ಬೆಂಗಳೂರು:ಪ್ರೀತಿಸಿದ ಯುವತಿಯನ್ನು ಉಸಿರುಗಟ್ಟಿಸಿ ಯುವಕ ಕೊಲೆಗೈದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಆಕಾಂಕ್ಷಾ ಕೊಲೆಯಾದ ಯುವತಿ. ಈಕೆ ಹೈದ್ರಾಬಾದ್ ಮೂಲದ ನಿವಾಸಿಯಾಗಿದ್ದಾರೆ. ಅರ್ಪಿತ್ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.
ಆಕಾಂಕ್ಷಾ ಮತ್ತು ಅರ್ಪಿತ್ ಇಬ್ಬರೂ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರೂ ಒಟ್ಟಿಗೆ ವಾಸ ಮಾಡುತ್ತಿದ್ದರು. ಆದ್ರೆ ಇತ್ತೀಚೆಗೆ ಇಬ್ಬರ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು. ಇಬ್ಬರೂ ಕೂಡ ಬೇರೆಯಾಗ್ಬೇಕು ಅಂತಾ ಅಂದುಕೊಂಡಿದ್ದರು.
ಇಬ್ಬರ ಮಧ್ಯೆ ಮತ್ತೆ ಗಲಾಟೆಯಾಗಿದೆ. ಅರ್ಪಿತ್ ಆಕಾಂಕ್ಷಾಳ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿ ನಂತರ ನೇಣು ಹಾಕಿಕೊಂಡಿರೋ ರೀತಿ ಬಿಂಬಿಸಲು ಯತ್ನಿಸಿದ್ದಾನೆ. ಆದರೆ ಯುವತಿಯ ಮೃತದೇಹ ಫ್ಯಾನ್ ಗೆ ಕಟ್ಟೋಕೆ‌ ಆಗದೆ ನೆಲದ ಮೇಲೆ ಮೃತದೇಹ ಬಿಟ್ಟು ಎಸ್ಕೇಪ್ ಆಗಿದ್ದಾನೆ.
ಮತ್ತೋರ್ವ ರೂಮ್‌ಮೇಟ್ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಜೀವನ್ ಭೀಮಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪ: WFI ಅಧ್ಯಕ್ಷರ ನಿವಾಸಕ್ಕೆ ದೆಹಲಿ ಪೊಲೀಸರ ಭೇಟಿ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:9 + eleven =
Remember me
