ಬೆಂಗಳೂರು:ದುಡಿಯಲು ಸಮರ್ಥಳಿರುವ ಪತ್ನಿ ಪತಿಯಿಂದ ಹೆಚ್ಚಿನ ಜೀವನಾಂಶ ಕೋರಲಾಗದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಕೌಟುಂಬಿಕ ವ್ಯಾಜ್ಯವೊಂದರಲ್ಲಿ ಪತ್ನಿಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಘೋಷಿಸಿದ್ದ ಮಾಸಿಕ 10 ಸಾವಿರ ರೂ. ಜೀವನಾಂಶ ಹಾಗೂ 3 ಲಕ್ಷ ರೂ. ಪರಿಹಾರ ವನ್ನು ಕ್ರಮವಾಗಿ 5 ಸಾವಿರ ರೂ. ಹಾಗೂ 2 ಲಕ್ಷ ರೂ.ಗಳಿಗೆ ಇಳಿಕೆ ಮಾಡಿದ್ದ ಸೆಷನ್ಸ್ ನ್ಯಾಯಾಲಯದ ಕ್ರಮ ಎತ್ತಿ ಹಿಡಿದಿದೆ. ಜೀವನಾಂಶ, ಪರಿಹಾರದ ಮೊತ್ತ ಕಡಿತಗೊಳಿಸಿದ್ದ ಬೆಂಗಳೂರಿನ 66ನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಆನೇಕಲ್​ನ ಮಹಿಳೆ ಮತ್ತವರ ಅಪ್ರಾಪ್ತ ಪುತ್ರ ಸಲ್ಲಿಸಿದ್ದ ಕ್ರಿಮಿನಲ್ ಮರುಪರಿಶೀಲನಾ ಅರ್ಜಿ ವಜಾಗೊಳಿಸಿರುವ ನ್ಯಾ. ರಾಜೇಂದ್ರ ಬಾದಾಮಿಕರ್ ಅವರಿದ್ದ ಪೀಠ ಈ ಆದೇಶ ಮಾಡಿದೆ.
ಕೆಲಸವಿಲ್ಲದೆ ಸುಮ್ಮನೆ ಕೂರುವಂತಾಗಬಾರದು:ವಿವಾಹಕ್ಕೂ ಮುನ್ನ ಅರ್ಜಿದಾರ ಮಹಿಳೆ ಕೆಲಸ ಮಾಡುತ್ತಿದ್ದರು ಎನ್ನುವುದು ಪ್ರಕರಣದ ದಾಖಲೆಗಳಿಂದ ತಿಳಿದುಬಂದಿದೆ. ಪತಿಯಿಂದ ದೂರವಾದ ಬಳಿಕ ತಾಯಿ ಹಾಗೂ ಮಗನೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಪತ್ನಿ, ಪತಿಯ ತಾಯಿ ಹಾಗೂ ಸಹೋದರಿಯರ ಜತೆ ವಾಸಿಸಲು ನಿರಾಕರಿಸಿದ್ದಾರೆ. ದಿನಸಿ ಅಂಗಡಿ ನಡೆಸುತ್ತಿರುವ ಪತಿ ತನ್ನ ತಾಯಿ ಹಾಗೂ ಅವಿವಾಹಿತ ಸಹೋದರಿಯನ್ನೂ ನೋಡಿಕೊಳ್ಳಬೇಕಿದೆ. ಮದುವೆ ನಂತರ ಕೆಲಸ ತೊರೆದಿರುವ ಪತ್ನಿ, ಈಗ ಕೆಲಸ ಮಾಡಲು ಏಕೆ ಸಮರ್ಥರಿಲ್ಲ ಎಂಬುದಕ್ಕೆ ವಿವರಣೆ ನೀಡಿಲ್ಲ ಎಂದು ಹೈಕೋರ್ಟ್ ಆದೇಶದಲ್ಲಿ ಉಲ್ಲೇಖಿಸಿದೆ.
ದುಡಿಯುವ ಸಾಮರ್ಥ್ಯವಿರುವ ಪತ್ನಿ ಉದ್ಯೋಗವಿಲ್ಲದೆ ಸುಮ್ಮನೆ ಕುಳಿತು ಪತಿಯಿಂದಲೇ ಸಂಪೂರ್ಣ ಜೀವನಾಂಶ ಕೇಳುವಂತಾಗಬಾರದು. ಜೀವನ ನಿರ್ವಹಣೆಗಾಗಿ ಪ್ರಯತ್ನಿಸುವ ಹೊಣೆ ಆಕೆಯ ಮೇಲೂ ಇರಲಿದ್ದು, ಪತಿಯಿಂದ ಪೂರಕ ಜೀವನಾಂಶವನ್ನಷ್ಟೇ ಕೇಳಬಹುದು. ಜೀವನಾಂಶ ಹಾಗೂ ಪರಿಹಾರದ ಮೊತ್ತ ಕಡಿತಗೊಳಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿರುವ ಆದೇಶದಲ್ಲಿ ಹೈಕೋರ್ಟ್ ಮಧ್ಯಪ್ರವೇಶಿಸುವ ಅವಶ್ಯಕತೆ ಕಂಡುಬರುತ್ತಿಲ್ಲ ಎಂದು ಅಭಿಪ್ರಾಯಪಟ್ಟು, ಪತ್ನಿಯ ಅರ್ಜಿ ವಜಾಗೊಳಿಸಿದೆ.
ಇದು ಸಿಂಗಲ್​ ಆಗಿರುವವರಿಂದ ಮಿಂಗಲ್ ಆಗಲು ಗ್ರೀನ್​ ಸಿಗ್ನಲ್; ಪೇರಿಂಗ್ ಆಗಲೆಂದೇ ಪಿಯರ್ ರಿಂಗ್, ಏನಿದು ಹೊಸ ಟ್ರೆಂಡ್?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + seven =
Remember me
