ಹಾಸನ:ತಮ್ಮನನ್ನು ಮದುವೆಯಾಗಲು ಒಪ್ಪದ ಯುವತಿಯರಿಬ್ಬರ ಮೇಲೆ ವ್ಯಕ್ತಿಯೊಬ್ಬ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಹೊಳೆನರಸೀಪುರ ತಾಲೂಕಿನ ದೊಡ್ಡಕುಂಚಾವು ಗ್ರಾಮದಲ್ಲಿ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಸಹೋದರಿಯರಾದ ಯೋಗಿತಾ(22) ಮತ್ತು ಪುಷ್ಪಿತಾ ಹಲ್ಲೆಗೊಳಗಾದವರು. ನಾಗರಾಜ್​ ಹಲ್ಲೆ ಮಾಡಿದವ. ಯೋಗಿತಾ ಮತ್ತು ಪುಷ್ಪಿತಾಳ ತಂದೆ ಇತ್ತೀಚಿಗೆ ನಿಧನರಾಗಿದ್ದರು. ಸಾವಿನ ಮನೆಯಲ್ಲಿ  ಒಂದು ವರ್ಷದೊಳಗೆ ಶುಭಕಾರ್ಯ ಮಾಡಬೇಕು ಎನ್ನುವುದನ್ನೇ ನೆಪ ಮಾಡಿಕೊಂಡು ಏ.12ರಂದು ಸೋದರ ಮಾವ ನಾಗರಾಜ ತನ್ನ ತಮ್ಮನ ಮದುವೆ ಮಾತುಕತೆಗೆಂದು ತಾಯಿ ಹಾಗೂ ಅಜ್ಜಿ ಜತೆ ಬಂದಿದ್ದ.ಇದನ್ನೂ ಓದಿರಿಶೃಂಗೇರಿಯಲ್ಲಿ ಅಪ್ರಾಪ್ತೆ ಮೇಲೆ 37 ಜನರಿಂದ ಅತ್ಯಾಚಾರ: ಹೆತ್ತಮ್ಮನ ಕುಮ್ಮಕ್ಕಿನಿಂದಲೇ ಕೃತ್ಯ, ಮುಂದೇನಾಯ್ತು?
ಮನೆಯ ಹಿರಿಯ ಮಗಳಾದ ನನ್ನ ಮೇಲೆ ಸಂಸಾರದ ಜವಾಬ್ದಾರಿ ಇದೆ ಸದ್ಯಕ್ಕೆ ನಾನು ಮದುವೆಯಾಗುವುದಿಲ್ಲ, ತಂಗಿಯನ್ನು ಚೆನ್ನಾಗಿ ಓದಿಸಬೇಕು, ಅಲ್ಲದೆ ಬಿಎಸ್ಸಿ ಓದಿರುವ ನಾನು ನಿನ್ನ ತಮ್ಮನನ್ನು ಮದುವೆಯಾಗುವುದಿಲ್ಲ ಎಂದು ಯೋಗಿತಾ ನಿರಾಕರಿಸಿದ್ದಾಳೆ. ಈ ವೇಳೆ ಅಕ್ಕ-ತಂಗಿ ಇಬ್ಬರೂ ಮದುವೆ ಪ್ರಸ್ತಾಪವನ್ನ ತಿರಸ್ಕರಿಸಿದ್ದಾರೆ. ಸಿಟ್ಟಿಗೆದ್ದ ನಾಗರಾಜ್​ ಯುವತಿಯರಿಬ್ಬರ ಕೊಲೆಗೆ ಯತ್ನಿಸಿದ್ದಾನೆ. ಗಂಭೀರ ಗಾಯಗೊಂಡ ಸಹೋದರಿಯರನ್ನ ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಸಂಬಂಧ ನಾಗರಾಜ್, ಹಲ್ಲೆಗೆ ಕುಮ್ಮಕ್ಕು ನೀಡಿದ ಆರೋಪದಲ್ಲಿ ಅಜ್ಜಿ ಪುಟ್ಟಮ್ಮ, ಸೋದರತ್ತೆ ಅಕ್ಕಮ್ಮ‌ನನ್ನು ಬಂಧಿಸಲಾಗಿದೆ. ಹೊಳೆನರಸೀಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
https://www.vijayavani.net/case-filed-against-37-people-in-sringeri-police-station/
ಗಂಡನ ಕುತ್ತಿಗೆ ಮೇಲೆ ಕಾಲಿಟ್ಟು ಉಸಿರು ನಿಲ್ಲಿಸಿದ ಪತ್ನಿ! ಮಕ್ಕಳು ಇಲ್ಲದ ವೇಳೆ ಆ ರಾತ್ರಿ ನಡೆಯಿತು ದುರಂತ

ಪ್ರೀತಿ ಬಲೆಗೆ ಬಿದ್ದ ರೂಪದರ್ಶಿ ಮೇಲೆ 16 ಬಾರಿ ಅತ್ಯಾಚಾರ! ಬೆಚ್ಚಿಬೀಳಿಸುತ್ತೆ ಪ್ರಿಯಕರನ ಮತ್ತೊಂದು ಮುಖ

ಪ್ರೇಮಿಗಳ ಮಧ್ಯೆ ಹುಳಿ ಹಿಂಡಿದ್ಲಾ ಆಕೆ? ಆತ್ಮಹತ್ಯೆ ಯತ್ನಕ್ಕೂ ಮುನ್ನ ಮನದ ನೋವನ್ನು ಅಕ್ಷರಕ್ಕಿಳಿಸಿದ ಚೈತ್ರಾ ಕೋಟೂರ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
