಚ್ಚಿಟ್ಟ ಯುವತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 1 =
Remember me
