ಮೈಸೂರು:ಪತ್ನಿ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದ ಪತಿಗೆ ನಗರದ 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಮೈಸೂರು ತಾಲೂಕಿನ ಕೇರ್ಗಳ್ಳಿ ಗ್ರಾಮದ ಬಸವಯ್ಯ ಎಂಬಾತನೇ ಶಿಕ್ಷೆಗೆ ಗುರಿಯಾದ ಅಪರಾಧಿ. 22 ವರ್ಷಗಳ ಹಿಂದೆ ನಾಗರತ್ನಮ್ಮ ಅವರನ್ನು ವಿವಾಹವಾಗಿದ್ದ ಬಸವಯ್ಯ ನಿತ್ಯ ಕುಡಿಯುತ್ತಿದ್ದ. ಜತೆಗೆ, ಪತ್ನಿಯ ಶೀಲದ ಬಗ್ಗೆ ಶಂಕೆ ವ್ಯಕ್ತಪಡಿಸಿ ಜಗಳ ಮಾಡುತ್ತಿದ್ದ. 2018ರ ಅಕ್ಟೋಬರ್​ 28ರ ರಾತ್ರಿ ಗಲಾಟೆ ಮಾಡಿ ಕೊಲೆ ಮಾಡುವ ಉದ್ದೇಶದಿಂದ ಪತ್ನಿಯ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದ. ತೀವ್ರ ಸುಟ್ಟಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ನಾಗರತ್ನಮ್ಮ ಮೃತಪಟ್ಟಿದ್ದರು.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಜಯಪುರ ಠಾಣೆ ಪೊಲೀಸರು, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶೆ ಅಶ್ವಿನಿ ವಿಜಯ್​ ಸಿರಿಯಣ್ಣವರ್​ ಅವರು ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ನಾಗಪ್ಪ ಸಿ.ನಾಕ್​ಮನ್​ ಸರ್ಕಾರದ ಪರ ವಾದ ಮಂಡಿಸಿದ್ದರು.
ಬಿಎಸ್​ವೈ ಮೊಮ್ಮಗಳು ಆತ್ಮಹತ್ಯೆ: ಡಾ.ಸೌಂದರ್ಯ ಸಾವಿನ ಮನೆಯ ಕದ ತಟ್ಟಿದ ಆ ಕ್ಷಣ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
