ಮಂಗಳೂರು:ಸಹಾಯ ಮಾಡುವ ನೆಪದಲ್ಲಿ ಆಸ್ಪತ್ರೆಯಲ್ಲೇ ರೋಗಿಯ ಅತ್ಯಾಚಾರ ಮಾಡಿದ ಆರೋಪಿಯನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ:ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಭರ್ಜರಿ ಡ್ಯಾನ್ಸ್‌ ಮಾಡಿದ ಸಿಎಂ ಮಮತಾ!; ವಿಡಿಯೋ ವೈರಲ್
ಕಾಸರಗೋಡು ಜಿಲ್ಲೆಯ ಹೊಸದುರ್ಗ ಪುಲ್ಲೂರು ಗ್ರಾಮದ ನಿವಾಸಿ ಸುಜಿತ್ ಬಂಧಿತ ಆರೋಪಿ. ಪೈಲ್ಸ್ ನಿಂದ ಬಳಲುತ್ತಿದ್ದ ಕಾಸರಗೋಡು ಮೂಲದ ಮಹಿಳೆ ಚಿಕಿತ್ಸೆ ಪಡೆಯಲೆಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಆರೋಪಿ ಸುಜಿತ್‌ನೊಂದಿಗೆ ಬಂದಿದ್ದರು. ಆಸ್ಪತ್ರೆಗೆ ಬಂದಿದ್ದ ಸುಜಿತ್ ಬಲವಂತವಾಗಿ ಮಹಿಳೆಯ ಬಟ್ಟೆಗಳನ್ನು ತೆಗೆದು ಅತ್ಯಾಚಾರ ಮಾಡಿ ಆಕೆಯ ನಗ್ನ ಫೋಟೋಗಳನ್ನು ಸೆರೆ ಹಿಡಿದಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.
ನಗ್ನ ಫೋಟೋಗಳನ್ನು ಆಕೆಗೆ ತೋರಿಸಿದ ಸುಜಿತ್ ಮತ್ತೆ ಮಂಗಳೂರಿಗೆ ಬರುವಂತೆ ಒತ್ತಾಯಿಸಿ ಕರೆಸಿದ್ದ. ಮಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ರೂಮ್ ಬುಕ್ ಮಾಡಿದ್ದು ಅಲ್ಲಿಯೂ ಹೆದರಿಸಿ, ಅತ್ಯಾಚಾರ ಮಾಡಿದ್ದಾನೆ.
ಈ ವೇಳೆಯೂ ನಗ್ನ ಫೋಟೋಗಳನ್ನು ತೆಗೆದುಕೊಂಡಿದ್ದ. ಮಹಿಳೆ ಮೇ 8ರಿಂದ 10ರವರೆಗೆ ಮತ್ತೊಂದು ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಈ ವೇಳೆ ಅಲ್ಲಿಗೂ ಬಂದಿದ್ದ ಆರೋಪಿ, ಬಲವಂತವಾಗಿ ಅತ್ಯಾಚಾರ ಮಾಡಿದ್ದಾನೆ. ವಿಚಾರ ಬಹಿರಂಗಪಡಿಸದಂತೆ ಬೆದರಿಕೆ ಹಾಕಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಪ್ರಕರಣ ದಾಖಲಿಸಿರುವ ಕದ್ರಿ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಶ್ರೀನಗರ: ಸೇನಾ ಸಿಬ್ಬಂದಿ ಥಳಿತ, ನಾಲ್ವರು ಪೊಲೀಸರಿಗೆ ಗಂಭೀರ ಗಾಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − three =
Remember me
