ಬೆಂಗಳೂರು: ಬೆಳಗಾವಿಯಲ್ಲಿ ಆಗಸ್ಟ್ 17. ಶನಿವಾರದಂದು ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯಕಾರಣಿ ಸಭೆ ನಡೆಸಲು ತಿರ್ಮಾನಿಸಲಾಗಿದೆ ಎಂದು ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ತಿಳಿಸಿದ್ದಾರೆ.
ಬೆಳಗಾವಿ ನಗರದ ಮಹಂತ ಭವನದಲ್ಲಿ ಸಭೆ ಆಯೋಜಿಸಲಾಗಿದೆ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಪಕ್ಷದ ರಾಜ್ಯ ಉಸ್ತುವಾರಿ ಹಾಗೂ ದೆಹಲಿಯ ಶಾಸಕ ದಿಲೀಪ್ ಪಾಂಡೆ , ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ ಸೇರಿದಂತೆ ರಾಜ್ಯ ಕಾರ್ಯಕಾರಣಿ ಸಮಿತಿಯ ಸದಸ್ಯರುಗಳು ಭಾಗವಹಿಸಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ಈ ಸಭೆಯಲ್ಲಿ ಅತಿವೃಷ್ಟಿ ಹಾನಿ ,ಗ್ಯಾರಂಟಿ ಯೋಜನೆಗಳು, ಜೆ ಸಿ ಬಿ ಪಕ್ಷಗಳ ಹೊಂದಾಣಿಕೆ ರಾಜಕೀಯ, ಮುಂಬರುವ ಜಿ.ಪಂ – ತಾ. ಪಂ, ಬಿಬಿಎಂಪಿ, ನಗರ ಸ್ಥಳೀಯ ಸಂಸ್ಥೆ ಚುನಾವಣೆಗಳ ಕುರಿತು ಹಾಗೂ ರಾಜ್ಯದ ಅನೇಕ ಜ್ವಲಂತ ವಿಚಾರಗಳ ಬಗ್ಗೆ ನಿರ್ಣಯ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + fifteen =
Remember me
