ಬೆಂಗಳೂರು:‘ಲವ್​ ಯೂ ರಚ್ಚು’ ಸಿನಿಮಾ ಶೂಟಿಂಗ್​ ವೇಳೆ ಹೈಟೆನ್ಷನ್​ ವಿದ್ಯುತ್​ ತಂತಿ ತಗುಲಿ ಸೋಮವಾರ ಫೈಟರ್​ ವಿವೇಕ್​(35) ಮೃತಪಟ್ಟ ಪ್ರಕರಣ ಸಂಬಂಧ ಸಿನಿಮಾ ಮಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್​ ಎಚ್ಚರಿಕೆ ಕೊಟ್ಟಿದ್ದಾರೆ.
ಬಿಡದಿಯ ಜೋಗರಪಾಳ್ಯದಲ್ಲಿ ‘ಲವ್​ ಯೂ ರಚ್ಚು’ ಸಿನಿಮಾ ಶೂಟಿಂಗ್​ ವೇಳೆ ವಿದ್ಯುತ್​ ಅವಘಡ ಸಂಭವಿಸಿ ವಿವೇಕ್​ ಮೃತಪಟ್ಟಿದ್ದು, ಮತ್ತೊಬ್ಬ ಯುವಕ ರಂಜಿತ್ ಸಾವು ಬದುಕಿನ ನಡುವೆ ಆಸ್ಪತ್ರೆಯಲ್ಲಿ ಹೋರಾಡುತ್ತಿದ್ದಾನೆ. ‘ಮಾಸ್ತಿಗುಡಿ’ ದುರಂತ ಹಸಿಯಾಗಿರುವಾಗಲೇ ರಾಮನಗರದಲ್ಲಿ ಮತ್ತೊಂದು ಅವಘಡ ಸಂಭವಿಸಿ ಅಮಾಯಕನ ಜೀವ ಹೋಗಿದೆ. ಈ ಕುರಿತು ಮಂಗಳವಾರ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಶೂಟಿಂಗ್​ ವೇಳೆ ನಿಯಮಗಳನ್ನು ಕೆಲವರು ಅನುಸರಿಸುತ್ತಿಲ್ಲ. ಚಿತ್ರೀಕರಣಕ್ಕೆ ಅನುಮತಿ ಪಡೆಯುವ ನಿಯಮಗಳಲ್ಲಿ ಬದಲಾವಣೆ ತರುತ್ತೇವೆ. ಕೆಲವರ ನಿರ್ಲಕ್ಷ್ಯಕ್ಕೆ ಅಮಾಯಕರು ಬಲಿಯಾಗ್ತಿದ್ದಾರೆ. ಇಂತಹ ಘಟನೆ ಮರುಕಳಿಸುತ್ತಲೇ ಇದೆ. ಮುಂಜಾಗ್ರತಾ ಕ್ರಮ ಅನುಸರಿಸುವಿಕೆ ಬಗ್ಗೆ ನಿಯಮಗಳಿದ್ದರೂ ಹಲವರು ಅನುಸರಣೆ ಮಾಡ್ತಿಲ್ಲ. ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ನಾಳೆ ಅಥವಾ ನಾಡಿದ್ದು ಹೊಸ ಆದೇಶ ಮಾಡುತ್ತೇವೆ. ಇದನ್ನು ಉಲ್ಲಂಘಿಸುವಂತಿಲ್ಲ ಎಂದರು.
ಇತ್ತ ಫಿಲಂ ಚೇಂಬರ್ ಕೂಡ ಎಚ್ಚೆತ್ತಿದ್ದು, ಫೈಟರ್ ಅಸೋಸಿಯೇಷನ್ ಜತೆ ಸಭೆ ನಡೆಸಲು ಸಜ್ಜಾಗಿದೆ. ಮುಂಜಾಗ್ರತಾ ಕ್ರಮ ಅನುಸರಿಸಿ ಶೂಟಿಂಗ್ ನಡೆಸುವಂತೆ ಎಚ್ಚರಿಸಲಿದೆ. ಈ ರೀತಿಯ ಅವಘಡ ಸಂಭವಿಸಿದ್ರೆ ಯಾರು ಜವಾಬ್ದಾರಿ? ಶೀಘ್ರದಲ್ಲೇ ಸಭೆ ನಡೆಸಲಾಗುವುದು ಎಂದು ‘ದಿಗ್ವಿಜಯ ನ್ಯೂಸ್’ಗೆ ಫಿಲಂ ಚೇಂಬರ್ ಉಪಾಧ್ಯಕ್ಷ ಉಮೇಶ್ ಬಣಕರ್ ಮಾಹಿತಿ ನೀಡಿದರು.
ಅಮ್ಮನ ಮಾತು ಕೇಳಿದ್ದರೆ ವಿವೇಕ್​ ಸಾಯುತ್ತಲೇ ಇರಲಿಲ್ಲ..! ಮುಗಿಲುಮುಟ್ಟಿದೆ ಹೆತ್ತವ್ವನ ಆಕ್ರಂದನ

ದೇವಿಯ ಪಾದುಕೆ ಮೇಲೆ ಗಂಟೆಗಟ್ಟಲೇ ಕುಳಿತು ಕೌತುಕ ಮೂಡಿಸಿದ ಕೌಜುಗ ಪಕ್ಷಿ!

ನನ್ನ ತಾಯಾಣೆ.. ಅಷ್ಟೊಂದು ಹಣವನ್ನು ಜೀವನದಲ್ಲಿ ನೋಡಿಯೇ ಇರಲಿಲ್ಲ: ಮಂಜು ಪಾವಗಡ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:13 + twelve =
Remember me
