ಬೆಂಗಳೂರು:ಹಿಂದುಳಿದ ವರ್ಗಗಳ ನಾಯಕ, ವಿಧಾನ ಪರಿಷತ್ ಸದಸ್ಯ‌ ಕೆ.ಪಿ.ನಂಜುಂಡಿ ಅವರಿಗೆ ಬಿಜೆಪಿ ನೀಡಿದ‌ ಭರವಸೆಯಂತೆ ಮಂತ್ರಿ ಪದವಿ ನೀಡದೆ ಕಡೆಗಣಿಸಿದರೆ ಪಕ್ಷಕ್ಕೆ ಸಾಮೂಹಿಕವಾಗಿ ರಾಜೀನಾಮೆ ನೀಡುತ್ತೇವೆ. ನಂಜುಂಡಿ ಅವರಿಂದಲೂ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಕೊಡಿಸುತ್ತೇವೆ ಎಂದು ವಿಶ್ವಕರ್ಮ ಸಮುದಾಯ ಎಚ್ಚರಿಕೆ ನೀಡಿದೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ‌ ವಿಶ್ವಕರ್ಮ ಮಹಾಸಭಾ ರಾಜ್ಯ ಯುವ ಘಟಕದ ಅಧ್ಯಕ್ಷ ಶ್ರೀನಿವಾಸ ಮಳವಳ್ಳಿ ಸುದ್ದಿಗಾರರ ಜತೆ ಮಾತನಾಡಿದರು. ನಂಜುಂಡಿ ಅವರಿಗೆ ಸಚಿವ ಸ್ಥಾನ ನೀಡುವ ಕುರಿತು ಪಕ್ಷದ ವರಿಷ್ಠರೊಂದಿಗೆ ಮಾತನಾಡುವೆ ಎಂದು ಸಿಎಂ ಭರವಸೆ ನೀಡಿದ್ದಾರೆ. ಸಮುದಾಯದ ಮುಖಂಡರು ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡಬೇಕೆಂದಿದ್ದೇವೆ. ಪಕ್ಷದ ರಾಜ್ಯ ಪದಾಧಿಕಾರಿಗಳಿಗೂ ಮನವಿ ಸಲ್ಲಿಸುತ್ತೇವೆ. ಮುಂದಿನ ದಿನಗಳಲ್ಲಿ ಸಮುದಾಯದ 20,000 ಜನರ ಸಮಾವೇಶ ನಡೆಸಿ ಕೆ.ಪಿ.ನಂಜುಂಡಿ ಅವರಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯಿಸಲಾಗುವುದು ಎಂದು ವಿವರಿಸಿದರು.
ಇಷ್ಟಾಗಿಯೂ ನಿರ್ಲಕ್ಷಿಸಿದರೆ ಸಮುದಾಯಕ್ಕೆ ಪ್ರಾತಿನಿಧ್ಯ, ಸಾಮಾಜಿಕ ನ್ಯಾಯ ನೀಡದ ಪಕ್ಷಕ್ಕೂ ರಾಜೀನಾಮೆ ನೀಡುತ್ತೇವೆ. ಸಮುದಾಯದ ಮುಖಂಡರು ಮಾತ್ರವಲ್ಲ, ಪಕ್ಷದ ವಿವಿಧ ಹುದ್ದೆಗಳಲ್ಲಿ ಇರುವವರೂ ಭಾಗವಹಿಸಿದ್ದೇವೆ. ಕೆ.ಪಿ.ನಂಜುಂಡಿ ಅವರನ್ನು ಮಂತ್ರಿ ಮಾಡದಿದ್ದರೆ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕಪಾಠ ಕಲಿಸುತ್ತೇವೆ ಎಂದು ವಿಶ್ವಕರ್ಮ ಸಮುದಾಯದ ಮುಖಂಡರು ಎಚ್ಚರಿಸಿದರು.
ಕೆ.ಪಿ.ನಂಜುಂಡಿಗೆ ಮಂತ್ರಿ ಪದವಿ ಕೊಡುವಂತೆ ಒತ್ತಾಯಿಸಿ ರಸ್ತೆಬದಿ ಕುಳಿತ ಸ್ವಾಮೀಜಿಗಳು!

ಡೇಟಿಂಗ್​ ನೆಪದಲ್ಲಿ ಅವಿವಾಹಿತೆಯರ ಮನೆಗೆ ತೆರಳುತ್ತಿದ್ದ ಎರಡು ಮಕ್ಕಳ ತಂದೆ, ಬಟ್ಟೆ ಬಿಚ್ಚುತ್ತಿದ್ದಂತೆ ವರಸೆ ಬದಲಿಸುತ್ತಿದ್ದ…

ಬೆಂಗ್ಳೂರಲ್ಲಿ ವೈಫ್ ಸ್ವಾಪಿಂಗ್ ದಂಧೆ: ತನ್ನ ಪತ್ನಿ ಜತೆ ಪರಪುರುಷರ ಸಮ್ಮಿಲನ ಮಾಡಿಸಿ ಲೈವ್ ವಿಡಿಯೋ ಮಾಡಿ ಖುಷಿ ಪಡ್ತಿದ್ದ ಗಂಡ!

ಮಗಳ ಜತೆ ತಾಯಿ ಆತ್ಮಹತ್ಯೆ! 10 ದಿನದ ಹಿಂದೆ ವಿದ್ಯಾರ್ಥಿನಿಯೊಬ್ಬಳ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡದ್ದೇ ಮುಳುವಾಯ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
