ಆನೇಕಲ್:ಮನೆಯಲ್ಲಿ ಮಲಗಿದ್ದ ಪತ್ನಿಯ ಕತ್ತು ಕೊಯ್ದು ಕೊಂದ ಗಂಡ, ಬಳಿಕ ತಾನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಇಂತಹ ಭೀಕರ ಘಟನೆ ಸೋಮವಾರ ಬೆಳ್ಳಂಬೆಳಗ್ಗೆ ಆನೇಕಲ್ ತಾಲೂಕಿನ ಯಡವನಹಳ್ಳಿಯಲ್ಲಿ ಸಂಭವಿಸಿದ್ದು, ಸ್ಥಳೀಯರು ಬೆಚ್ಚಿಬಿದ್ದಾರೆ.
ಸಂಪತ್​ ಪತ್ನಿ ಲಾವಣ್ಯ(30) ಕೊಲೆಯಾದಾಕೆ. ಸಂಪತ್ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 12 ವರ್ಷದ ಹಿಂದೆ ಲಾವಣ್ಯ ಮತ್ತು ಸಂತೋಷ್​ ಮದುವೆ ಆಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಕಳೆದ 10 ದಿನಗಳಿಂದ ದಂಪತಿ ನಡುವೆ ಜಗಳ ನಡೆಯುತ್ತಿತ್ತು. ನಿನ್ನೆ(ಭಾನುವಾರ) ಲಾವಣ್ಯ ಮನೆಯವರು ಬಂದು ಪಂಚಾಯಿತಿ ಮಾಡಿ ಇಬ್ಬರಿಗೂ ಬುದ್ಧಿ ಹೇಳಿ ಹೋಗಿದ್ದರು. ಮರುದಿನ ಬೆಳಗ್ಗೆಯೇ ಸಂತೋಷ್​, ಪತ್ನಿಯ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಅಡ್ಡ ಬಂದ ಮಗ ಭಾರ್ಗವ್​ನ ಕೈ ಕೊಯ್ದು ಬಳಿಕ ತನ್ನ ಕತ್ತನ್ನೂ ಕೊಯ್ದುಕೊಂಡು ನೋವಿನಿಂದ ಚೀರಾಡುತ್ತಾ ಮೊದಲ ಮಹಡಿ ಮನೆಯಿಂದ ಕೆಳಗೆ ಓಡಿ ಬಂದು ಚರಂಡಿಗೆ ಬಿದ್ದಿದ್ದಾನೆ. ಸಂತೋಷ್​ನ ಚೀರಾಟ ಕೇಳಿ ಸ್ಥಳಕ್ಕೆ ಬಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಕೂಡಲೇ ಸ್ಥಳೀಯರು ಸಂತೋಷ್​ ಮತ್ತು ಮಗ ಭಾರ್ಗವ್​ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕುಡಿತ ಚಟ ಅಂಟಿಸಿಕೊಂಡಿದ್ದ ಸಂಪತ್ ಮನೆಯಲ್ಲಿ ಪದೇಪದೆ ಗಲಾಟೆ ಮಾಡುತ್ತಿದ್ದ. ಕತ್ತು ಕೊಯ್ದುಕೊಂಡಿದ್ದರಿಂದ ರಸ್ತೆಯಲ್ಲಿ ರಕ್ತ ಚೆಲ್ಲಿದ ಕಲೆ ಹಾಗೇ ಇದ್ದು, ಭಯದ ವಾತಾವರಣ ಸೃಷ್ಟಿಯಾಗಿದೆ. ಮನೆಯೊಳಗೆ ರಕ್ತದದ ಮಡುವಿನಲ್ಲಿ ಲಾವಣ್ಯಳ ಶವ ನೋಡಿದ ಜನ ಬೆಚ್ಚಿಬಿದ್ದಿದ್ದಾರೆ.
ಹನಿಟ್ರ್ಯಾಪ್​ ಗಾಳಕ್ಕೆ ಬಿದ್ದ ಉಪ ತಹಸೀಲ್ದಾರ್​! ಆಕೆಯ ಮಾತಿಗೆ ಮರುಳಾಗಿ ಹೋಟೆಲ್​ಗೆ ಹೋಗಿ ಪಟ್ಟ ಕಷ್ಟ ಅಷ್ಟಿಷ್ಟಲ್ಲ…

ಎಚ್​ಡಿಕೆ ಬೆಂಗಾವಲು ವಾಹನ ಅಪಘಾತ: ಪಾವಗಡ ಬಸ್​ ದುರಂತದಲ್ಲಿ ಗಾಯಗೊಂಡವರ ಭೇಟಿ ವೇಳೆ ಮತ್ತೊಂದು ಅವಘಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 6 =
Remember me
