ರಾಯಚೂರು:ಮದುವೆ ಮಾಡಿಕೊಳ್ಳಲೆಂದು ಆತ ಹೆಣ್ಣು ಹುಡುಕುತಿದ್ದ. ಎರಡು ದಿನದ ಹಿಂದೆ ಮಾರಮ್ಮ ದೇವಿಗೆ ಪೂಜೆಯನ್ನೂ ಮಾಡಿಸಿದ್ದ. ಯಾವುದೇ ಅಡ್ಡಿ-ಆತಂಕವಿಲ್ಲದೆ ಮಗನಿಗೆ ಒಳ್ಳೆಯ ಜೀವನ ಸಿಗಲೆಂದು ಆತನ ತಾಯಿಯೂ ದೇವರಲ್ಲಿ ಬೇಡಿಕೊಂಡಿದ್ದರು. ಆದರೆ, ನಿನ್ನೆ ರಾತ್ರಿ ಆ ಯುವಕ ದುರಂತ ಅಂತ್ಯಕಂಡಿದ್ದಾನೆ.
ರಾಯಚೂರು ತಾಲೂಕಿನ ಮರ್ಚಡ್ ಗ್ರಾಮದ ತಾಯಪ್ಪ(26) ಮೃತ ದುರ್ದೈವಿ. ನಿನ್ನೆ ರಾತ್ರಿ ವಿದ್ಯುತ್ ಇಲ್ಲದ ಕಾರಣಕ್ಕೆ ಸೆಖೆಯೆಂದು ಮನೆಯ ಹೊರಗೆ ಮಲಗುವುದಾಗಿ ಹೋಗಿದ್ದ. ದೇವಸ್ಥಾನದ ಬಳಿ ಕೆಲ ಹೊತ್ತು ಕುಳಿತ್ತಿದ್ದ ಎನ್ನಲಾಗಿದೆ. ಆದರೆ ಆ ರಾತ್ರಿಯೇ ಮನೆ ಬಾಗಿಲ ಸಮೀಪದಲ್ಲೇ ಕಿಡಿಗೇಡಿಗಳು ಆತನ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಸುದ್ದಿ ತಿಳಿಯುತ್ತಿದ್ದ ಸ್ಥಳಕ್ಕೆ ಬಂದ ರಾಯಚೂರು ಗ್ರಾಮೀಣ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಗನನ್ನು ಕಳೆದುಕೊಂಡ ತಾಯಿಯ ಆಕ್ರಂದನ ಮುಗಿಲು ಮುಟ್ಟಿತ್ತು.
ಗಂಡನ ಅಂತ್ಯಸಂಸ್ಕಾರ ನೆರವೇರುತ್ತಿದ್ದಂತೆ ಸಾವಿನ ಮನೆಯ ಕದ ತಟ್ಟಿದ ಪತ್ನಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

ಕ್ಲೋಸ್ ಡೋರ್​ ಮೀಟಿಂಗ್​ನಲ್ಲಿ ರೋಹಿಣಿ ಸಿಂಧೂರಿಗೆ ಹಿಗ್ಗಾಮುಗ್ಗಾ ತರಾಟೆ! ಮೌನವಾಗಿಯೇ ಹೊರಟ ಡಿಸಿ

ಕರೊನಾಗೆ ಒಂದೇ ದಿನ ತಾಯಿ-ಮಗ ಬಲಿ! ಒಂದೇ ಚಿತೆಯಲ್ಲಿ ಇಬ್ಬರ ಅಂತ್ಯಸಂಸ್ಕಾರ

ಮಹಾವಂಚಕಿಗೆ ಸಾಥ್ ಕೊಟ್ಟ ಸ್ಯಾಂಡಲ್​ವುಡ್​ ನಟ? ಸಾವಿರಾರು ಕೋಟಿ ರೂ. ರಹಸ್ಯ ಬಯಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + twelve =
Remember me
